ಕೀಳು ಮಟ್ಟದ ಪದ ಬಳಕೆ ಮಾಡುವ ಸಚಿವ ಈಶ್ವರಪ್ಪನನ್ನು ಹುಚ್ಚಸ್ಪಾತ್ರೆಗೆ ಸೇರಿಸಿ; ಈಶ್ವರ ಖಂಡ್ರೆ ಕಿಡಿ

ಈಶ್ವರಪ್ಪ ಅತ್ಯಂತ ಕೀಳು ಮಟ್ಟದ ಪದ ಬಳಕೆ ಮಾಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. 60 ರ ಬಳಿಕ ಅರಳುಮರುಳು ಆಗಿದೆ. ಕೂಡಲೇ ಅವರನ್ನ ಹುಚ್ಚರ ಅಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.

ಕೆಎಸ್ ಈಶ್ವರಪ್ಪ

ಕೆಎಸ್ ಈಶ್ವರಪ್ಪ

  • Share this:
    ಬೆಂಗಳೂರು (ಆಗಸ್ಟ್​ 11); ವಿರೋಧ ಪಕ್ಷದ ನಾಯಕರನ್ನು ಟೀಕಿಸಲು ಯಾವಾಗಲೂ ಕೀಳು ಮಟ್ಟದ ಪದ ಬಳಕೆ ಮಾಡುವ ಸಚಿವ ಈಶ್ವರಪ್ಪ ಅವರನ್ನು ಮೊದಲು ಹುಚ್ಚಾಸ್ಪತ್ರೆಗೆ ದಾಖಲು ಮಾಡು ಚಿಕಿತ್ಸೆ ನೀಡಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಇಂದು ಕಿಡಿಕಾರಿದ್ದಾರೆ. ನಿನ್ನೆ ವಿಧಾನಸೌಧದಲ್ಲಿ ಮಾತನಾಡಿದ್ದ ಈಶ್ವರಪ್ಪ, "ಕಾಂಗ್ರೆಸ್​ನವರು ಕುಡುಕರು" ಎಂದು ಅವಾಚ್ಯ ಶಬ್ಧವನ್ನು ಬಳಸಿ ಕಿಡಿಕಾರಿದ್ದರು. ಅಲ್ಲದೆ, ಮಾತಿನ ನಡುವೆಯೇ ಸುಧಾರಿಸಿ, "ಕೋಪದಲ್ಲಿ ಮಾತು ಬಂತು, ಆ ಮಾತನ್ನ ವಾಪಸ್ ಪಡೆಯುತ್ತೇನೆ. ಅದನ್ನ ಮುಂದುವರೆಸೋದು ಬೇಡ" ಎಂದು ಸಮಜಾಯಿಷಿ ನೀಡಿದ್ದರು. ಆದರೆ, ಈಶ್ವರಪ್ಪ ಅವರ ಮಾತಿಗೆ ಇದೀಗ ಅನೇಕ ಕಾಂಗ್ರೆಸ್​ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಈ ಸಂಬಂಧ ಇಂದು ಈಶ್ವರಪ್ಪ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, "ಈಶ್ವರಪ್ಪ ಅತ್ಯಂತ ಕೀಳು ಮಟ್ಟದ ಪದ ಬಳಕೆ ಮಾಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. 60 ರ ಬಳಿಕ ಅರಳುಮರುಳು ಆಗಿದೆ. ಕೂಡಲೇ ಅವರನ್ನ ಹುಚ್ಚರ ಅಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ಪ್ರಮಾಣ ವಚನ ಸ್ವೀಕರಿಸಿ ಅದಕ್ಕೆ ವಿರುದ್ಧ ಮಾತನಾಡಿರುವುದು ಸರಿಯಲ್ಲ. ಹೀಗಾಗಿ ಕೂಡಲೇ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಈಶ್ವರಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಒತ್ತಾಯಿಸಿದ್ದಾರೆ.

    ಇನ್ನೂ ಈ ಬಗ್ಗೆ ನಿನ್ನೆಯೇ ಕಿಡಿಕಾರಿದ್ದ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ, "ಈಶ್ವರಪ್ಪನಿಗೆ ಸಂಸ್ಕಾರ, ಸಂಸ್ಕೃತಿಯೇ ಗೊತ್ತಿಲ್ಲ. ಸಂಸ್ಕಾರ ಇರುವವರು ಅಂತಹ ಪದವನ್ನು ಬಯಸುವುದಿಲ್ಲ. ಈಶ್ವರಪ್ಪ ಬೆಳೆದು ಬಂದಿರುವ ಹಾದಿಯೇ ಹಾಗಿದೆ. ಅವ್ರಿಂದ ಬದಲಾವಣೆಗಳನ್ನು ನಿರೀಕ್ಷೆ ಮಾಡಲೇಬಾರದು‌.

    ಆಡಳಿತದಲ್ಲಿರುವವರು ಟೀಕೆಗಳನ್ನ ಆರೋಗ್ಯ ಪೂರ್ಣವಾಗಿ ಸ್ವೀಕರಿಸಬೇಕು. ರಾಜಕಾರಣದಲ್ಲಿ ಟೀಕೆ ಬರುವುದು ಸಹಜ. ಅದಕ್ಕೆ ಈ ರೀತಿ ಪ್ರತಿಕ್ರಿಯೆ ನಿಡೋದು ಸರಿಯಲ್ಲ. ಈಶ್ವರಪ್ಪ ಮೊದಲಿನಿಂದಲೂ ಹೀಗೆಯೇ ಮಾತಾಡುತ್ತಿದ್ದಾರೆ. ಅವರಿಗೆ ಆರೋಗ್ಯಕರವಾದ ಸಂಸ್ಕೃತಿಯೇ ಇಲ್ಲ, ಬಿಜೆಪಿಯವರ ಸಂಸ್ಕೃತಿಯೇ ಇಂತದ್ದು. ಈಶ್ವರಪ್ಪರಿಗೆ ಬಿಜೆಪಿ ಬುದ್ದಿ ಹೇಳುವ ಕೆಲಸ ಮಾಡುತ್ತಿಲ್ಲ" ಎಂದು ಕಿಡಿಕಾರಿದ್ದರು.

    ಇದನ್ನೂ ಓದಿ: Porn Case| ನಟಿ ಶಿಲ್ಪಾಶೆಟ್ಟಿ ಪತಿ ರಾಜ್​ ಕುಂದ್ರಾ ಜಾಮೀನಿಗೆ ಮುಂಬೈ ಪೊಲೀಸರ ಆಕ್ಷೇಪ; ಕಾರಣವೇನು ಗೊತ್ತಾ?

    ಇನ್ನೂಈಶ್ವರಪ್ಪ ತಮ್ಮ ಹೆಸರನ್ನು ಮೇರ ನಾಮ್ ಜೋಕರ್ ಅಂತ ಹೆಸರು ಬದಲಾಯಿಸಿಕೊಳ್ಳಲಿ ಎಂದು ಕಾಂಗ್ರೆಸ್​ ಬಿಕೆ ಹರಿಪ್ರಸಾದ್ ವ್ಯಂಗ್ಯವಾಡಿದರು. ಈಶ್ವರಪ್ಪ ಮಾತನಾಡಿದ್ದು ದ್ವೇಷ ಭಾಷಣ. ಈಶ್ವರಪ್ಪ ತಪ್ಪಲ್ಲ ಅದು, ಅವರು ಕಲಿತ ನಾಗಪುರ ಯುನಿವರ್ಸಿಟಿ ಹೇಳಿಕೊಟ್ಟ ಪಾಠ. ಪ್ರಚೋದನಕಾರಿ ಭಾಷಣದ ವಿರುದ್ದ ತಕ್ಷಣ ಪೊಲೀಸರು ಎಫ್ಐಆರ್ ದಾಖಲಿಸಬೇಕು. ಕರ್ನಾಟಕ ಪೊಲೀಸ್​​ ನಿಷ್ಕ್ರಿಯ ಆಗಿದ್ದಾರೆ, ಸುಮುಟೋ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದ್ದರು.

    ಇದನ್ನೂ ಓದಿ: Coronavirus: ತಜ್ಞರ ವರದಿ ನಿಜವಾಯ್ತಾ? ರಾಜ್ಯದ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಸೋಂಕು.

    ಈಶ್ವರಪ್ಪ ಅವಾಚ್ಯ ಪದ ಬಳಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ ಕೂಡ ಖಂಡಿಸಿದ್ದರು. ಅವರ ನಾಲಿಗೆ ಅವರ ಆಚಾರ ತೋರಿಸುತ್ತದೆ. ಬಿಜೆಪಿ ನಾಯಕರ ತಂದೆ-ತಾಯಂದಿರು ಇಂಥ ಸಂಸ್ಕೃತಿ ಕಲಿಸಿದ್ದಾರೆ. ಇಂಥ ಭಾಷೆ ಬಳಸುವವರನ್ನು ಪಕ್ಷದಿಂದ ಕಿತ್ತುಹಾಕಬೇಕು. ಈ ತರಹ ಕೆಟ್ಟ ಕೆಟ್ಟ ಭಾಷೆ, ಕೆಟ್ಟ ಕೆಟ್ಡ ಪದ ಬೇರೆಯವರಿಗೂ ಗೊತ್ತಿರತ್ತೆ. ಅದೇ ಪದವನ್ನು ಅವರ ಮೇಲೆ ಬಳಸಿದರೆ ಹೇಗಿರತ್ತೆ? ಬಿಜೆಪಿಗೆ ನಾಚಿಕಿಗೇಡಿನ ಸಂಗತಿ, ಬಿಜೆಪಿಗೇ ಒಂದು ಕಳಂಕ ಎಂದು ಕಿಡಿಕಾಡಿದ್ದರು.



    ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸು ವುದು, ಸಾಮಾ ಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊ ಬ್ಬರು ಕೈ ಜೋಡಿಸ ಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿ ನಿಂದ ಪಾಲಿಸಿ ಸೋಂಕಿ ನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿ ಯುತವಾಗಿ ನಡೆದುಕೊ ಳ್ಳಬೇಕು.
    Published by:MAshok Kumar
    First published: