ವಿಧಾನಸಭೆ, ಪರಿಷತ್ನಲ್ಲಿ ಸಿದ್ದರಾಮಯ್ಯ ಮತ್ತು ಎಸ್.ಆರ್. ಪಾಟೀಲ್ ವಿಪಕ್ಷ ನಾಯಕರು; ಮೂಲ ಕಾಂಗ್ರೆಸ್ಸಿಗರಿಗೆ ಹಿನ್ನಡೆ

ಅಪಾರ ಸಂಖ್ಯೆಯ ಸಿದ್ದರಾಮಯ್ಯ ಬೆಂಬಲಿಗರು ಪಕ್ಷದ ವಿರುದ್ಧ ಮುನಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಮತ್ತೆ ಸಿದ್ದರಾಮಯ್ಯ ಅವರ ಹೆಸರನ್ನೇ ಅಂತಿಮಗೊಳಿಸಿರುವ ಸಾಧ್ಯತೆ ಇದೆ.

news18-kannada
Updated:October 9, 2019, 8:28 PM IST
ವಿಧಾನಸಭೆ, ಪರಿಷತ್ನಲ್ಲಿ ಸಿದ್ದರಾಮಯ್ಯ ಮತ್ತು ಎಸ್.ಆರ್. ಪಾಟೀಲ್ ವಿಪಕ್ಷ ನಾಯಕರು; ಮೂಲ ಕಾಂಗ್ರೆಸ್ಸಿಗರಿಗೆ ಹಿನ್ನಡೆ
ಮಾಜಿ ಸಿಎಂ ಸಿದ್ದರಾಮಯ್ಯ
  • Share this:
ನವದೆಹಲಿ(ಅ. 09): ಕಾಂಗ್ರೆಸ್​ನೊಳಗೆ ನಡೆಯುತ್ತಿದ್ದ ಪವರ್ ಸ್ಟ್ರಗಲ್​ಗೆ ಇಂದು ತಾರ್ಕಿಕ ಅಂತ್ಯ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಕೊಂಡಿದೆ. ಸಿದ್ದರಾಮಯ್ಯ ಹಿಡಿದು ಕೂತಿದ್ದ ಪಟ್ಟಿಗೆ ಕೈ ಕಮಾಂಡ್ ಕೊನೆಗೂ ಬಗ್ಗಿದೆ. ನಾಳೆಯಿಂದ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಸಿದ್ದರಾಮಯ್ಯನೇ ಸಮರ್ಥ ಎಂಬುದು ಹೈಕಮಾಂಡ್​ನ ಅಭಿಪ್ರಾಯವಿದ್ದಂತಿದೆ. ಸಿದ್ದರಾಮಯ್ಯ ಅವರು ವಿಪಕ್ಷ ನಾಯಕನಾಗಿ ಆಯ್ಕೆಯಾಗಿರುವುದನ್ನು ಕರ್ನಾಟಕ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಅಚ್ಚರಿ ಎಂದರೆ, ವಿಧಾನ ಪರಿಷತ್ ವಿಪಕ್ಷ ನಾಯಕನ ಸ್ಥಾನ ಕೂಡ ಸಿದ್ದರಾಮಯ್ಯರ ಆಪ್ತರಿಗೆ ಸಿಕ್ಕಿದೆ. ಸಿದ್ದರಾಮಯ್ಯ ಸೂಚನೆಯಂತೆ ಎಸ್.ಆರ್. ಪಾಟೀಲ್ ಅವರನ್ನು ಪರಿಷತ್ ವಿಪಕ್ಷ ನಾಯಕನಾಗಿ ಹೈಕಮಾಂಡ್ ಆಯ್ಕೆ ಮಾಡಿದೆ.

ಇದನ್ನೂ ಓದಿ: ವಿಧಾನಸಭೆ ಕಲಾಪಕ್ಕೆ ಮಾಧ್ಯಮದವರಿಗೆ ನಿರ್ಬಂಧ ಇನ್ನು ಅಧಿಕೃತ; ಬಿಎಸ್​ವೈ ಮಾತಿಗೂ ಕಿವಿಗೊಡದ ಸಭಾಧ್ಯಕ್ಷ ಕಾಗೇರಿ

ಇದರೊಂದಿಗೆ ಕಾಂಗ್ರೆಸ್ ಪಾಳಯದಲ್ಲಿ ಸಿದ್ದರಾಮಯ್ಯ ಅವರೇ ಬಿಗ್ ಬಾಸ್ ಆದಂತಾಗಿದೆ. ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಲು ಪ್ರಯತ್ನಿಸುತ್ತಿದ್ದ ಮೂಲ ಕಾಂಗ್ರೆಸ್ಸಿಗರೇ ಈಗ ಮೂಲೆಗುಂಪಾಗುವಂತಾಗಿದೆ.

ಇದೇ ವೇಳೆ, ಸಿದ್ದರಾಮಯ್ಯ ಮನವಿ ಮೇರೆಗೆ ಅವರನ್ನು ಸಿಡಬ್ಲ್ಯೂಸಿ ಸದಸ್ಯ ಸ್ಥಾನದಿಂದ ವಿಮುಕ್ತಿಗೊಳಿಸಲಾಗಿದೆ ಎಂದೂ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.

ನಾಳೆಯಿಂದ ರಾಜ್ಯದಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅಧಿವೇಶನಕ್ಕೆ ಆಡಳಿತರೂಢ ಬಿಜೆಪಿ ಸರ್ವ ಸನ್ನದ್ಧವಾಗಿದೆ. ಆದರೆ, ಅಧಿಕೃತ ವಿರೋಧ ಪಕ್ಷವಾದ ಕಾಂಗ್ರೆಸ್​ನಲ್ಲಿ ಕಳೆದ ಎರಡು ತಿಂಗಳಿನಿಂದ ಗೊಂದಲ ಮನೆ ಮಾಡಿದ್ದು, ಯಾರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡುವುದು ಎಂಬುದೇ ಕಾಂಲಗ್ರೆಸ್ ಹೈಕಮಾಂಡ್ಗೆ ದೊಡ್ಡ ಪ್ರಶ್ನೆಯಾಗಿ ಕಾಡಿತ್ತು. ಅಲ್ಲದೆ, ಇದು ಕೈ ಹಿರಿಯ ನಾಯಕರಿಗೆ ಸವಾಲಿನ ಕೆಲಸವೂ ಆಗಿತ್ತು.

ಇದನ್ನೂ ಓದಿ: ಕೇಂದ್ರ ನೀಡಿರುವ ನೆರೆ ಪರಿಹಾರ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎಂಬಂತಾಗಿದೆ; ಹೆಚ್.ಕೆ. ಪಾಟೀಲ್ ವ್ಯಂಗ್ಯಒಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ತನನ್ನೇ ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಮಾಡುವಂತೆ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದರೆ, ಮತ್ತೊಂದೆಡೆ ಮಾಜಿ ಸಚಿವರುಗಳಾದ ಹೆಚ್.ಕೆ. ಪಾಟೀಲ್ ಹಾಗೂ ಜಿ. ಪರಮೇಶ್ವರ್ ನಡುವೆಯೂ ಮುಸುಕಿನ ಗುದ್ದಾಟ ನಡೆದೇ ಇತ್ತು.

ಸಿದ್ದರಾಮಯ್ಯನವರಿಗೆ ಪಕ್ಷದ ಮೇಲಿನ ಹಿಡಿತವನ್ನು ಸಡಿಲಿಸುವಂತೆ ಮಾಡಲು ಹೈಕಮಾಂಡ್ ಸಹ ಸಿದ್ದು ಬದಲು ಬೇರೆ ನಾಯಕನಿಗೆ ಈ ಜವಾಬ್ದಾರಿ ನೀಡಲು ಮನಸ್ಸು ಮಾಡಿತ್ತು. ನಿನ್ನೆಯವರೆಗೆ ಕಾಂಗ್ರೆಸ್ ಹೈಕಮಾಂಡ್ ಅಂಗಳದಲ್ಲಿ ಈ ಸ್ಥಾನಕ್ಕೆ ಹೆಚ್.ಕೆ. ಪಾಟೀಲ್ ಹೆಸರು ಚಾಲ್ತಿಯಲ್ಲಿತ್ತು.

ಆದರೆ, ಪರಮೇಶ್ವರ್ ಸಹ ಹೈಕಮಾಂಡ್ ಮೇಲೆ ಈ ಸ್ಥಾನ ತನಗೆ ನೀಡುವಂತೆ ಒತ್ತಡ ಹೇರಿದ್ದರು. ಆದರೆ, ಅಪಾರ ಸಂಖ್ಯೆಯ ಸಿದ್ದರಾಮಯ್ಯ ಬೆಂಬಲಿಗರು ಪಕ್ಷದ ವಿರುದ್ಧ ಮುನಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಕಾಂಗ್ರೆಸ್ ಹೈಕಮಾಂಡ್ ಮತ್ತೆ ಸಿದ್ದರಾಮಯ್ಯ ಅವರ ಹೆಸರನ್ನೇ ಅಂತಿಮಗೊಳಿಸಿದೆ.

(ವರದಿ: ಧರಣೀಶ್ ಬೂಕನಕೆರೆ)

ಕ್ಷಣಕ್ಷಣದ ಬ್ರೇಕಿಂಗ್ ನ್ಯೂಸ್ ಅಲರ್ಟ್​ಗಾಗಿ ನಿಮ್ಮ ನ್ಯೂಸ್18 ಕನ್ನಡವನ್ನು ಫೇಸ್​ಬುಕ್ ಮೆಸೆಂಜರ್​ನಲ್ಲಿ ಸಬ್ಸ್​ಕ್ರೈಬ್ ಮಾಡಿ.
First published: October 9, 2019, 8:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading