Siddaramaiah Hospitalized: ಉಪಚುನಾವಣೆ ಸೋಲಿನ ನಂತರ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ

Siddaramaiah hospitalized: ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿದ ವಿಚಾರ ತಿಳಿಯುತ್ತಿದ್ದಂತೆ ಅವರ ಬೆಂಬಲಿಗರು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಬಿಗಿ ಬಂದೋಬಸ್ತ್​ ಏರ್ಪಡಿಸಲಾಗಿದೆ.

news18-kannada
Updated:December 11, 2019, 11:26 AM IST
Siddaramaiah Hospitalized: ಉಪಚುನಾವಣೆ ಸೋಲಿನ ನಂತರ ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ಧರಾಮಯ್ಯ
  • Share this:
ಬೆಂಗಳೂರು (ಡಿ.11): ಈ ಬಾರಿಯ ರಾಜ್ಯ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಹಾಗೂ ಜೆಡಿಎಸ್​ಗೆ ಭಾರೀ ಮುಖಭಂಗವಾಗಿತ್ತು. ಕಾಂಗ್ರೆಸ್​ ಎರಡು ಸ್ಥಾನ ಗೆದ್ದರೆ, ಜೆಡಿಎಸ್​ ಖಾತೆ ತೆರೆಯಲು ವಿಫಲವಾಗಿತ್ತು. ಸೋಲಿನ ನೈತಿಕ ಹೊಣೆ ಹೊತ್ತು ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ಈ ಮಧ್ಯೆ  ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸಿದ್ದರಾಮಯ್ಯ ತೆರಳಿದ್ದಾರೆ. ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಧ್ಯಾಹ್ನ 12 ಗಂಟೆಗೆ ಆಸ್ಪತ್ರೆಯಿಂದ ಅವರು ಮನೆಗೆ ವಾಪಾಸಾಗಲಿದ್ದಾರೆ.

ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿದ ವಿಚಾರ ತಿಳಿಯುತ್ತಿದ್ದಂತೆ ಅವರ ಬೆಂಬಲಿಗರು ಆಸ್ಪತ್ರೆ ಎದುರು ಜಮಾಯಿಸಿದ್ದಾರೆ. ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಬಿಗಿ ಬಂದೋಬಸ್ತ್​ ಏರ್ಪಡಿಸಲಾಗಿದೆ. 'ಯಾವುದೇ ಆತಂಕ ಬೇಡ. ಇದೊಂದು ಸಾಮಾನ್ಯ ಪರೀಕ್ಷೆ,' ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಸೋತ ಅನರ್ಹರಿಗೂ ಸಚಿವ ಸ್ಥಾನ; ಸಿಎಂಗೆ ತಲೆನೋವಾಗಲಿದೆಯಾ ರಮೇಶ್ ಜಾರಕಿಹೊಳಿ ಬೇಡಿಕೆ?

2018ರ ವಿಧಾನಸಭೆ ಚುನಾವಣೆ ಪೂರ್ಣಗೊಂಡ ನಂತರ ಧರ್ಮಸ್ಥಳದ ಶಾಂತಿವನದಲ್ಲಿ ಸಿದ್ದರಾಮಯ್ಯ 10 ದಿನ ಪ್ರಕೃತಿ ಚಿಕಿತ್ಸೆ ಪಡೆದಿದ್ದರು. “ನನಗೆ ಯಾವುದೇ ಕಾಯಿಲೆಯಿಲ್ಲ. ಆದರೆ, ದೇಹದ ವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿಕೊಳ್ಳುವುದಕ್ಕಾಗಿ ಹತ್ತು ದಿನಗಳ ಕಾಲ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯಲಿದ್ದೇನೆ,” ಎಂದಿದ್ದರು.

ಡಿಸೆಂಬರ್​ 5ರಂದು ಉಪಚುನಾವಣೆ ನಡೆದಿತ್ತು. ಡಿಸೆಂಬರ್​ 9ಕ್ಕೆ ಫಲಿತಾಂಶ ಹೊರ ಬಿದ್ದಿತ್ತು. ಬಿಜೆಪಿ 12 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರವನ್ನು ಭದ್ರವಾಗಿಸಿಕೊಂಡಿತ್ತು. ಹುಣಸೂರಿನಿಂದ ಸ್ಪರ್ಧಿಸಿದ್ದ ಎಚ್​​ ವಿಶ್ವನಾಥ್​ ಹಾಗೂ ಹೊಸಕೋಟೆ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ಉಪಚುನಾವಣೆಯಲ್ಲಿ ಸೋತಿದ್ದರು.
First published: December 11, 2019, 11:21 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading