HOME » NEWS » State » CONGRESS LEADER ESHWAR KHANDRE SLAMS BJP GOVERNMENT ZP

ಬಿಜೆಪಿ ಅಧಿಕಾರದಲ್ಲಿ ಮುಂದುವರೆಯಲು ಲಾಯಕ್ಕಿಲ್ಲ: ಈಶ್ವರ್ ಖಂಡ್ರೆ ಕಿಡಿ

ಕಲಬುರ್ಗಿಯಲ್ಲಿ ನಾಳೆ ಕಾಂಗ್ರೆಸ್ ಜನಾಂದೋಲನ ಸಮಾವೇಶ ಆಯೋಜಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಅಜಯಸಿಂಗ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಎಸ್.ಆರ್.ಪಾಟೀಲ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸುತ್ತಿದ್ದಾರೆ.

news18-kannada
Updated:January 17, 2021, 8:17 PM IST
ಬಿಜೆಪಿ ಅಧಿಕಾರದಲ್ಲಿ ಮುಂದುವರೆಯಲು ಲಾಯಕ್ಕಿಲ್ಲ: ಈಶ್ವರ್ ಖಂಡ್ರೆ ಕಿಡಿ
Eshwar khandre
  • Share this:
ಕಲಬುರ್ಗಿ:  ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿ ಕಾರಿದ್ದಾರೆ. ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಈಶ್ವರ್ ಖಂಡ್ರೆ, ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿಯೇ ಆಡಳಿತ ನಡೆಸುತ್ತಿದ್ದರೂ ಒಂದೂ ಒಳ್ಳೆಯ ಕೆಲಸ ಮಾಡುತ್ತಿಲ್ಲ. ಬಿಜೆಪಿ ಅಧಿಕಾರದಲ್ಲಿ ಮುಂದುವರೆಯೋಕೆ ಲಾಯಕ್ಕಿಲ್ಲ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿಯಾಗಿದ್ದು, ರೈತರು ಗುಲಾಮರನ್ನಾಗಿಸಲು ಷಂಡ್ಯಂತ್ರ ನಡೆಸಿವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಆರೋಪಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಭೂ ಸುಧಾರಣೆ ಕಾನೂನುಗಳು ರೈತರಿಗೆ ಮರಣಶಾಸನವಾಗಲಿವೆ. ರೈತ ವಿರೋಧಿ ಕಾನೂನು ಖಂಡಿಸಿ ಕಾಂಗ್ರೆಸ್ ನಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತಿದೆ.

ಜನವರಿ 25 ರಂದು ಬೆಂಗಳೂರಿನಲ್ಲಿ ರಾಜಭವನ ಚಲೋ ಹೋರಾಟ ನಡೆಸಲಾಗುವುದು. ಸರ್ಕಾರ ಮೊಂಡುತನ ಬಿಟ್ಟು ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಖಂಡ್ರೆ ಆಗ್ರಹಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಆಹಾರ ಭದ್ರತೆಗೆ ಧಕ್ಕೆ ತರೋ ಹುನ್ನಾರ ನಡೆದಿದೆ. ಕಡಿಮೆ ದರದಲ್ಲಿ ಅಕ್ಕಿ- ಗೋಧಿ ವಿತರಣೆಗೆ ಬ್ರೇಕ್ ಹಾಕಲಾಗುತ್ತಿದೆ. ಇದರಿಂದಾಗಿ 80 ಕೋಟಿ ಜನರಿಗೆ ತೊಂದರೆಯಾಗಲಿದೆ. ಆಹಾರ ಭದ್ರತೆ ಕಾರ್ಯಕ್ರಮ ರದ್ದು ಮಾಡಲು ಕೇದ್ರ ಸರ್ಕಾರದ ಪಿತೂರಿ ನಡೆದಿದೆ. ಬೆಂಬಲ ಬೆಲೆ ಕಾನೂನಿಗೂ ರಕ್ಷಣೆಯಿಲ್ಲ. ರೈತ ವಿರೋಧಿ ಹೇಳಿಕೆ ನೀಡೋರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು.

ರಾಜ್ಯದಲ್ಲಿ ಪ್ರವಾಹಕ್ಕೆ 16 ಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. 25 ಸಾವಿರ ಕೋಟಿ ರೂಪಾಯಿ ಹಾನಿ ಸಂಭವಿಸಿದೆ. ಆದರೆ ಕೇಂದ್ರ ಕೊಟ್ಟಿರೋದು ಮಾತ್ರ ಕೇವಲ 570 ಕೋಟಿ ಪರಿಹಾರ ಕೊಟ್ಟಿದೆ. ಇಂತಹ ಜನವಿರೋಧಿಗಳು ಅಧಿಕಾರದಲ್ಲಿ ಮುಂದುವರಿಯಲು ಲಾಯಕ್ಕಿಲ್ಲ. ಕೇಂದ್ರ ಹಾಗೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ತೊಲಗಬೇಕು. ಎರಡೂ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಜನಾಂದೋಲನ ನಡೆಸಲಿದೆ ಎಂದು ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಪ್ರಧಾನಿ ಮೋದಿ ಅವರು ಹೇಳುವುದು ಒಂದು ಮಾಡೋದು ಮತ್ತೊಂದು. ದೆಹಲಿ ಬಳಿ ರೈತರು ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡುತ್ತಿದ್ದರೂ ಅವರ ಜೊತೆ ಮಾತನಾಡುತ್ತಿಲ್ಲ. ಮತ್ತೊಂದೆಡೆ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದರೂ ಅವರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಬರೀ ಭಾಷಣ ಮಾಡೋದು ಬಿಟ್ಟರೆ ಪ್ರಧಾನಿ ಮೋದಿಗೆ ಬೇರೇನೂ ಗೊತ್ತಿಲ್ಲ. ಈಗಲಾದರೂ ರೈತರ ಚಳುವಳಿಗೆ ಸ್ಪಂದಿಸೋ ಕೆಲಸ ಪ್ರಧಾನಿಗಳಿಂದ ನಡೆಯಲಿ ಎಂದು ಆಗ್ರಹಿಸಿದ್ದಾರೆ.

ನಾಳೆ ಕಾಂಗ್ರೆಸ್ ಜನಾಂದೋಲನ:ಕಲಬುರ್ಗಿಯಲ್ಲಿ ನಾಳೆ ಕಾಂಗ್ರೆಸ್ ಜನಾಂದೋಲನ ಸಮಾವೇಶ ಆಯೋಜಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಅಜಯಸಿಂಗ್, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಎಸ್.ಆರ್.ಪಾಟೀಲ ಸೇರಿದಂತೆ ಹಲವಾರು ಪ್ರಮುಖರು ಭಾಗವಹಿಸುತ್ತಿದ್ದಾರೆ. ಕಲಬುರ್ಗಿ ವಿಭಾಗದ ಆರೋ ಜಿಲ್ಲೆಗಳ ಪದಾಧಿಕಾರಿಗಳು ಜನಾಂದೋಲನ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಮಾಹಿತಿ ನೀಡಿದ್ದಾರೆ.
Published by: zahir
First published: January 17, 2021, 8:16 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories