Siddaramaiah: ’ಮೋದಿಗೆ ಧಮ್ ಇದ್ರೆ ಕೆಂಪಣ್ಣ ಆರೋಪದ ಬಗ್ಗೆ ತನಿಖೆ ನಡೆಸಲಿ’; ಪ್ರಧಾನಿಗೆ ಸಿದ್ದು ಸವಾಲ್

ಭ್ರಷ್ಟಾಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕುಮ್ಮಕ್ಕು ನೀಡುತ್ತಿದ್ದಾರೆ. ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ, ಮಿಸ್ಟರ್ ಬೊಮ್ಮಾಯಿ ಪ್ಲೀಸ್ ಗೆಟ್ ಔಟ್, ಗೆಟ್ ಔಟ್ ಎಂದು ಸಿದ್ದರಾಮಯ್ಯ ಗುಡುಗಿದ್ರು.

ಸಿದ್ದರಾಮಯ್ಯ, ನರೇಂದ್ರ ಮೋದಿ

ಸಿದ್ದರಾಮಯ್ಯ, ನರೇಂದ್ರ ಮೋದಿ

  • Share this:
ಚಾಮರಾಜನಗರ (ಏ.19): ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ (K.S Eshwarappa) ಬಂಧನಕ್ಕೆ ಆಗ್ರಹಿಸಿ ಚಾಮರಾಜನಗರದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನಾ (Protest) ನಡೆದಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ನಗಾರಿ ಬಾರಿಸುವ ಮೂಲಕ ಪ್ರತಿಭಟನೆ ಚಾಲನೆ ನೀಡಿದ್ರು. ಇದೇ ವೇಳೆ ಮಾತಾಡಿದ ಸಿದ್ದರಾಮಯ್ಯ, ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ (Karnataka) ಅತ್ಯಂತ ದುರಾಡಳಿತ ನಡೆಯುತ್ತಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ನನ್ನ 45 ವರ್ಷಗಳ ರಾಜಕೀಯ ಅವಧಿಯಲ್ಲಿ ಇಷ್ಟೊಂದು ಭ್ರಷ್ಟ ಸರ್ಕಾರ, ಸುಳ್ಳು ಹೇಳುವ ಸರ್ಕಾರವನ್ನು ನಾನು ನೋಡಿಲ್ಲ ಎಂದ್ರು. ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಮೋದಿ ಅವರಿಗೆ ಧಮ್ ಇದ್ರೆ ಗುತ್ತಿಗೆದಾರರ ಸಂಘದ ಕೆಂಪಣ್ಣ ಆರೋಪ ಬಗ್ಗೆ ತನಿಖೆ ಮಾಡಿಸಲಿ ಎಂದು ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ

ಈಶ್ವರಪ್ಪ ವಿರುದ್ದ ಈಗ ಮೊದಲ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯುತ್ತಿದ್ದೇವೆ. 2ನೇ ಹಂತದಲ್ಲಿ ಎಲ್ಲಾ ವಿಧಾನಸಭಾ ಕೇಂದ್ರಗಳಲ್ಲಿ ಭ್ರಷ್ಟಾಚಾರದ ವಿರುದ್ಧದ ಪ್ರತಿಭಟನಾ ಅಭಿಯಾನಕ್ಕೆ ಚಿಂತನೆ ನಡೆಸಿರೋದಾಗಿ ಚಾಮರಾಜನಗರದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ. ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಅತ್ಯಂತ ದುರಾಡಳಿತ ನಡೆಯುತ್ತಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ನನ್ನ 45 ವರ್ಷಗಳ ರಾಜಕೀಯ ಅವಧಿಯಲ್ಲಿ ಇಷ್ಟೊಂದು ಭ್ರಷ್ಟ ಸರ್ಕಾರ, ಸುಳ್ಳು ಹೇಳುವ ಸರ್ಕಾರವನ್ನು ನಾನು ನೋಡಿಲ್ಲ ಎಂದು ಸಿದ್ದರಾಮಯ್ಯ ಕಿಡಿಕಾರಿದ್ರು.

ಬಿಜೆಪಿ ದ್ವೇಷದ ವಿಷ ಬೀಜ ಬಿತ್ತುತ್ತಿದೆ

ಬಿಜೆಪಿ ಸರ್ಕಾರ ರಾಜ್ಯದಲ್ಲಿ ದ್ವೇಷದ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ನನ್ನ ಸರ್ಕಾರದ ಮೇಲೆ  ಮೋದಿ 10 ಪರ್ಸೆಂಟೇಜ್ ಆರೋಪ ಮಾಡಿದ್ದರು. ತನಿಖಾ ಸಂಸ್ಥೆಗಳು ನಿಮ್ಮ ಕೈಯಲ್ಲೇ ಇವೆ ತನಿಖೆ ಮಾಡಿಸಿ ಎಂದಿದ್ದೆ. ಆ ಮಾತಿಗೆ ಈಗಲು ನಾನು ಬದ್ಧ ಎಂದು ಸಿದ್ದರಾಮಯ್ಯ ಹೇಳಿದ್ರು.

ಇದನ್ನೂ ಓದಿ:  Bagalkot: ಮಠಗಳಿಗೆ ಬಿಡುಗಡೆ ಮಾಡುವ ಅನುದಾನದಲ್ಲಿ ಶೇ.30 ಕಮಿಷನ್ ಕೊಡಬೇಕು: ದಿಂಗಾಲೇಶ್ವರ ಸ್ವಾಮೀಜಿ

ಪ್ರಧಾನಿ ನರೇಂದ್ರ ಮೋದಿಗೆ ಸಿದ್ದರಾಮಯ್ಯ ಸವಾಲ್​

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ , 40 ಪರ್ಸೆಂಟ್ ಕಮಿಷನ್ ಬಗ್ಗೆ ಪ್ರಧಾನಿ ಮೋದಿಗೆ ಪತ್ರ ಬರೆದು ಎಂಟು ತಿಂಗಳಾಗಿದೆ. ಆದ್ರೆ ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ. ಅದರ ಅರ್ಥ ಭ್ರಷ್ಟಾಚಾರಕ್ಕೆ ಮೋದಿ ಕುಮ್ಮಕ್ಕಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ರು. ನಾನು ಭ್ರಷ್ಟಾಚಾರ ಮಾಡಲ್ಲ, ಬೇರೆಯವರು ಹಣ ತಿನ್ನಲು ಬಿಡಲ್ಲ ಎನ್ನುವ ಮಾತು ಈಗ ಎಲ್ಲಿ ಹೋಯ್ತು ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಲಂಚ.. ಲಂಚ.. ಲಂಚ..

ಕೋವಿಡ್ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಬಿಜೆಪಿ ಸರ್ಕಾರದವರು 2000 ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ. 8,300 ಕೋಟಿ ಖರ್ಚು ಮಾಡಿ 2,000 ಕೋಟಿ ಲಂಚ ಹೊಡೆದರು, ಅತ್ಯಂತ ಭ್ರಷ್ಟ ಇಲಾಖೆ ಎಂದ್ರೆ ಆರೋಗ್ಯ ಇಲಾಖೆ, ಅತ್ಯಂತ ಭ್ರಷ್ಟ ಮಂತ್ರಿ ಎಂದ್ರೆ ಆರೋಗ್ಯ ಸಚಿವ ಸುಧಾಕರ್ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: Hubballi: ಗಲಾಟೆ ನಡೆಯುವಾಗ ಕಣ್ಮುಚ್ಚಿ ಕುಳಿತಿತ್ತು CCTV! ಪೊಲೀಸ್ ಇಲಾಖೆಯನ್ನೇ ಯಾಮಾರಿಸಿದ ಖಾಸಗಿ ಕಂಪನಿ!

ಈಶ್ವರಪ್ಪ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ

ಈಶ್ವರಪ್ಪನ ಮೆದುಳಿಗೂ, ನಾಲಿಗೆಗೂ ಲಿಂಕ್ ಇಲ್ಲ, ಅಮಾಯಕ ಸಂತೋಷ್ ಸಾವಿಗೆ ಈಶ್ವರಪ್ಪ ಕಾರಣ, ಈಶ್ವರಪ್ಪ ಮನುಷ್ಯಲ್ಲ, ಅವನು ರಾಕ್ಷಸ, ಕೊಲೆಗಡುಕ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು. ಈಶ್ವರಪ್ಪನಿಗೆ ಒಂದು ಕಾನೂನು ಮತ್ತೊಬ್ಬರಿಗೆ ಒಂದು ಕಾನೂನು ಇದೆಯಾ? ಈಶ್ವರಪ್ಪ ಮೇಲೆ ದ್ವೇಷದಿಂದ ನಾನು ಈ ಮಾತು ಹೇಳುತ್ತಿಲ್ಲ, ಎಲ್ಲರೂ ಕಾನೂನಿನಂತೆ ನಡೆದುಕೊಳ್ಳಬೇಕು. ಈಶ್ವರಪ್ಪನನ್ನು ಭ್ರಷ್ಟಾಚಾರ ಕಾಯ್ದೆಯಡಿ ಬಂಧಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ರು .

ಭ್ರಷ್ಟಾಚಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕುಮ್ಮಕ್ಕು ನೀಡುತ್ತಿದ್ದಾರೆ. ಅಧಿಕಾರದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ, ಮಿಸ್ಟರ್ ಬೊಮ್ಮಾಯಿ ಪ್ಲೀಸ್ ಗೆಟ್ ಔಟ್, ಗೆಟ್ ಔಟ್ ಎಂದು ಸಿದ್ದರಾಮಯ್ಯ ಗುಡುಗಿದ್ರು.
Published by:Pavana HS
First published: