ಕೇಂದ್ರ ಆರ್ಥಿಕ ನೀತಿ ವಿರುದ್ಧ ಕಾಂಗ್ರೆಸ್​ನಿಂದ ಟೌನ್ ಹಾಲ್ ಮುಂದೆ ಪ್ರತಿಭಟನೆ

ಮಹಾರಾಷ್ಟ್ರದಲ್ಲಿ ಜನರು 370 ವಿಧಿ ರದ್ಧತಿ, ಪುಲ್ವಾಮ ದಾಳಿ ಘಟನೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂಬುದು ಅಲ್ಲಿಯ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. ಬಿಜೆಪಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

news18
Updated:May 21, 2020, 7:15 PM IST
ಕೇಂದ್ರ ಆರ್ಥಿಕ ನೀತಿ ವಿರುದ್ಧ ಕಾಂಗ್ರೆಸ್​ನಿಂದ ಟೌನ್ ಹಾಲ್ ಮುಂದೆ ಪ್ರತಿಭಟನೆ
ಸಾಂದರ್ಭಿಕ ಚಿತ್ರ
  • News18
  • Last Updated: May 21, 2020, 7:15 PM IST
  • Share this:
ಬೆಂಗಳೂರು(ನ. 11): ಕೇಂದ್ರದ ಅಸಮರ್ಪಕ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥವ್ಯವಸ್ಥೆ ಹದಗೆಟ್ಟುಹೋಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಇಂದು ಟೌನ್ ಹಾಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಸರ್ಕಾರದಲ್ಲಿ ಸೂಕ್ತ ಆರ್ಥಿಕ ತಜ್ಞರಿಲ್ಲ. ಅದರ ಆರ್ಥಿಕ ನೀತಿಗಳು ಸರಿಯಾಗಿಲ್ಲ. ಬಡವರ ಕಷ್ಟಕ್ಕೆ ಕೇಂದ್ರ ಯಾವತ್ತೂ ಸ್ಪಂದಿಸಿಲ್ಲ. ಹಣಕಾಸು ಸಚಿವರೆ ನಿರ್ಮಲಾ ಸೀತಾರಾಮನ್ ಅವರಿಗೆ ಆರ್ಥಕತೆ ಬಗ್ಗೆ ಏನೂ ಗೊತ್ತಿಲ್ಲ. ಆರ್ಥಿಕ ತಜ್ಞರ ಅಭಿಪ್ರಾಯಗಳನ್ನೂ ಕೇಂದ್ರ ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಪ್ರತಿಭಟನೆಯ ವೇಳೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ, ವಿ.ಎಸ್. ಉಗ್ರಪ್ಪ ಅವರು ಈ ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಮುಖಂಡರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: ಕುಮಾರಸ್ವಾಮಿ ಅವಧಿಗಿಂತ, ಸಿದ್ದರಾಮಯ್ಯ ಸರ್ಕಾರದಲ್ಲಿಯೇ ನಮ್ಮ ಕ್ಷೇತ್ರದ ಅಭಿವೃದ್ಧಿ; ಅನರ್ಹ ಶಾಸಕ ನಾರಾಯಣಗೌಡ

ಸಿದ್ದರಾಮಯ್ಯ ವಾಗ್ದಾಳಿ:

ನರೇಂದ್ರ ಮೋದಿ ಅವರೇ, ಬಹಳ ದಿನ ನಿಮ್ಮ ನಾಟಕ ನಡೆಯಲ್ಲ. ಒಂದು ಅಥವಾ ಎರಡು ಬಾರಿ ಭಾವನಾತ್ಕ ವಿಚಾರಗಳಲ್ಲಿ ಜನರನ್ನು ಸೆಳೆಯಬಹುದು. ಇದು ಹೆಚ್ಚು ದಿನ ಸಾಗಲ್ಲ ಎಂದು ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಟೀಕಾ ಪ್ರಹಾರ ಮಾಡಿದರು.

ಮಹಾರಾಷ್ಟ್ರದಲ್ಲಿ ಜನರು 370 ವಿಧಿ ರದ್ಧತಿ, ಪುಲ್ವಾಮ ದಾಳಿ ಘಟನೆ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂಬುದು ಅಲ್ಲಿಯ ಚುನಾವಣಾ ಫಲಿತಾಂಶವೇ ಸಾಕ್ಷಿಯಾಗಿದೆ. ಬಿಜೆಪಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.ಇನ್ನು, ರಾಜ್ಯ ಬಿಜೆಪಿ ವಿರುದ್ಧ ತಮ್ಮ ಪ್ರಹಾರ ಮುಂದುವರಿಸಿದ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ 15 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 12ರಲ್ಲಿ ಗೆಲ್ಲುತ್ತದೆ ಎಂಬ ತಮ್ಮ ಭವಿಷ್ಯವಾಣಿಯನ್ನು ಪುನರುಚ್ಚರಿಸಿದರು.

ಯಡಿಯೂರಪ್ಪನವರೇ ನೀವು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿರಿ. ನಮ್ಮ ಶಾಸಕರನ್ನು ದುಡ್ಡು ಕೊಟ್ಟು ಕೊಂಡುಕೊಂಡಿರಿ. ಜನರು ಪಕ್ಷಾಂತರಿಗಳನ್ನ ಸಹಿಸಲ್ಲ. ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಇವರನ್ನು ಸೋಲಿಸಲು ಜನರು ಕಾಯುತ್ತಿದ್ದಾರೆ. 15 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕನಿಷ್ಠ 12ರಲ್ಲಿ ಗೆಲ್ಲುತ್ತದೆ. ಎಲ್ಲಾ 15 ಕ್ಷೇತ್ರಗಳನ್ನ ಗೆದ್ದರೂ ಅಚ್ಚರಿಪಡಬೇಕಿಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.ಟೌನ್ ಹಾಲ್​ನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸ್ವಲ್ಪ ಹೊತ್ತು ಪಾಲ್ಗೊಂಡಿದ್ದ ಸಿದ್ದರಾಮಯ್ಯ, ತಮ್ಮ ಭಾಷಣ ಮುಗಿಸಿ ಹೊರಟರು. ಮಧ್ಯಾಹ್ನ ಅವರು ವಿಜಯಪುರ ಜಿಲ್ಲಾ ಪ್ರವಾಸಕ್ಕೆ ತೆರಳಿದ್ದಾರೆ.

(ವರದಿ: ಶ್ರೀನಿವಾಸ ಹಳಕಟ್ಟಿ)
First published: November 11, 2019, 1:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading