‘ಕೆಪಿಸಿಸಿ ಅಧ್ಯಕ್ಷ ಆಯ್ಕೆಗೆ ದಿನಾಂಕ ನಿಗದಿ‘: ಕಾಂಗ್ರೆಸ್​​ ಹಿರಿಯ ನಾಯಕ ಕೆ.ಬಿ ಕೋಳಿವಾಡ

ಇನ್ನು, ಕೆಪಿಸಿಸಿ ಪದಾಧಿಕಾರಿಗಳ ನೇಮಕವಾಗಬೇಕಿದೆ. ಈ ಬಗ್ಗೆ ಹೈಕಮಾಂಡ್ ಗೊಂದಲದಲ್ಲಿದೆ. ಎಐಸಿಸಿ ಅಧ್ಯಕ್ಷರು ಯಾರಾಗಬೇಕು? ಎಂಬ ಗೊಂದಲವಿದೆ. ಹೀಗಾಗಿ ಆದಷ್ಟು ಬೇಗ ಮಾರ್ಚ್​​ನಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ ಬಹುತೇಕ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೆಬಿ ಕೋಳಿವಾಡ

ಕೆಬಿ ಕೋಳಿವಾಡ

 • Share this:
  ಬೆಂಗಳೂರು(ಫೆ.24): ರಾಜ್ಯದಲ್ಲಿ 15 ಕ್ಷೇತ್ರಗಳ ಉಪಚುನಾವಣೆ ಮುಕ್ತಾಯವಾಯ್ತು. ಬರೋಬ್ಬರಿ 12 ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬೀಗಿತು. ಇನ್ನು ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡ ಗೆದ್ದರೆ, ಇನ್ನೆರಡು ಕ್ಷೇತ್ರಗಳಾದ ಶಿವಾಜಿನಗರ ಹಾಗು ಹುಣಸೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯ್ತು. ಈ ಸೋಲಿನಿಂದ ಕಂಗೆಟ್ಟ ಕಾಂಗ್ರೆಸ್ ನಾಯಕರು, ಸೋಲಿನ ನೈತಿಕ ಹೊಣೆ ಹೊತ್ತು ಪಟ್ಟದಿಂದ ಕೆಳಗಿಳಿಯುವ ಮನಸ್ಸು ಮಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷ ಹಾಗು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು. ಇನ್ನು ಸಿದ್ದರಾಮಯ್ಯ ಆಪ್ತ ಬಳಗದಲ್ಲೇ ಗುರುತಿಸಿಕೊಂಡಿರುವ ದಿನೇಶ್ ಗುಂಡೂರಾವ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ರಾಜೀನಾಮೆ ನೀಡಿ ಬರೋಬ್ಬರಿ ನಾಲ್ಕು ತಿಂಗಳಾಯ್ತು. ಅಂದಿನಿಂದಲೂ ರಾಜೀನಾಮೆ ಅಂಗೀಕಾರ, ನೂತನ ಅಧ್ಯಕ್ಷರ ನೇಮಕಕ್ಕೆ ಭಾರೀ ಕಸರತ್ತು ನಡೆಯುತ್ತಿದೆ. ಸಭೆ ಮೇಲೆ ಸಭೆ ಮಾಡಿದರು ನೇಮಕದ ಆದೇಶ ಮಾಡಲು ಸಾಧ್ಯವಾಗ್ತಿಲ್ಲ. ಕಾಂಗ್ರೆಸ್ ಹೈಕಮಾಂಡ್‌ನ ಈ ಕ್ರಮ ಕಾಂಗ್ರೆಸ್ ಕಾರ್ಯಕರ್ತರಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಅದರಲ್ಲಿ ಪ್ರಮುಖವಾದುದು ತಡವಾಗ್ತಿರೋದು ಯಾಕೆ ಅನ್ನುವುದು.

  ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಯಾರಿಗೆ ಕೊಡಬೇಕು ಎಂಬ ಬಗ್ಗೆ ಮಹತ್ವದ ನಿರ್ಧಾರಕ್ಕೆ ಬರಲು ಹೈಕಮಾಂಡ್ ಪರದಾಡುತ್ತಿದೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಗೂ ಎಂ.ಬಿ ಪಾಟೀಲ್ ನಡುವೆ ತೀವ್ರ ಹಣಾಹಣಿ ಏರ್ಪಟ್ಟಿದ್ದು, ಯಾರಿಗೆ ಪಕ್ಷದ ಹೊಣೆಗಾರಿಕೆ ವಹಿಸಿದರೆ ಅನುಕೂಲಕರ ಎನ್ನುವ ಬಗ್ಗೆಯೂ ಕೂಲಂಕಷವಾಗಿ ಅಧ್ಯಯನ ನಡೆಸಲು ಸಮಿತಿಯಿಂದ ವರದಿ ಪಡೆದಿತ್ತು. ಆದರೂ, ಇಲ್ಲಿಯವರೆಗೂ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯ ಪ್ರಕ್ರಿಯೆ ಮುಗಿದಿಲ್ಲ. ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಯಾರಾಗಬೇಕು ಎಂಬ ಗೊಂದಲಕ್ಕೆ ತೆರೆ ಎಳೆಯಲು ಹೈಕಮಾಂಡ್ ನಿರ್ಧರಿಸಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಆಯ್ಕೆಗೆ ದಿನಾಂಕ ನಿಗದಿ ಮಾಡಲಾಗಿದೆ. ಈ ಬಗ್ಗೆ ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಮಾಹಿತಿ ನೀಡಿದ್ದು, 'ಮಾರ್ಚ್ ಮೊದಲ ವಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ' ಎಂದಿದ್ದಾರೆ.

  ಇದನ್ನೂ ಓದಿ: ಕೆಪಿಸಿಸಿ ಪಟ್ಟಕ್ಕಾಗಿ ಡಿಕೆಶಿ, ಎಂಬಿ ಪಾಟೀಲ್​​ ನಡುವೇ ತೀವ್ರ ಪೈಪೋಟಿ: ಅಧ್ಯಕ್ಷರ ನೇಮಕಕ್ಕೆ ವಿಳಂಬ ಯಾಕೆ ಗೊತ್ತೇ?

  ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಕಾಂಗ್ರೆಸ್‌ನ ಹಿರಿಯ ನಾಯಕ ಕೆ.ಬಿ.ಕೋಳಿವಾಡ, ಕೆಪಿಸಿಸಿ ಅಧ್ಯಕ್ಷರ ನೇಮಕ ತಡವಾಗುತ್ತಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ಆದಷ್ಟು ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರ ನೇಮಕ ಮಾಡದೇ ಇದ್ದರೆ, ಪಕ್ಷ ಮತ್ತಷ್ಟು ಸೊರಗುತ್ತದೆ' ಎಂದರು.

  ಇನ್ನು, ಕೆಪಿಸಿಸಿ ಪದಾಧಿಕಾರಿಗಳ ನೇಮಕವಾಗಬೇಕಿದೆ. ಈ ಬಗ್ಗೆ ಹೈಕಮಾಂಡ್ ಗೊಂದಲದಲ್ಲಿದೆ. ಎಐಸಿಸಿ ಅಧ್ಯಕ್ಷರು ಯಾರಾಗಬೇಕು? ಎಂಬ ಗೊಂದಲವಿದೆ. ಹೀಗಾಗಿ ಆದಷ್ಟು ಬೇಗ ಮಾರ್ಚ್​​ನಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ ಬಹುತೇಕ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  ಸದ್ಯ ಹೈಕಮಾಂಡ್ ಸಮಿತಿ ವರದಿ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದ ಸೋನಿಯಾ ಗಾಂಧಿ, ಅಂತಿಮವಾಗಿ ಡಿ.ಕೆ ಶಿವಕುಮಾರ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಒಲವು ತೋರಿಸಿದ್ದರು. ಆದರೆ ಸಿದ್ದರಾಮಯ್ಯ ಬಿಜೆಪಿ ಲಿಂಗಾಯತರನ್ನು ಓಲೈಸಿಕೊಂಡು ರಾಜ್ಯದಲ್ಲಿ ರಾಜಕಾರಣ ಮಾಡುತ್ತಿದೆ. ಹಾಗಾಗಿ ನಾವು ಲಿಂಗಾಯತರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಿಸಿದರೆ ಬಿಜೆಪಿಗೆ ಸೆಡ್ಡು ಹೊಡೆಯಲು ಅನುಕೂಲ ಎನ್ನುವ ಮೂಲಕ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಆಯ್ಕೆಗೆ ಟ್ರಬಲ್ ಆಗಿದ್ದಾರೆ.
  First published: