ಇಂದಿನಿಂದ 2 ದಿನಗಳ ಮೈಸೂರು ಪ್ರವಾಸದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್

ಇಂದು ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಡಿಕೆಶಿ, ನಾಳೆ ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಹ ಸಲ್ಲಿಸಲಿದ್ದಾರೆ. ಈ ವೇಳೆ ಡಿಕೆಶಿಗೆ ಮೈಸೂರು ಭಾಗದ ಕೈ ಮುಖಂಡರು ಜೊತೆಯಾಗಲಿದ್ದಾರೆ.

Latha CG | news18-kannada
Updated:November 7, 2019, 2:58 PM IST
ಇಂದಿನಿಂದ 2 ದಿನಗಳ ಮೈಸೂರು ಪ್ರವಾಸದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್
ಡಿ.ಕೆ. ಶಿವಕುಮಾರ್
  • Share this:
ಮೈಸೂರು(ನ.07): ಮಾಜಿ ಸಚಿವ ಹಾಗೂ ಕಾಂಗ್ರೆಸ್​ ಮುಖಂಡ ಡಿಕೆಶಿ ಇಂದಿನಿಂದ ಎರಡು ದಿನ ಮೈಸೂರಿನಲ್ಲಿ ಪ್ರವಾಸ ಮಾಡಲಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯನವರ ಭದ್ರಕೋಟೆಯಲ್ಲಿ ಟ್ರಬಲ್​ ಶೂಟರ್​  ಶಕ್ತಿ ಪ್ರದರ್ಶನ ತೋರಲಿದ್ದಾರೆ. ಜೈಲಿನಿಂದ ಬಿಡುಗಡೆಯಾದ ಬಳಿಕ ಇದೇ ಮೊದಲ ಬಾರಿಗೆ ಡಿಕೆಶಿ ಮೈಸೂರಿಗೆ ತೆರಳುತ್ತಿದ್ದಾರೆ.

ಬೆಂಗಳೂರಿನಿಂದ ಶತಾಬ್ದಿ ರೈಲಿನಲ್ಲಿ ತೆರಳುವ ಡಿಕೆಶಿ ಇಂದು ಮಧ್ಯಾಹ್ನ 1 ಗಂಟೆಗೆ ಮೈಸೂರು ತಲುಪಲಿದ್ದಾರೆ. ಡಿಕೆಶಿಯನ್ನು ಅದ್ದೂರಿಯಾಗಿ ಸ್ವಾಗತ ಮಾಡಿಕೊಳ್ಳಲು ಸ್ಥಳೀಯ ಕಾಂಗ್ರೆಸ್ ಮುಖಂಡರು ಸಿದ್ಧರಾಗಿದ್ದಾರೆ. ಡಿಕೆ ಶಿವಕುಮಾರ್​ ಅವರನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಯವರೆಗೆ ಮೆರವಣಿಗೆ ಮಾಡಲಾಗುತ್ತದೆ. ಬಳಿಕ ಕಾಂಗ್ರೆಸ್​​ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ರಾಣಿಬೆನ್ನೂರು ಮತ್ತು ಹಿರೇಕೆರೂರು ಕ್ಷೇತ್ರಗಳಲ್ಲಿ ಸಿಎಂ ಬಿಎಸ್​​ವೈ ಅಬ್ಬರದ ಪ್ರಚಾರ

ಡಿಕೆ ಶಿವಕುಮಾರ್​ ಇಟ್ಟಿಗೆಗೂಡಿನಲ್ಲಿರುವ ತಮ್ಮ ಮಾವನ ಮಾವನ ಮನೆಗೆ ತೆರಳಲಿದ್ದಾರೆ. ನಂತರ ಸಂಜೆ 4 ಗಂಟೆಗೆ ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿಬ ಬಳಿಕ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ ನೀಡಲಿದ್ದಾರೆ. ಸುತ್ತೂರು ಶ್ರೀಗಳನ್ನು ಭೇಟಿ ಮಾಡಿ, ಬಳಿಕ ವಿಶೇಷ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ.

ಇಂದು ರಾತ್ರಿ ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಡಿಕೆಶಿ, ನಾಳೆ ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಹ ಸಲ್ಲಿಸಲಿದ್ದಾರೆ. ಈ ವೇಳೆ ಡಿಕೆಶಿಗೆ ಮೈಸೂರು ಭಾಗದ ಕೈ ಮುಖಂಡರು ಜೊತೆಯಾಗಲಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರ ರಚನೆ? ಇಂದು ರಾಜ್ಯಪಾಲರ ಭೇಟಿ

ನಿನ್ನೆ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿವಾಸಕ್ಕೆ ಡಿಕೆ ಬ್ರದರ್ಸ್ ಭೇಟಿ ನೀಡಿದ್ದರು. ಸದಾಶಿವನಗರದ ನಿವಾಸದಲ್ಲಿ ಎಸ್​ಎಂಕೆ ಜೊತೆ ಮಾತುಕತೆ ನಡೆಸಿದ್ದರು. ಜೈಲಿನಿಂದ ಬಿಡುಗಡೆಯಾದ ಬಳಿಕ ಭೇಟಿಯಾಗಿದ್ದು ಕುತೂಹಲ ಮೂಡಿಸಿದೆ.(ವರದಿ:ಪುಟ್ಟಪ್ಪ)

First published:November 7, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ