ಬೆಂಗಳೂರು; ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ರ್ಯಾಲಿ ನಡೆಸಲಾಯಿತು. ಬೆಂಗಳೂರು ಮೆಜೆಸ್ಟಿಕ್ನಿಂದ ಆರಂಭವಾದ ರ್ಯಾಲಿ ರಾಜಭವನದತ್ತ ಹೊರಟಿತು. ರಾಜಭವನ ಮುತ್ತಿಗೆ ಹಾಕಲು ಹೊರಟ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದರು. ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದರು. ವಶಕ್ಕೆ ಪಡೆದ ಕೈ ಕಾರ್ಯಕರ್ತರನ್ನು ಬಿಎಂಟಿಸಿ ಬಸ್ ನಲ್ಲಿ ಕರೆದುಕೊಂಡು ಹೋಗಲಾಯಿತು. ಬಳಿಕ ಕಾಂಗ್ರೆಸ್ ಮುಖಂಡರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಅವರನ್ನು ಬಂಧಿಸಲಾಯಿತು.
ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ರ್ಯಾಲಿ ಮೆಜೆಸ್ಟಿಕ್ನ ಕೆಎಸ್ಆರ್ ರೈಲು ನಿಲ್ದಾಣದಿಂದ ಆರಂಭವಾಗಯಿತು. ಕೆಎಸ್ಆರ್ ರೈಲು ನಿಲ್ದಾಣ, ಸಂಗೊಳ್ಳಿ ರಾಯಣ್ಣ ವೃತ್ತ, ಆನಂದ ರಾವ್ ಫ್ಲೈಓವರ್ ಮೂಲಕ ಫ್ರೀಡಂ ಪಾರ್ಕ್ ಬಳಿಕ ರಾಜಭವನ ಚಲೋ ಕಾರ್ಯಕ್ರಮ ನಡೆಸಲಾಯಿತು. ಮೆರವಣಿಗೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ರೈತರು ಭಾಗಿಯಾಗಿದ್ದಾರೆ.
ಮಹಾರಾಣಿ ಕಾಲೇಜು ಮುಂಭಾಗದ ರಸ್ತೆಯಲ್ಲಿ ರ್ಯಾಲಿ ತಡೆದ ಪೊಲೀಸರು
ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಬಿಎಂಟಿಸಿ ಬಸ್ ನಲ್ಲಿ ಒತ್ತಾಯಪೂರ್ವಕವಾಗಿ ಹತ್ತಿಸಿಕೊಂಡು ಕರೆದೊಯ್ದರು. ಇನ್ನೂರಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದು
ನಾಲ್ಕು ಬಿಎಂಟಿಸಿ ಬಸ್ ನಲ್ಲಿ ತುಂಬಿಸಿಕೊಂಡು ಕರೆದೊಯ್ಯುಲಾಯಿತು.
ಇದನ್ನು ಓದಿ: BJP Anguish - ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಬಿಜೆಪಿ ನಾಯಕರ ಆಕ್ರೋಶ
ರಾಜಭವನ ಚಲೋ ರ್ಯಾಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದರು. ಕೇಂದ್ರ ಸರ್ಕಾರ ಹಾಗೂ ವಿವಾದಾತ್ಮಕ ಕಾಯ್ದೆ ವಿರುದ್ಧ ಬೃಹತ್ ಮಟ್ಟದ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ವತಿಯಿಂದ ಆಯೋಜಿಸಿರುವ ರಾಜಭವನ ಚಲೋ ರ್ಯಾಲಿಗೆ ಅನುಮತಿ ಇಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿಕೆ ನೀಡಿದ್ದಾರೆ . ಇಂದಿನ ರಾಜಭವನ ಚಲೋಗೆ ಯಾವುದೇ ಅನುಮತಿ ಕೊಟ್ಟಿಲ್ಲ. ಮೆಜೆಸ್ಟಿಕ್ನಿಂದ ರ್ಯಾಲಿ ಸಂಬಂಧ ಅನುಮತಿ ಕೋರಿ ಪತ್ರ ಬಂದಿದೆ. ಆದರೆ ಇನ್ನೂ ಯಾವುದೇ ಅನುಮತಿ ಕೊಟ್ಟಿಲ್ಲ. ಪರಿಶೀಲನೆ ನಡೆಸಿ ರ್ಯಾಲಿಗೆ ಮಾತ್ರ ಅನುಮತಿ ನೀಡಲಾಗುವುದು. ಕೊರೋನಾ ನಿಯಮಾವಳಿ ಪ್ರಕಾರ 200 ಕ್ಕೂ ಹೆಚ್ಚು ಜನರು ಸೇರುವ ಆಗಿಲ್ಲ. ನಿಯಮ ಉಲ್ಲಂಘನೆಯಾದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ