ಮೈತ್ರಿ ಸರ್ಕಾರವನ್ನು ಕೆಡವುವ ಹಿಂದೆ ಕೇಂದ್ರದ ಕೈವಾಡ ಇದೆ; ಮಲ್ಲಿಕಾರ್ಜುನ ಖರ್ಗೆ ಆರೋಪ

ನಿನ್ನೆ ರಾಜೀನಾಮೆ ನೀಡಿದ ಮೈತ್ರಿ ಪಕ್ಷದ ಶಾಸಕರು ವಿಮಾನದಲ್ಲಿ ಮುಂಬೈಗೆ ತೆರಳಿ, ಐಶಾರಾಮಿ ಹೋಟೆಲ್​ನಲ್ಲಿ ಉಳಿದುಕೊಂಡಿದ್ದಾರೆ. ಈ ವಿಮಾನದ ವ್ಯವಸ್ಥೆ, ಮುಂಬೈನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಿದವರು ಯಾರು? ಎಂದು ಪ್ರಶ್ನೆ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ಪಕ್ಷದ ಇಂತಹ ತಂತ್ರಗಳನ್ನು ಜನ ಸಹಿಸೋದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

MAshok Kumar | news18
Updated:July 7, 2019, 11:02 AM IST
ಮೈತ್ರಿ ಸರ್ಕಾರವನ್ನು ಕೆಡವುವ ಹಿಂದೆ ಕೇಂದ್ರದ ಕೈವಾಡ ಇದೆ; ಮಲ್ಲಿಕಾರ್ಜುನ ಖರ್ಗೆ ಆರೋಪ
ಮಲ್ಲಿಕಾರ್ಜುನ ಖರ್ಗೆ
  • News18
  • Last Updated: July 7, 2019, 11:02 AM IST
  • Share this:
ಬೆಂಗಳೂರು (ಜುಲೈ.07); ರಾಜ್ಯದ ಮೈತ್ರಿ ಸರ್ಕಾರ ಬೀಳಿಸುವ ಹಿಂದೆ ಕೇಂದ್ರದ ಕೈವಾಡ ಇದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಶನಿವಾರ ನಡೆದ ಕ್ಷಿಪ್ರ ರಾಜ್ಯ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ 13 ಶಾಸಕರು ರಾಜೀನಾಮೆ ನೀಡಿದ್ದಾರೆ. ಹೀಗಾಗಿ, ಮೈತ್ರಿ ಸರ್ಕಾರದ ಇಕ್ಕಟ್ಟಿಗೆ ಸಿಲುಕಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ರಾಜ್ಯದಲ್ಲಿ ಪ್ರಸ್ತುತ ಸೃಷ್ಠಿಯಾಗಿರುವ ರಾಜಕೀಯ ಪ್ರಕ್ಷುಬ್ಧತೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿಬಿಜೆಪಿ ಸೇರುವುದು ನಿಶ್ಚಿತ, ಇನ್ನೂ 10 ಶಾಸಕರು ರಾಜೀನಾಮೆ ಕೊಡ್ತಾರೆ; ಅತೃಪ್ತ ಶಾಸಕರಿಂದ ಮತ್ತೊಂದು ಶಾಕಿಂಗ್ ನ್ಯೂಸ್

“ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಕಳೆದ ಐದು ವರ್ಷಗಳ ಅವಧಿಯಲ್ಲಿ ಕನಿಷ್ಟ 13 ರಾಜ್ಯಗಳಲ್ಲಿ ಅಪರೇಷನ್ ಕಮಲ ಮಾಡಿದ್ದಾರೆ. ಒಡೆದು ಅಳುವ ನೀತಿ ಅನುಸರಿಸುತ್ತಿದ್ದಾರೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸರ್ಕಾರವನ್ನು ಕೆಡವಲು ಸತತ ಪ್ರಯತ್ನ ನಡೆಸುತ್ತಲೇ ಇದ್ದಾರೆ.

ನಿನ್ನೆ ರಾಜೀನಾಮೆ ನೀಡಿದ ಮೈತ್ರಿ ಪಕ್ಷದ ಶಾಸಕರು ವಿಮಾನದಲ್ಲಿ ಮುಂಬೈಗೆ ತೆರಳಿ, ಐಶಾರಾಮಿ ಹೋಟೆಲ್​ನಲ್ಲಿ ಉಳಿದುಕೊಂಡಿದ್ದಾರೆ. ಈ ವಿಮಾನದ ವ್ಯವಸ್ಥೆ, ಮುಂಬೈನಲ್ಲಿ ಉಳಿದುಕೊಳ್ಳುವ ವ್ಯವಸ್ಥೆ ಮಾಡಿದವರು ಯಾರು? ಎಂದು ಪ್ರಶ್ನೆ ಮಾಡಿದ ಅವರು, ಬಿಜೆಪಿ ಪಕ್ಷದ ಇಂತಹ ತಂತ್ರಗಳನ್ನು ಜನ ಸಹಿಸೋದಿಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ಅತೃಪ್ತರ ನಿರ್ಧಾರಕ್ಕೆ ಡಿಕೆಶಿ ಕಂಗಾಲು; ಶಾಸಕರ ಮನವೊಲಿಕೆಗೆ ತಲೆಕೆಡಿಸಿಕೊಂಡ ಟ್ರಬಲ್ ಶೂಟರ್​

ಶಾಸಕರ ಮನವೋಲಿಕೆ ಕುರಿತು ಮಾತನಾಡಿರುವ ಖರ್ಗೆ, “ಕಾಂಗ್ರೆಸ್ ಪಕ್ಷದಲ್ಲಿ ದಶಕಗಳ ಕಾಲ ಉನ್ನತ ಹುದ್ದೆಯಲ್ಲಿದ್ದವರು ಸಹ ರಾಜೀನಾಮೆ ನೀಡಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡ ಇರುವುದು ನಿಶ್ಚಿತ. ಆದರೆ, ಅತೃಪ್ತರ ಮನವೊಲಿಸುವಲ್ಲಿ ನಾವು ಎಷ್ಟರ ಮಟ್ಟಿಗೆ ಯಶಸ್ವಿಯಾಗ್ತೀವಿ ಅನ್ನೋದನ್ನ ನೊಡ್ಬೇಕು” ಎಂದು ಹೇಳುವ ಮೂಲಕ ಅತೃಪ್ತರ ಬಿಕ್ಕಟ್ಟು ಶಮನ ಅಷ್ಟು ಸುಲಭದ ಕೆಲಸವಲ್ಲ ಎಂಬ ಸುಳಿವನ್ನು ನೀಡಿದ್ದಾರೆ.
First published:July 7, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ