ಕಾಂಗ್ರೆಸ್ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲ ನೀಡುವ ಕೆಲಸ ಮಾಡುತ್ತಿದೆ; ಶ್ರೀರಾಮುಲು ಆರೋಪ

ಹುಬ್ಬಳ್ಳಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಹಿಂದೆ ಯಾರಿದ್ದಾರೆ? ಎಂಬ ಕುರಿತೂ ಸಹ ತನಿಖೆ ನಡೆಯುತ್ತಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಸಚಿವ ಶ್ರೀರಾಮುಲು ಹಾಗೂ ಮಾಜಿ ಸಿಎಂ 
 ಸಿದ್ದರಾಮಯ್ಯ

ಸಚಿವ ಶ್ರೀರಾಮುಲು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ

 • Share this:
  ಕೊಪ್ಪಳ (ಫೆಬ್ರವರಿ 20); ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ಪಿಎಫ್ಐ ಮತ್ತು ಎಸ್​ಡಿಪಿ ಸಂಘಟನೆಗಳಿಗೆ ಕಾಂಗ್ರೆಸ್ ನಾಯಕರು ಬೆಂಬಲ ನೀಡುವ ಮೂಲಕ ಭಯೋತ್ಪಾಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಕಿಡಿಕಾರಿದ್ದಾರೆ.

  ಇಂದು ಕೊಪ್ಪಳದಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿರುವ ಶ್ರೀರಾಮುಲು, “ರಾಜ್ಯದಲ್ಲಿ ಪಿಎಫ್ಐ ಮತ್ತು ಎಸ್​ಡಿಪಿ ಸಂಘಟನೆಗಳು ಭಯೋತ್ಪಾದಕ ಕೆಲಸಗಳಲ್ಲಿ ತೊಡಗಿವೆ. ಬಿಜೆಪಿ ನಾಯಕರ, ಕಾರ್ಯಕರ್ತರ ಮೇಲೆ ಅಲ್ಲಲ್ಲಿ ದಾಳಿಗಳನ್ನು ಸಂಘಟಿಸುತ್ತಿವೆ. ಇವರಿಗೆ ಕಾಂಗ್ರೆಸ್ ನಾಯಕರು ಪರೋಕ್ಷವಾಗಿ ಸಹಾಯ ನೀಡುತ್ತಿದ್ದಾರೆ. ಭಯೋತ್ಪಾದಕ ಕೆಲಸಕ್ಕೆ ಬೆಂಬಲ ನೀಡುತ್ತಿದ್ದಾರೆ. ಅಲ್ಲದೆ, ತನ್ನ ವೋಟ್ ಬ್ಯಾಂಕ್ ಅನ್ನು ಗಟ್ಟಿಗೊಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಹೀಗೆ ಮಾಡುತ್ತಿದೆ.

  ಇನ್ನೂ ಹುಬ್ಬಳ್ಳಿಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಹಿಂದೆ ಯಾರಿದ್ದಾರೆ? ಎಂಬ ಕುರಿತೂ ಸಹ ತನಿಖೆ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

  ಇದೇ ಸಂದರ್ಭದಲ್ಲಿ ಮಂಗಳೂರು ಗೋಲಿಬಾರ್ ಪ್ರಕರಣದ ಕುರಿತು ಮಾತನಾಡಿರುವ ಅವರು, “ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ, ಅದರ ಅಗತ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

  ಇದನ್ನೂ ಓದಿ : ನಾವು ಆಪರೇಷನ್ ಕಮಲ ನಿಲ್ಲಿಸಿದ್ದೇವೆ, ಹಾಗೆಂದು ಪಕ್ಷಕ್ಕೆ ಬರುವವರನ್ನು ಬೇಡ ಅನ್ನಲ್ಲ; ನಳಿನ್ ಕುಮಾರ್ ಕಟೀಲ್

   
  First published: