Congress Protest: K.S ಈಶ್ವರಪ್ಪಗೆ ಮಾನ ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ- ಸಿದ್ದರಾಮಯ್ಯ ಕಿಡಿ

ಬಿಜೆಪಿ ಅವರು ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡ್ತಿದ್ದಾರೆ. ಈಗಾಗಲೇ ಅನೇಕ ಸಾಕ್ಷಿ ಇದೆ. ಡೆತ್ ನೋಟ್ ಇದ್ದು, ಈ ನಿಟ್ಟಿನಲ್ಲಿ, ಕೂಡಲೇ ಈಶ್ವರಪ್ಪ ಅವರನ್ನು ಬಂಧನ ಮಾಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.

K.S ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ

K.S ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ

  • Share this:
ಬೆಂಗಳೂರು (ಏ.14): ಸಂತೋಷ್​ ಪಾಟೀಲ್ (Santhosh Patil)​ ಆತ್ಮಹತ್ಯೆ (Suicide) ಕೇಸ್​ನಲ್ಲಿ  ಸಂಕಷ್ಟಕ್ಕೆ ಸಿಲುಕಿರೋ ಗ್ರಾಮೀಣ ಸಚಿವ ಕೆ.ಎಸ್​ ಈಶ್ವರಪ್ಪ ನಾನು ರಾಜೀನಾಮೆ ಕೊಡೋದಿಲ್ಲ ಅಂತ ಪಟ್ಟು ಹಿಡಿದ್ದಾರೆ. ಕಳಂಕಿತ ಸಚಿವರು ರಾಜೀನಾಮೆ ಕೊಡಲೇಬೇಕು ಎಂದು ಕಾಂಗ್ರೆಸ್​ ನಾಯಕರು ಆಗ್ರಹಿಸಿದ್ದಾರೆ.  ​ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತಾಡಿದ ಸಿದ್ದರಾಮಯ್ಯ, ಸಚಿವ ಕೆ.ಎಸ್ ಈಶ್ವರಪ್ಪಗೆ (K.S Eshwarappa) ಮಾನ ಮರ್ಯಾದೆ ಇದ್ರೆ ರಾಜೀನಾಮೆ ನೀಡಲಿ ಎಂದು ಕಿಡಿಕಾರಿದ್ದಾರೆ. ಈ ಪ್ರಕರಣದಲ್ಲಿ ಈಶ್ವರಪ್ಪ ಎ ಒನ್ ಆರೋಪಿಯಾಗಿದ್ದಾರೆ. ಮೊದಲು ಈಶ್ವರಪ್ಪ ಅವರ ಬಂಧನ ಆಗಲೇಬೇಕು ಎಂದು ಒತ್ತಾಯಿಸಿದರು. ಬಿಜೆಪಿಗರು ಭಂಡಗೆಟ್ಟವರು ಎಂದ ಸಿದ್ದರಾಮಯ್ಯ, (Siddaramaiah) ಈಶ್ವರಪ್ಪ ಅಧಿಕಾರದಲ್ಲಿ ಇದ್ದರೆ ತನಿಖೆ ಸರಿಯಾಗಿ ಆಗುವುದಿಲ್ಲ. ಈ ನಿಟ್ಟಿನಲ್ಲಿ ನ್ಯಾಯಾಲಯದ ನಿಗಾದಲ್ಲಿ ಈ ಪ್ರಕರಣದ ತನಿಖೆ (Investigation) ಆಗಬೇಕು ಎಂದು ಸರ್ಕಾರವನ್ನು ಒತ್ತಾಯ ಮಾಡಿದರು.

ಬಿಜೆಪಿಗರು ಭಂಡಗೆಟ್ಟವರು

ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಾಥಮಿಕ ತನಿಖೆ ವರದಿ ಬರುವವರೆಗೂ ಸುಮ್ಮನಿರುವ ಅಗತ್ಯ ಇಲ್ಲ ಎಂದ ಸಿದ್ದರಾಮಯ್ಯ, ಇವರು ತನಿಖೆಯ ಹಾದಿ ತಪ್ಪಿಸುವ ಕೆಲಸ ಮಾಡ್ತಾ ಇದ್ದಾರೆ. ಈಗಾಗಲೇ ಅನೇಕ ಸಾಕ್ಷಿ ಇದೆ. ಡೆತ್ ನೋಟ್ ಇದೆ. ಈ ನಿಟ್ಟಿನಲ್ಲಿ, ಕೂಡಲೇ ಈಶ್ವರಪ್ಪ ಅವರನ್ನು ಬಂಧನ ಮಾಡಬೇಕು ಎಂದು ಒತ್ತಾಯಿಸಿದ್ದರಲ್ಲದೇ, ಬಿಜೆಪಿ ಸರ್ಕಾರದ ಹಿರಿಯ ಮಂತ್ರಿ ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಸಾವಿಗೆ ಕಾರಣವಾಗಿದ್ದಾರೆ. ನನ್ನ ಸಾವಿಗೆ ಈಶ್ವರಪ್ಪ ಅವರೇ ಕಾರಣ ಎಂದು ಸಂತೋಷ್ ಈ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. ಬುಧವಾರ ನಾವು ಅವರ ಮನೆಗೆ ಹೋಗಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದೇವೆ. ಅವರಿಗೆ ನ್ಯಾಯ ಕೊಡಿಸುವ ಭರವಸೆ ನೀಡಿದ್ದೇವೆ ಎಂದು ತಿಳಿಸಿದರು.

ಸಂತೋಷ್‌ ಸಾವಿಗೆ ಈಶ್ವರಪ್ಪ ನೇರ ಕಾರಣ

ಮುಂದುವರಿದು ಮಾತನಾಡಿದ ಸಿದ್ದರಾಮಯ್ಯ, ‘ಸಂತೋಷ್ ಪಾಟೀಲ್‌ನ ತಾಯಿ, ಹೆಂಡತಿ ಕಣ್ಣೀರು ಹಾಕಿ ಸಂತೋಷ್‌ ಸಾವಿಗೆ ಈಶ್ವರಪ್ಪ ನೇರ ಕಾರಣ ಎಂದು ಹೇಳಿದ್ದಾರೆ. ಕಮಿಷನ್ ಕೊಡಲು ಸಾಧ್ಯವಾಗದೆ, ಸಾಲಗಾರರ ಕಿರುಕುಳ ತಾಳಲಾರದೆ ಸಂತೋಷ್ ಸಾವಿಗೆ ಶರಣಾಗಿದ್ದಾರೆ. ಸಂತೋಷ್ ನಾಲ್ಕು ಕೋಟಿ ಕಾಮಗಾರಿ ಮಾಡಿದ್ದಾರೆ. ಅವರಲ್ಲಿ 40% ಕಮಿಷನ್ ಕೇಳಿದ್ದಾರೆ. ಇದು ಸಂತೋಷ್ ಹೆಂಡತಿ ಮತ್ತು ತಾಯಿ ಗಮನಕ್ಕೆ ಇತ್ತು. ಎಲ್ಲಿಂದ ಅಷ್ಟು ಹಣ ತರೋದು ಅಂತ ಎಂದು ಸಂತೋಷ್ ಹೇಳಿಕೊಂಡಿದ್ದಾರೆ. ಸಾಲ ಮಾಡಿದ್ದಾರೆ, ಚಿನ್ನ ಅಡ ಇಟ್ಟು ಹಣ ತಂದಿದ್ದಾರೆ. ಸಂತೋಷ ಸ್ನೇಹಿತ ಸಹ ಕಮಿಷನ್ ಬಗ್ಗೆ ಹೇಳಿದ್ದಾರೆ. ಇದಕ್ಕಿಂತ ಬೇರೆ ಸಾಕ್ಷಿ ಏನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಇದನ್ನೂ ಓದಿ: Santosh Patil ಆತ್ಮಹತ್ಯೆ ವಿಚಾರದಲ್ಲಿ ರಾಜಕೀಯ ಬಣ್ಣ; ಎಚ್​ಡಿಕೆ ಹೇಳಿಕೆ ಪುನರುಚ್ಚರಿಸಿದ ದೇವೇಗೌಡ

ಕಾಂಗ್ರೆಸ್​ನಿಂದ ಪಾದಯಾತ್ರೆ

ಕಾಂಗ್ರೆಸ್ ನಿಂದ ಪಾದಯಾತ್ರೆ ಸಚಿವ ಈಶ್ವರಪ್ಪನವರನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಾದ್ಯಂತ 8 ತಂಡಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿ ಕಾಂಗ್ರೆಸ್​ ನಾಯಕರು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.  ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷರರು ಸೇರಿದಂತೆ ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ; KS Eshwarappa: ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ, ಅಮಿತ್ ಶಾ ಮನೆಗೆ ಮುತ್ತಿಗೆ ಯತ್ನ

5 ದಿನ ಕಾಂಗ್ರೆಸ್ ಪ್ರತಿಭಟನೆ

ಮುಂದಿನ 5 ದಿನಗಳ ಕಾಲ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದು, ಪ್ರಮುಖವಾಗಿ ಈಶ್ವರಪ್ಪ ಅವರನ್ನು ಬಂಧಿಸಬೇಕು, ಸಂಪುಣದಿಂದ ಅವರನ್ನು ವಜಾ ಮಾಡಬೇಕು. ಅಲ್ಲದೇ,  ಈಶ್ವರಪ್ಪ ಮೇಲೆ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ನಾಯಕರು ಬೇಡಿಕೆ ಇಟ್ಟಿದ್ಧಾರೆ.
Published by:Pavana HS
First published: