ರಾಯಚೂರು(ಫೆ.14): ಸಚಿವ ಆನಂದ್ ಸಿಂಗ್ ಅವರಿಗೆ ಅರಣ್ಯ ಇಲಾಖೆ ನೀಡಿದ್ದು ಕಳ್ಳನ ಕೈಯಲ್ಲಿ ಕೀಲಿ ಕೈ ಕೊಟ್ಟಂತೆ ಆಗಿದೆ. ಗಣಿ ವ್ಯವಾಹಾರದಲ್ಲಿ ಅರಣ್ಯ ಅಸ್ತ ವ್ಯಸ್ತವಾಗುವುದು ಎಷ್ಟು ಸರಿ? ಎಂದು ಮಾಜಿ ಸಚಿವ ಹೆಚ್.ಎಂ.ರೇವಣ್ಣ ಪ್ರಶ್ನಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಮೈತ್ರಿ ಸರಕಾರದ ಯೋಜನೆಗಳನ್ನು ಸಿಎಂ ಯಡಿಯೂರಪ್ಪ ಸೈಲೆಂಟ್ ಆಗಿ ರದ್ದು ಮಾಡುತ್ತಿದ್ದಾರೆ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಸ್ಥಗಿತಗೊಳಿಸಿದ್ದಾರೆ. ಯಡಿಯೂರಪ್ಪನವರ ಪೆನ್ನಿನಲ್ಲಿ ಇಂಕೇ ಇಲ್ಲ ಅನಿಸುತ್ತೆ, ಅದಕ್ಕೆ ಅವರು ಏನನ್ನೂ ಬರೆಯುತ್ತಿಲ್ಲ. ಸಂಗೊಳ್ಳಿ ರಾಯಣ್ಣ ಪ್ರಾಧಿಕಾರಕ್ಕೆ ಹಣ ನೀಡುತ್ತಿಲ್ಲ ಎಂದು ಕಿಡಿಕಾರಿದರು.
ಶೋಷಿತ ಸಮಾಜದಲ್ಲಿ ಮಠ ಮಾಡಿದ್ದೇವೆ. ನಾಯಕ, ಕುರುಬ ಸಮಾಜ ವಿರುದ್ಧ ದಿಕ್ಕಿನಲ್ಲಿ ಹೋಗುವ ಪರಿಪಾಠ ನಡೆಯುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಎರಡು ಸಮುದಾಯದ ವಿರುದ್ಧ ವಿರುದ್ಧ ಪೋಸ್ಟ್ ಹಾಕುತ್ತಿದ್ದಾರೆ. ಎರಡು ಸಮಾಜದ ಗುರುಗಳು ಹಾಗೂ ಮುಖಂಡರ ಸಮಾಜದವರ ಸಭೆ ನಡೆಸಿ ಈ ವೈಷಮ್ಯ ಬಗೆಹರಿಸಲಾಗುವುದು ಎಂದು ಹೇಳಿದರು.
ಟ್ರಂಪ್ ಭಾರತದ ಭೇಟಿ, ವ್ಯಾಪಾರ ವೃದ್ಧಿಗೆ ಮಾತುಕತೆ; ದೇಶದ ಡೈರಿ ಉತ್ಪನ್ನಗಳಿಗೆ ತೆರೆಯಲಿದೆಯೇ ಅಮೆರಿಕ ಬಾಗಿಲು?
ಕುರುಬ, ವಾಲ್ಮೀಕಿ ಹಾಗೂ ಮಾಲೇರ ಸಮಾಜಕ್ಕೆ ಎಸ್ಟಿ ಮೀಸಲಾತಿ ನೀಡುವ ಕುರಿತು ಹಿಂದೆಯೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಸ್ಟಿಗೆ ಇರುವ ಮೀಸಲಾತಿಯನ್ನು ಶೇ. 3ರಷ್ಟು ಹೆಚ್ಚಿಸಬೇಕಾಗಿದೆ. ಅವರು ಕೂಡ ಸಮಾಜದಲ್ಲಿ ನೆಮ್ಮದಿಯಾಗಿರಲಿ ಎಂಬ ಆಶಯ ನಮ್ಮದು.
ವಿಧಾನ ಪರಿಷತ್ ಚುನಾವಣೆಯಲ್ಲಿ ಅನಿಲ್ ಕುಮಾರ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಜೆಡಿಎಸ್ನವರು ಚರ್ಚಿಸಿ ಈಗ ಅಭ್ಯರ್ಥಿ ನಿಲ್ಲಿಸಿದ್ದಾರೆ. ನಮ್ಮಲ್ಲಿ ಚರ್ಚೆ ಇಲ್ಲ. ಎರಡು ಪಕ್ಷದವರು ಸೇರಿ ಅಭ್ಯರ್ಥಿ ನಿಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಸಭಾ ಪ್ರತಿಪಕ್ಷ ಸ್ಥಾನಕ್ಕೆ ಬೇಗ ಅಧ್ಯಕ್ಷರ ನೇಮಕವಾಗಬೇಕು. ಸಿದ್ದರಾಮಯ್ಯನವರೇ ಅಧ್ಯಕ್ಷರಾಗಬೇಕೆ? ಅಥವಾ ಇನ್ಯಾರಾದರೂ ಆಗಬೇಕಾ? ಎಂಬುದರ ಕುರಿತು ಹಿರಿಯರ ಅಭಿಪ್ರಾಯ ಪಡೆದಿದ್ದಾರೆ. ಇನ್ನೊಂದು ವಾರದಲ್ಲಿ ನೇಮಕವಾಗಲಿದೆ ಎಂದರು.
ಬೀದರ್ನಲ್ಲಿ ಶಾಲಾ ಮಕ್ಕಳ ತಾಯಂದಿರ ಮೇಲೆ ಕೇಸ್ ಹಾಕುತ್ತಾರೆ. ಆದರೆ ಕಲಡ್ಕ ಪ್ರಭಾಕರ್ ಭಟ್ ಮತ್ತು ಚಕ್ರವರ್ತಿ ಸೂಲಿಬೆಲಿ ಏನೇ ಮಾಡಿದರೂ ಕೇಸು ಹಾಕುವುದಿಲ್ಲ ಎಂದು ಕಿಡಿಕಾರಿದರು.
ಬೆಂಗಳೂರಿನಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಗೋದಾಮು; 12 ಕಾರ್ಮಿಕರು ಪಾರು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ