• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ಬೆಳಗಾವಿ ಲೋಕಸಭಾ ಉಪಚುನಾವಣೆ: ವರುಣನ ಅಬ್ಬರದ ನಡುವೆ ಕಾಂಗ್ರೆಸ್ ಭರ್ಜರಿ ಮತ ಭೇಟೆ- ಘಟಾನುಘಟಿ ನಾಯಕರು ಭಾಗಿ

ಬೆಳಗಾವಿ ಲೋಕಸಭಾ ಉಪಚುನಾವಣೆ: ವರುಣನ ಅಬ್ಬರದ ನಡುವೆ ಕಾಂಗ್ರೆಸ್ ಭರ್ಜರಿ ಮತ ಭೇಟೆ- ಘಟಾನುಘಟಿ ನಾಯಕರು ಭಾಗಿ

ಪ್ರಚಾರ ಸಭೆಯಲ್ಲಿ ಕಾಂಗ್ರೆಸ್​ ನಾಯಕರು

ಪ್ರಚಾರ ಸಭೆಯಲ್ಲಿ ಕಾಂಗ್ರೆಸ್​ ನಾಯಕರು

ವರುಣನ ಅಬ್ಬರದ ನಡುವೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯ ನಡೆಯಿತು. ಈ ವೇಳೆಯಲ್ಲಿ ಅನೇಕ ರಾಜ್ಯ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.

  • Share this:

ಬೆಳಗಾವಿ (ಏ. 10): ಇದೇ ತಿಂಗಳ 17ಕ್ಕೆ ಬೆಳಗಾವಿ ಲೋಕಸಭಾ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ನಡುವೆ ನೇರಾ ನೇರಾ ಪೈಪೋಟಿ ನಡೆಯುತ್ತಿದ್ದು, ಘಟಾನುಘಟಿ ನಾಯಕರು ಪ್ರಚಾರದಲ್ಲಿ ಭಾಗಿಯಾಗುತ್ತಿದ್ದಾರೆ. ಇಂದು ವರುಣನ ಅಬ್ಬರದ ನಡುವೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪರವಾಗಿ ಪ್ರಚಾರ ಕಾರ್ಯ ನಡೆಯಿತು. ಈ ವೇಳೆಯಲ್ಲಿ ಅನೇಕ ರಾಜ್ಯ ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು. ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುವ ಮೂಲಕ ಆಕ್ರೋಶವನ್ನು ಹೊರ ಹಾಕಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರವಾಗಿ ಇಂದು ಅನೇಕ ಕಾಂಗ್ರೆಸ್ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಇಂದು ಸುಳೇಬಾವಿ ಗ್ರಾಮದಲ್ಲಿ ಬೆಳಗಾವಿ ಮತಕ್ಷೇತ್ರದಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಯಿತು. ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಸಚಿವರಾದ ಎಂ ಬಿ ಪಾಟೀಲ್, ರಾಮಲಿಂಗಾರೆಡ್ಡಿ, ಆರ್ ವಿ ದೇಶಪಾಂಡೆ, ಮಾಜಿ ಕೇಂದ್ರ ಸಚಿವ ಕೆ ಎಚ್ ಮುನಿಯಪ್ಪ ಹಾಗೂ ಸ್ಥಳೀಯ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಅನೇಕ ನಾಯಕರು ಪಾಲ್ಗೊಂಡಿದ್ದರು.


ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣದ ವೇಳೆಯಲ್ಲಿ ವರುಣ ಅಬ್ಬರ ಆರಂಭವಾಯಿತು. ಎಲ್ಲರೂ ಕಾರ್ಯಕ್ರಮದಿಂದ ಹೋಗಲು ಕಾರ್ಯಕರ್ತರು ಮುಂದಾಗಿದ್ದು, ಆದರೇ ಸ್ಥಳೀಯ ಶಾಸಕಿ ಹೆಬ್ಬಾಳ್ಕರ್ ಮಳೆಯಲ್ಲಿ ಓಡಾಡಿ ಕಾರ್ಯಕ್ರಮದಿಂದ ಹೋಗದಂತೆ ಮನವಿಯನ್ನು ಮಾಡಿಕೊಂಡರು. ನಂತರ ಕೈಯಲ್ಲಿ ಖುರ್ಚಿಯನ್ನು ಹಿಡಿದುಕೊಂಡು ಕಾರ್ಯಕರ್ತರು ನಿಂತುಕೊಂಡರು. ಈ ವೇಳೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿಯನ್ನು ನಡೆಸಿದರು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅನೇಕ ವೈಫಲ್ಯಗಳ ಬಗ್ಗೆ ಮಾತನಾಡಿದರು.


ಇದನ್ನು ಓದಿ: ಸ್ವಾಭಿಮಾನಿ ಸೆಲ್ವಮ್ಮನ ಬದುಕಿಗೆ ಬಹುಪರಾಕ್ ಎಂದ ದಿಗ್ಗಜ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್.!!


ಇದಕ್ಕೂ ಮೊದಲು ಬೈಲಹೊಂಗದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಕಾಂಗ್ರೆಸ್ ಪಕ್ಷ ನಡೆಸಿತು. ಸ್ಥಳೀಯ ಶಾಸಕ ಮಹಾಂತೇಶ ಕೌಜಲಗಿ ಸೇರಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ವೇಳೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದ್ದರು. ಧೀಢೀರ್ ಎಂದು ರಸಗೊಬ್ಬರ ಬೆಲೆಯಲ್ಲಿ ಏರಿಕೆಯಾಗಿದ್ದು, ಇದಕ್ಕೆ ಕಾರಣ ಕೇಂದ್ರ ಸರ್ಕಾರ ನೀಡುತ್ತಿದ್ದ ಸಬ್ಸಿಡಿಯನ್ನು ವಾಪಸ್ ಪಡೆದಿದೆ ಎಂದು ಸಿದ್ದರಾಮಯ್ಯ ಹೇಳಿದ್ದರು.


ಸತೀಶ ಜಾರಕಿಹೊಳಿ ಭಾರತೀಯ ಸಂಸ್ಕೃತಿಯ ವಿರುದ್ಧವಿದ್ದಾರೆ ಎಂದು ಬಿಜೆಪಿ ರಾಜ್ಯುಸ್ತುವಾರಿ ಅರುಣ್ ಸಿಂಗ್ ಹೇಳಿದ್ದರು. ಇದಕ್ಕೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ, ಸತೀಶ ಜಾರಕಿಹೊಳಿ ಹೋರಾಟ ಮೌಢ್ಯದ ವಿರುದ್ಧವೇ ಹೊರತು ಸಂಸ್ಕೃತಿಯ ವಿರುದ್ಧ ಅಲ್ಲ ಎಂದರು. ಬಸವಣ್ಣನ ಸಿದ್ಧಾಂತವನ್ನು ಸತೀಶ ಜಾರಕಿಹೊಳಿ ಪಾಲಿಸುತ್ತಿದ್ದಾರೆ. ಅರುಣ್ ಸಿಂಗ್ ರಾಮಾಯಣ ಬರೆದು ಯಾರು ಎಂದು ಗೊತ್ತಿದೆಯಾ ಎಂದು ಟಾಂಗ್ ಕೊಟ್ಟರು.

Published by:Seema R
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು