ಜಿಎಸ್​ಟಿ ಪರಿಹಾರದಲ್ಲಿಯೂ ಖೋತಾ; ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಬಿಜೆಪಿ ಸಂಸದರಿಗಿಲ್ಲವೇ?; ಪ್ರಿಯಾಂಕ್ ಖರ್ಗೆ ಕಿಡಿ

ತಮ್ಮ ಸ್ಥಾನಮಾನ ಉಳಿಸಿಕೊಳ್ಳಲು ಬಿಜೆಪಿ ನಾಯಕರು ಆಗಾಗ ದೆಹಲಿ ಪರೇಡ್ ಮಾಡುತ್ತಿದ್ದಾರೆ. ಆದರೆ ಇವರಿಗೆ ರಾಜ್ಯದ ಹಕ್ಕಿಗಾಗಿ ಹೋರಾಡೋಕೆ ಪುರಸೊತ್ತಿಲ್ಲವೆ  ಎಂದು ಪ್ರಶ್ನಿಸಿದ್ದಾರೆ.

news18-kannada
Updated:August 1, 2020, 2:44 PM IST
ಜಿಎಸ್​ಟಿ ಪರಿಹಾರದಲ್ಲಿಯೂ ಖೋತಾ; ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಬಿಜೆಪಿ ಸಂಸದರಿಗಿಲ್ಲವೇ?; ಪ್ರಿಯಾಂಕ್ ಖರ್ಗೆ ಕಿಡಿ
ಪ್ರಿಯಾಂಕ್ ಖರ್ಗೆ
  • Share this:
ಕಲಬುರ್ಗಿ (ಆ.01): ಕೊರೋನಾದಿಂದ ರಾಜ್ಯ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜಿಎಸ್​ಟಿ ಪರಿಹಾರದ ಎರಡನೇ ಕಂತನ್ನು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದಿರುವುದಕ್ಕೆ ಮಾಜಿ ಸಚಿವ, ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ, ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ತಾಕತ್ತು ರಾಜ್ಯದ ಬಿಜೆಪಿ ಸಂಸದರಿಗೆ ತಾಕತ್ತಿಲ್ಲವೆ ಎಂದಿದ್ದಾರೆ. ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ರಾಜ್ಯ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಈ ನಡುವೆ ಗಾಯದ ಮೇಲೆ ಬರೆ ಎಳೆದಂತೆ ರಾಜ್ಯದ ಪಾಲಿನ ಜಿಎಸ್ ಟಿ ಪರಿಹಾರ‌ದ ಎರಡನೆಯ ಕಂತು ನೀಡಲು ಕೇಂದ್ರ ಸರ್ಕಾರ ನಿರಾಕರಣೆ ಮಾಡಿದೆ.
ರಾಜ್ಯದಿಂದ ಆಯ್ಕೆಯಾಗಿ ಹೋದ 25 ಬಿಜೆಪಿ ಸಂಸದರಿಗೆ ಈ ಕುರಿತು ಪ್ರಶ್ನೆ ಮಾಡಲು ಧೈರ್ಯವಿಲ್ಲವೇ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಕಮಲ್ ಪಂತ್ ಬೆಂಗಳೂರು ಕಮಿಷನರ್ ಆಗಿ ಅಧಿಕಾರ; ಭಾವುಕರಾಗಿ ಬ್ಯಾಟನ್ ಕೊಟ್ಟು ನಿರ್ಗಮಿಸಿದ ಭಾಸ್ಕರ್ ರಾವ್

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಜಿ.ಎಸ್.ಟಿ ಪರಿಹಾರ ಮಾತ್ರವಲ್ಲದೇ, 15ನೇ ಹಣಕಾಸು ಆಯೋಗದಿಂದ ರಾಜ್ಯದ ತೆರಿಗೆ ಪಾಲಿನಲ್ಲಿ 9,000 ಕೋಟಿ ರೂ. ಖೋತಾ‌ ಮಾಡಿದೆ. ಅಲ್ಲದೆ ತನ್ನ ಪ್ರಾಯೋಜಿತ ರಾಜ್ಯ ಯೋಜನೆಗಳಿಗೂ ಕೂಡಾ ಹಣ ಬಿಡುಗಡೆ ಮಾಡುತ್ತಿಲ್ಲ. ಇದು ರಾಜ್ಯದ ಅಭಿವೃದ್ದಿಗೆ ಅಡ್ಡಗಾಲಾಗಿ ಪರಿಣಮಿಸಿದೆ. ಇದನ್ನು ಪ್ರಶ್ನಿಸಬೇಕಿರುವ ಬಿಜೆಪಿ ನಾಯಕರು ಸುಮ್ಮನಿರುವುದೇಕೆ ಎಂದು ಪ್ರಶ್ನಿಸಿದ್ದಾರೆ.ತಮ್ಮ ಸ್ಥಾನಮಾನ ಉಳಿಸಿಕೊಳ್ಳಲು ಬಿಜೆಪಿ ನಾಯಕರು ಆಗಾಗ ದೆಹಲಿ ಪರೇಡ್ ಮಾಡುತ್ತಿದ್ದಾರೆ. ಆದರೆ ಇವರಿಗೆ ರಾಜ್ಯದ ಹಕ್ಕಿಗಾಗಿ ಹೋರಾಡೋಕೆ ಪುರಸೊತ್ತಿಲ್ಲವೆ  ಎಂದು ಪ್ರಶ್ನಿಸಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯದ ಪಾಲನ್ನು ಪಡೆದುಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಆದರೆ ಈ ಬಗ್ಗೆ ತುಟಿ ಬಿಚ್ಚದೆ, ಸರ್ಕಾರ ಮತ್ತು ಬಿಜೆಪಿ ನಾಯಕರು ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.ಪ್ರಧಾನಿ ಮೋದಿಯವರ ಆತ್ಮ ನಿರ್ಭರ ಹೇಳಿಕೆಯನ್ನು ಪ್ರಸ್ತಾಪಿಸಿರುವ ಪ್ರಿಯಾಂಕ್ ಖರ್ಗೆ, ನಮಗೆ ಸಲ್ಲಬೇಕಾದ ಹಣ ನೀಡದೇ, ರಾಜ್ಯವನ್ನ ಬೀದಿಯಲ್ಲಿ ಬಿಡುವುದೇ ಆತ್ಮ ನಿರ್ಭರತೆಯಾ ಎಂದು ವ್ಯಂಗ್ಯವಾಡಿದ್ದಾರೆ. ಈಗಲಾದರೂ ಬಿಜೆಪಿ ಸಂಸದರು, ನಾಯಕರು ತುಟಿ ಬಿಚ್ಚಲಿ, ರಾಜ್ಯಕ್ಕೆ ನ್ಯಾಯವಾಗಿ ಬರಬೇಕಿರುವ ಪಾಲನ್ನು ತರಲಿ ಎಂದು ಆಗ್ರಹಿಸಿದ್ದಾರೆ.
Published by: Latha CG
First published: August 1, 2020, 2:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading