Praveen Murder: ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಗೆ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆ

ಕೊಲೆಗಡುಕರ ಪಕ್ಷ,ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಪ್ರವೀಣ್ ನೆಟ್ಟಾರು

ಪ್ರವೀಣ್ ನೆಟ್ಟಾರು

  • Share this:
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರಿನ (Puttu) ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Hindu Activist Praveen Nettaru) ಕೊಲೆಗೆ (Murder) ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು (Congress Leaders) ಪ್ರತಿಕ್ರಿಯೆ ನೀಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಖಂಡನೀಯ. ಪೊಲೀಸರು (Police) ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ,ಜಾತಿ,ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah) ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ದಿನೇಶ್ ಗುಂಡೂರಾವ್

ದ.ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ‌ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ‌ ಕೊಲೆ ಅತ್ಯಂತ ಹೇಯ ಕೃತ್ಯ. ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಅನ್ಯ ಧರ್ಮದ ಯುವಕನ ಕೊಲೆಯಾಗಿತ್ತು. ಆ ಕೊಲೆಗೆ‌ ಪ್ರತಿಕಾರವಾಗಿ ಈ ಕೊಲೆ ನಡೆದ ಶಂಕೆಯಿದೆ.

ಇದನ್ನೂ ಓದಿ:  Praveen Murder: 50 ಲಕ್ಷ ಪರಿಹಾರ ಘೋಷಣೆ ಮಾಡಲಿ, ಇದು ಕಾನೂನು, ಸರ್ಕಾರದ ವೈಫಲ್ಯ: ಮುತಾಲಿಕ್ ಕಿಡಿ

ಇದು ಖಂಡನೀಯ. ಕೊಲೆಗೆ ಕೊಲೆ ಪ್ರತಿಕಾರವಲ್ಲ. ಸರ್ಕಾರ ಹತ್ಯೆ ನಡೆಸಿದ ದುಷ್ಕರ್ಮಿಗಳ‌ ಮಟ್ಟ ಹಾಕಲಿ. CM ಆದ ಒಂದು ವರ್ಷದ ಅವಧಿಯಲ್ಲಿ ಬೊಮ್ಮಾಯಿಯವರು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಯಾವ ಯೋಜನೆ ತಂದಿದ್ದಾರೆ?

Hindu Activist Praveen Murder case Pramod Mutalik slams BJP Government mrq
ಪ್ರವೀಣ್ ನೆಟ್ಟಾರು


ಹೋಗಲಿ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ? ಕ್ರಿಯೆಗೆ‌ ಪ್ರತಿಕ್ರಿಯೆ ಇರಲಿದೆ ಎಂದು ಕೋಮುಗಲಭೆಗೆ ಪ್ರಚೋದಿಸಿ ಸಮಾಜ ಒಡೆದಿದ್ದು ಬೊಮ್ಮಾಯಿಯವರ ಸಾಧನೆಯೆ?  ಹಿಜಾಬ್, ಹಲಾಲ್ ವಿವಾದ ಸೃಷ್ಟಿಸಿದ್ದು ಸಾಧನೆಯೆ ಎಂದು ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

ರಮೇಶ್ ಕುಮಾರ್ ಸಂತಾಪ

ವಿಜಯಪುರದಲ್ಲಿ ಕಾಂಗ್ರೆಸ್ ನಾಯಕ ರಮೇಶ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ ಕೊಲೆ ಆಗಬಾರದು. ಕಾಂಗ್ರೆಸ್, ಬಿಜೆಪಿಯಲ್ಲಿ ಯಾವುದೇ ಕೊಲೆಯಾದರು ಆಗಬಾರದು. ಅಸಹಜ ಸಾವು ನಾಗರಿಕ ಸಮಾಜಕ್ಕೆ ಅಪಮಾನ, ಪ್ರವೀಣ್ ಸಾವಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸಂತಾಪ ಸೂಚಿಸಿದರು.

ಇದಕ್ಕಿಂತ ಹೆಚ್ಚು ನನಗೆ ಏನು ವಿವರ ಗೊತ್ತಿಲ್ಲ. ಈ ಬಗ್ಗೆ ತನಿಖೆಯಾಗಲಿ. ಯಾವುದೇ ಸಾವಾದರೂ ತನಿಖೆ ನಡೆಯಲೇ ಬೇಕು. ಯಾರೇ ತಪ್ಪಿತಸ್ಥರಿದ್ದರು ಶಿಕ್ಷೆಯಾಗಲೇಬೇಕು. ಹಿಂದೂ, ಮುಸ್ಲಿಂ, ಕ್ರೈಸ್ತ ಯಾರದ್ದೆ ಆಗಲಿ ಜೀವ ಜೀವ ಅಲ್ಲವೇ? ಈ ಕೃತ್ಯ ನಾಗರಿಕ ಸಮಾಜಕ್ಕೆ ಅಪಮಾನ. ಯಾರು ಮತ್ತು ಏಕೆ ಕೊಲೆ ಮಾಡಿದರು ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ.ಗೊತ್ತಿಲ್ಲದೆ ಪ್ರತಿಕ್ರಿಯೆ ನೀಡುವುದು ಮೂರ್ಖತನ ಎಂದರು.

ಸ್ವಪಕ್ಷದ ವಿರುದ್ಧವೇ ಕಾರ್ಯಕರ್ತರ ಆಕ್ರೋಶ

ಪ್ರವೀಣ್ ನೆಟ್ಟೂರ್ ಹತ್ಯೆಗೆ ಸಂಬಂಧಿಸಿದಂತೆ ಪಕ್ಷದ ವಿರುದ್ದವೇ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿ, ಕೆಲ ಮುಖಂಡರು ರಾಜೀನಾಮೆ ನೀಡಿದ್ದಾರೆ.

Hindu Activist Praveen Murder case Pramod Mutalik slams BJP Government mrq
ಪ್ರವೀಣ್ ನೆಟ್ಟಾರು


ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ ಕಾರ್ಯದರ್ಶಿ, ಮಂಡಲ ಅಧ್ಯಕ್ಷ ರು ರಾಜೇಶ್, ಕಾಂಚನ್ ಗೌಡ ಸೇರಿದಂತೆ 30 ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ:  Praveen Murder: ಇದೊಂದು ವ್ಯವಸ್ಥಿತವಾದ ಸಂಚು, ಶೀಘ್ರವೇ ಕೊಲೆಗಡುಕರ ಬಂಧನ: ಸಿಎಂ ಬೊಮ್ಮಾಯಿ

ಸುಳ್ಯದಲ್ಲಿ ಬಿಜೆಪಿ ಪ್ರತಿಭಟನೆ

ಪ್ರವೀಣ್ ನೆಟ್ಟಾರು ಕೊಲೆಗೆ ಖಂಡಿಸಿ ಸುಳ್ಯದಲ್ಲಿ ಟಯರಿಗೆ ಬೆಂಕಿ ಹಚ್ಚಿ ರಸ್ತೆ ತಡೆಗೆ ಬಿಜೆಪಿ ಕಾರ್ಯಕರ್ತರು ಪ್ರಯತ್ನಿಸಿದರು. ಈ ವೇಳೆ ಪೊಲೀಸರು ಟಯರ್ ತೆಗೆದು ರಸ್ತೆ ತಡೆಯದಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಪೊಲೀಸರು  ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು. ಕೊನೆಗೆ ಪೊಲೀಸರು ಎಲ್ಲಾ ಪ್ರತಿಭಟನಾಕಾರರನ್ನು ಚದುರಿಸಿ ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.
Published by:Mahmadrafik K
First published: