ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಬಿಜೆಪಿಗೆ (BJP) ಗುಡ್ ಬೈ ಹೇಳಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಶಾಸಕತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಇದೀಗ ಶೆಟ್ಟರ್ ನಡೆ ಯಾವ ಕಡೆ ಎಂಬ ಬಗ್ಗೆ ರಾಜ್ಯಾದ್ಯಂತ ತೀವ್ರ ಚರ್ಚೆ ನಡೆಯುತ್ತಿದೆ. ಬಿಜೆಪಿ ಬಿಡುತ್ತಿದ್ದಂತೆ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ (Congress) ಹಾಗೂ ಜೆಡಿಎಸ್‌ನಿಂದ (JDS) ಭಾರೀ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಈ ನಡುವೆ ಶೆಟ್ಟರ್ ಒಲವು ಕಾಂಗ್ರೆಸ್ ಮೇಲೆ ಇರುವಂತೆ ಕಾಣಿಸುತ್ತಿದೆ. ಈಗಾಗಲೇ ಶೆಟ್ಟರ್ ಮನವೊಲಿಕೆ ಕಾರ್ಯದಲ್ಲಿ ಕಾಂಗ್ರೆಸ್ ನಾಯಕರು ಬ್ಯುಸಿಯಾಗಿದ್ದಾರೆ. ಖುದ್ದು ರಾಹುಲ್ ಗಾಂಧಿ (Rahul Gandhi) ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಸಮ್ಮುಖದಲ್ಲೇ ಶೆಟ್ಟರ್ ಸೆಳೆಯುವ ಕಾರ್ಯ ನಡೆಯುತ್ತಿದೆ. ಮೂಲಗಳ ಪ್ರಕಾರ ನಾಳೆಯೇ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕರೊಂದಿಗೆ ಜಗದೀಶ್ ಶೆಟ್ಟರ್ ಸ್ಪರ್ಧೆ
ಶಾಮನೂರು ಶಿವಶಂಕರಪ್ಪ ಪುತ್ರ, ಮಾಜಿ ಶಾಸಕ ಎಸ್ಎಸ್ ಮಲ್ಲಿಕಾರ್ಜುನ್‌ರ ಬೆಂಗಳೂರಿನ ಖಾಸಗಿ ಸ್ಕೈ ಗಾರ್ಡನ್ಸ್ ಅಪಾರ್ಟ್ಮೆಂಟ್ ನಲ್ಲಿ ಮಹತ್ವದ ಸಭೆ ನಡೆಯಿತು. ರಾಹುಲ್ ಗಾಂಧಿ, ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ಕಾಂಗ್ರೆಸ್ ನಾಯಕರು ಇದ್ದ ಸಭೆಯಲ್ಲಿ ಜಗದೀಶ್ ಶೆಟ್ಟರ್ ಭಾಗಿಯಾಗಿದ್ದರು.
ಶೆಟ್ಟರ್‌ಗೆ ಆಫರ್ ಕೊಟ್ರಾ ರಾಹುಲ್ ಗಾಂಧಿ?
ಮೂಲಗಳ ಪ್ರಕಾರ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಸೇರುವಂತೆ ಖುದ್ದು ರಾಹುಲ್ ಗಾಂಧಿಯವರೇ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಶೆಟ್ಟರ್ ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಧಾರವಾಡ ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಟಿಕೆಟ್ ನೀಡುತ್ತೇವೆ ಅಂತ ರಾಹುಲ್ ಗಾಂಧಿ ಶೆಟ್ಟರ್‌ಗೆ ಆಫರ್ ನೀಡಿದ್ದಾರೆ ಎನ್ನಲಾಗುತ್ತಿದೆ.
ನಾಳೆಯೇ ಕಾಂಗ್ರೆಸ್ ಸೇರುತ್ತಾರಾ ಜಗದೀಶ್ ಶೆಟ್ಟರ್?
ಸತತ 4 ಗಂಟೆಗಳ ಕಾಲ ಜಗದೀಶ್ ಶೆಟ್ಟರ್ ಜೊತೆ ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದಾರೆ. ಈ ವೇಳೆ ಜಗದೀಶ್ ಶೆಟ್ಟರ್ ಹಲವು ಕಂಡೀಷನ್ಸ್ ಹಾಕಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ನಾಳೆಯೇ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: Jagadish Shettar: ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ನಲ್ಲಿ ಜಗದೀಶ್ ಶೆಟ್ಟರ್‌ಗೆ ಟಿಕೆಟ್ ತಪ್ಪಲು ಕಾರಣ ಯಾರು?
ಬಿಜೆಪಿಯಲ್ಲೂ ಹೈ ವೋಲ್ಟೇಜ್ ಮೀಟಿಂಗ್
ಇತ್ತ ರಾಜ್ಯ ಬಿಜೆಪಿಯಲ್ಲೂ ಹೈವೋಲ್ಟೇಜ್ ಸಭೆ ನಡೆಯಿತು. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳೀನ್ ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಶೆಟ್ಟರ್ ರಾಜೀನಾಮೆ ಬಗ್ಗೆ ಹಾಗೂ ಅವರನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಸಾಧ್ಯತೆಗಳ ಬಗ್ಗೆ ಚರ್ಟೆ ನಡೆಸಲಾಯಿತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ