• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Congress Guarantee: ಮಹಿಳೆಯರಿಗೆ ಬಸ್​​​ನಲ್ಲಿ ಉಚಿತ ಪ್ರಯಾಣ! ಕಾಂಗ್ರೆಸ್​ 5ನೇ ಗ್ಯಾರಂಟಿ ಘೋಷಿಸಿದ ರಾಹುಲ್​ ಗಾಂಧಿ

Congress Guarantee: ಮಹಿಳೆಯರಿಗೆ ಬಸ್​​​ನಲ್ಲಿ ಉಚಿತ ಪ್ರಯಾಣ! ಕಾಂಗ್ರೆಸ್​ 5ನೇ ಗ್ಯಾರಂಟಿ ಘೋಷಿಸಿದ ರಾಹುಲ್​ ಗಾಂಧಿ

ಕರ್ನಾಟಕ ಕಾಂಗ್ರೆಸ್ 5ನೇ ಗ್ಯಾರಂಟಿ ಘೋಷಣೆ

ಕರ್ನಾಟಕ ಕಾಂಗ್ರೆಸ್ 5ನೇ ಗ್ಯಾರಂಟಿ ಘೋಷಣೆ

5 ನೇ ಖಾತರಿ - ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ. 40% ಬಿಜೆಪಿ ಸರ್ಕಾರ ಕರ್ನಾಟಕದ ಜನತೆಯಿಂದ ಕದ್ದಿದೆ. ನಾವು ಅವರಿಗೆ ಅವರ ಹಣ, ಹಕ್ಕುಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್​ ಹೇಳಿದೆ.

  • Share this:

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Election) ಇಂದು ಮಹತ್ವದ ಬೆಳವಣಿಗೆಗಳು ನಡೆದಿದೆ. ಇಂದು ಬೆಳಗ್ಗೆಯಷ್ಟೇ ಕಾಂಗ್ರೆಸ್​ (Congress) ವಿರುದ್ಧ ವಾಗ್ದಾಳಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಅವರು, ಉಚಿತ (Free) ಭರವಸೆಗಳು ದೇಶಕ್ಕೆ ಪ್ರಗತಿಗೆ ಮಾರಕ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇಂದು ಮೋದಿ ಅವರ ಹೇಳಿಕೆಗೆ ತಿರುಗೇಟು ನೀಡುವಂತೆ ಕಾಂಗ್ರೆಸ್ ಪಕ್ಷ ತನ್ನ 5ನೇ ಗ್ಯಾರಂಟಿ ಯೋಜನೆಯನ್ನು ಘೋಷಣೆ ಮಾಡಿದೆ. ಮಂಗಳೂರಿನಲ್ಲಿ (Mangaluru) ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ರಾಹುಲ್​ ಗಾಂಧಿ (Rahul Gandhi), ಸಾರ್ವಜನಿಕ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಿಸಿದರು. ಅಲ್ಲದೇ, ಈ ಐದೂ ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡುವ ಭರವಸೆ ನೀಡಿದರು.


ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ


ಕಾಂಗ್ರೆಸ್ ಪಕ್ಷವು ಮಹಿಳಾ ಸಭಲೀಕರಣಕ್ಕೆ ಬದ್ಧವಾಗಿದೆ. ಕಾಂಗ್ರೆಸ್ ಗ್ಯಾರಂಟಿ ನಂ5 ರಾಜ್ಯದ ಎಲ್ಲಾ ಮಹಿಳೆಯರಿಗೆ ಎಲ್ಲಾ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಭರವಸೆಯನ್ನು ನೀಡುತ್ತದೆ. ಮಹಿಳೆಯರು ಸ್ವಾವಲಂಬಿಯಾಗಿ ಸುಭದ್ರ ಭವಿಷ್ಯ ರೂಪಿಸಿಕೊಳ್ಳಲು ನಮ್ಮ ಈ ಯೋಜನೆ ಮಹತ್ತರ ಪಾತ್ರ ವಹಿಸಲಿದೆ.
ಇದನ್ನೂ ಓದಿ: Varuna: ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಪ್ರಚಾರ ಯಾತ್ರೆ ಮೇಲೆ ಕಲ್ಲು ತೂರಾಟ; ಸೋಮಣ್ಣ, ಪ್ರತಾಪ್ ಸಿಂಹ ಸ್ವಲ್ಪದರಲ್ಲೇ ಪಾರು


ಮೊದಲ ಸಂಪುಟ ಸಭೆಯಲ್ಲಿ 5 ಭರವಸೆಗಳನ್ನು ಈಡೇರಿಸುತ್ತೇವೆ. 5 ನೇ ಖಾತರಿ - ಕರ್ನಾಟಕದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ. 40% ಬಿಜೆಪಿ ಸರ್ಕಾರ ಕರ್ನಾಟಕದ ಜನತೆಯಿಂದ ಕದ್ದಿದೆ. ನಾವು ಅವರಿಗೆ ಅವರ ಹಣ, ಹಕ್ಕುಗಳನ್ನು ನೀಡುತ್ತೇವೆ ಎಂದು ಕಾಂಗ್ರೆಸ್​ ಹೇಳಿದೆ.


ಇನ್ನು ಇದಕ್ಕೂ ಮುನ್ನ ಕಾಪುವಿನಲ್ಲಿ ಕಡಲ ಮೀನುಗಾರರೊಂದಿಗೆ ಸಂವಾದ ನಡೆಸಿದ ರಾಹುಲ್​ ಗಾಂಧಿ ಅವರು, 10 ಲಕ್ಷ ರೂಪಾಯಿ ವಿಮೆ, ಸೀಮೆಯೆಣ್ಣೆ ಪ್ರಮಾಣ ಏರಿಕೆ, ಮೀನುಗಾರ ಕುಟುಂಬದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ, ಡೀಸೆಲ್ - ಪೆಟ್ರೋಲ್ ಮೇಲೆ ಸಬ್ಸಿಡಿ ಸೇರಿದಂತೆ ಹಲವು ಭರವಸೆಗಳನ್ನು ನೀಡಿದರು.

First published: