ಬೆಂಗಳೂರು (ನ. 7): ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಂತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಬಿಐ ಅನ್ನು ಬಿಜೆಪಿ ಸರ್ಕಾರ ಕೈಗೊಂಬೆಯನ್ನಾಗಿ ಮಾಡಿಕೊಂಡಿದೆ. ಇದು ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿಯ ರಾಜಕೀಯ ಪಿತೂರಿಯನ್ನು ಎತ್ತಿ ತೋರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕೀಯ ಪಿತೂರಿಯಿಂದ ವಿನಯ್ ಕುಲಕರ್ಣಿಯನ್ನು ಬಂಧಿಸಲಾಗಿದೆ. ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆಗಳಿಗೆ ಎಂದಿಗೂ ಹೆದರುವುದಿಲ್ಲ ಎಂಬುದನ್ನು ಸಿಎಂ ಯಡಿಯೂರಪ್ಪ ಅರ್ಥ ಮಾಡಿಕೊಳ್ಳಬೇಕು. ವಿನಾಕಾರಣವಾಗಿ ಐಟಿ, ಇಡಿ, ಸಿಬಿಐ ಬಳಸಿ ಕಾಂಗ್ರೆಸ್ ನಾಯಕರನ್ನು ಬಗ್ಗಿಸುವ ತಂತ್ರ ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರು ಇಂತಹ ಬೆದರಿಕೆಗೆ ಮಣಿಯುವುದಿಲ್ಲ ಎಂದು ಸುರ್ಜೇವಾಲ ಟ್ವೀಟ್ ಮಾಡಿದ್ದಾರೆ.
Congress Leader, Vinay Kulkarni’s arrest by the ‘puppet CBI’ reflects the blatant conspiracy & malicious intent of CM, Yediyurappa & BJP leadership.
Yediyurappa ji should know that Congress leaders will not be cowed down by such cowardly attacks of BJP & its pawn, the CBI.
1/2
— Randeep Singh Surjewala (@rssurjewala) November 7, 2020
ಅಸ್ಥಿರ ಯಡಿಯೂರಪ್ಪ ಸರ್ಕಾರವು ತನ್ನ ಮುಂಚೂಣಿ ಘಟಕಗಳಾದ ಸಿಬಿಐ & ಇಡಿ ಬಳಸಿಕೊಂಡು @DKShivakumar, @DrParameshwara, ವಿನಯ್ ಕುಲಕರ್ಣಿ ಸೇರಿದಂತೆ ಇನ್ನಿತರ ಕಾಂಗ್ರೆಸ್ ನಾಯಕರನ್ನು ಹಣಿಯಲು ಯತ್ನಿಸುತ್ತಿದೆ.
ಈ ತಂತ್ರಗಳು ಜನರಿಗಾಗಿ ಹೋರಾಡುವ ನಮ್ಮ ಸಂಕಲ್ಪವನ್ನು ಇನ್ನಷ್ಟು ಗಟ್ಟಿಗೊಳಿಸುತ್ತವೆ ಎಂಬುದನ್ನು ಬಿಜೆಪಿ ನೆನಪಿನಲ್ಲಿಡಬೇಕು.
— Randeep Singh Surjewala (@rssurjewala) November 7, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ