• Home
  • »
  • News
  • »
  • state
  • »
  • ಶಾಸಕ ಯತ್ನಾಳ್​ಗೆ ಮಾಡೋಕೆ ಬೇರೆ ಏನೂ ಕೆಲಸ ಇಲ್ಲ ಅದ್ಕೆ ದೊರೆಸ್ವಾಮಿ ಬೆನ್ನುಬಿದ್ದಿದ್ದಾರೆ; ಈಶ್ವರ ಖಂಡ್ರೆ ಲೇವಡಿ

ಶಾಸಕ ಯತ್ನಾಳ್​ಗೆ ಮಾಡೋಕೆ ಬೇರೆ ಏನೂ ಕೆಲಸ ಇಲ್ಲ ಅದ್ಕೆ ದೊರೆಸ್ವಾಮಿ ಬೆನ್ನುಬಿದ್ದಿದ್ದಾರೆ; ಈಶ್ವರ ಖಂಡ್ರೆ ಲೇವಡಿ

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ.

ಬಸನಗೌಡ ಪಾಟೀಲ್ ಯತ್ನಾಳ್ ಅಂತವರಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲದ ಕಾರಣ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅಂತವರನ್ನು ಟೀಕೆ ಮಾಡುತ್ತಿದ್ದಾರೆ, ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ನಿಜಕ್ಕೂ ದೇಶಭಕ್ತಿ ಎಂಬುದು ಇದ್ದರೆ ಯತ್ನಾಳ್ ಅವರ ಶಾಸಕ ಸ್ಥಾನವನ್ನು ಕೂಡಲೇ ರದ್ದುಪಡಿಸಲಿ ಎಂದು ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ಮುಂದೆ ಓದಿ ...
  • Share this:

ಹುಬ್ಬಳ್ಳಿ (ಮಾರ್ಚ್ 02); ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಮಾಡೋಕೆ ಬೇರೆ ಏನೂ ಕೆಲಸ ಇಲ್ಲ ಅದಕ್ಕೆ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿತ್ತಿದ್ದಾರೆ ಎಂದು ಕೆಪಿಸಿಸಿ ಮಾಜಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಲೇವಡಿ ಮಾಡಿದ್ದಾರೆ.


ದೊರೆಸ್ವಾಮಿ ವಿರುದ್ಧ ಯತ್ನಾಳ್ ಆರೋಪದ ಕುರಿತಾಗಿ ಇಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಈಶ್ವರ ಖಂಡ್ರೆ, “ಮಹಾತ್ಮಾ ಗಾಂಧಿ ಅವರ 150ನೇ ಜನ್ಮ ದಿನಾಚರಣೆಯನ್ನು ಆಚರಿಸುವ ಇದೇ ಬಿಜೆಪಿ ನಾಯಕರು ಮತ್ತೊಂದು ಕಡೆ ಗಾಂಧಿ ಅವರ ಭಾವಚಿತ್ರಕ್ಕೆ ಗುಂಡು ಹಾರಿಸಿ ವಿಕೃತ ಸಂತೋಷ ಪಡೆಯುತ್ತಾರೆ. ದೇಶಪ್ರೇಮದ ಕುರಿತು ಪಾಠ ಮಾಡುತ್ತಲೇ ನಿಜವಾಗಿಯೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡುವವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಾರೆ.


ಬಸನಗೌಡ ಪಾಟೀಲ್ ಯತ್ನಾಳ್ ಅಂತವರಿಗೆ ಮಾಡಲು ಬೇರೆ ಏನೂ ಕೆಲಸವಿಲ್ಲದ ಕಾರಣ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅಂತವರನ್ನು ಟೀಕೆ ಮಾಡುತ್ತಿದ್ದಾರೆ, ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯವರಿಗೆ ನಿಜಕ್ಕೂ ದೇಶಭಕ್ತಿ ಎಂಬುದು ಇದ್ದರೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಶಾಸಕ ಸ್ಥಾನವನ್ನು ಕೂಡಲೇ ರದ್ದುಪಡಿಸಲಿ” ಎಂದು ಆಗ್ರಹಿಸಿದ್ದಾರೆ.


ಈ ಹಿಂದೆ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ವಿರುದ್ಧ ಕಿಡಿಕಾರಿದ್ದ ಬಿಜೆಪಿ ಶಾಸಕ ಯತ್ನಾಳ್ ಅವರೋರ್ವ ನಕಲಿ ಸ್ವಾತಂತ್ರ್ಯ ಹೋರಾಟಗಾರ, ಪಾಕಿಸ್ತಾನದ ಏಜೆಂಟ್” ಎಂದು ಕಿಡಿಕಾರಿದ್ದರು. ಈ ವಿಚಾರ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಯತ್ನಾಳ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು.


ಇದನ್ನೂ ಓದಿ : ಸಾವರ್ಕರ್​ ರೋಮಕ್ಕೂ ದೊರೆಸ್ವಾಮಿ ಸಮನಲ್ಲ; ಮತ್ತೋರ್ವ ಬಿಜೆಪಿ ನಾಯಕನಿಂದ ಕೀಳುದರ್ಜೆಯ ಹೇಳಿಕೆ

Published by:MAshok Kumar
First published: