• Home
  • »
  • News
  • »
  • state
  • »
  • ಶಾಸಕ ಯತ್ನಾಳ್ ವಿರುದ್ಧ ಸದನದಲ್ಲಿ ಚರ್ಚೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ

ಶಾಸಕ ಯತ್ನಾಳ್ ವಿರುದ್ಧ ಸದನದಲ್ಲಿ ಚರ್ಚೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್ ನಿಯೋಗ

ಬಸನಗೌಡ ಪಾಟೀಲ್ ಯತ್ನಾಳ್- ಎಚ್​.ಎಸ್. ದೊರೆಸ್ವಾಮಿ

ಬಸನಗೌಡ ಪಾಟೀಲ್ ಯತ್ನಾಳ್- ಎಚ್​.ಎಸ್. ದೊರೆಸ್ವಾಮಿ

ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಸ್ವಾತಂತ್ರ್ಯ ಹೋರಾಟ ಸಂಗ್ರಾಮಕ್ಕೆ ಅವಮಾನಿಸಿದ ಶಾಸಕ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಪದಚ್ಯುತಗೊಳಿಸಬೇಕು, ಅವರ ವಿರುದ್ಧ ಚರ್ಚೆಗೆ ಸದನದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಕಳೆದ ಎರಡು ದಿನದಿಂದ ಸದನದಲ್ಲಿ ಒತ್ತಾಯಿಸುತ್ತಿದೆ. ಆದರೆ, ರಾಜ್ಯಪಾಲ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಂಗ್ರೆಸ್ ನಾಯಕರ ಈ ಮನವಿಗೆ ಸ್ಪಂದಿಸಿಲ್ಲ.

ಮುಂದೆ ಓದಿ ...
  • Share this:

ಬೆಂಗಳೂರು (ಮಾರ್ಚ್ 04); ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಚರ್ಚೆ ನಡೆಸಲು ಅವಕಾಶ ಕೋರಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ ಇಂದು ರಾಜ್ಯಪಾಲರಿಗೆ ದೂರು ನೀಡಿದೆ.

ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಸ್ವಾತಂತ್ರ್ಯ ಹೋರಾಟ ಸಂಗ್ರಾಮಕ್ಕೆ ಅವಮಾನಿಸಿದ ಶಾಸಕ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ಪದಚ್ಯುತಗೊಳಿಸಬೇಕು, ಅವರ ವಿರುದ್ಧ ಚರ್ಚೆಗೆ ಸದನದಲ್ಲಿ ಅವಕಾಶ ಕಲ್ಪಿಸಬೇಕು ಎಂದು ಕಾಂಗ್ರೆಸ್ ಕಳೆದ ಎರಡು ದಿನದಿಂದ ಸದನದಲ್ಲಿ ಒತ್ತಾಯಿಸುತ್ತಿದೆ. ಆದರೆ, ರಾಜ್ಯಪಾಲ ವಿಶ್ವೇಶ್ವರ ಹೆಗಡೆ ಕಾಗೇರಿ ಕಾಂಗ್ರೆಸ್ ನಾಯಕರ ಈ ಮನವಿಗೆ ಸ್ಪಂದಿಸಿಲ್ಲ.

ಹೀಗಾಗಿ ಇಂದು ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿರುವ ಕಾಂಗ್ರೆಸ್ ನಿಯೋಗ, “ರಾಜ್ಯಪಾಲರು ಕೂಡಲೇ ಮಧ್ಯ ಪ್ರವೇಶಿಸಿ ಸಂವಿಧಾನದ 175ನೇ ಪರಿಚ್ಛೇದದ ಅಡಿಯಲ್ಲಿ ಸ್ಪೀಕರ್​ಗೆ ನಿರ್ದೇಶನ ನೀಡಬೇಕು, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಚರ್ಚೆಗೆ ಅವಕಾಶ ಕಲ್ಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ನಿಯೋಗದಲ್ಲಿ ಮಾಜಿ ಸಚಿವ ಯು.ಟಿ. ಖಾದರ್, ಆರ್.ವಿ. ದೇಶಪಾಂಡೆ, ಹೆಚ್.ಕೆ. ಪಾಟೀಲ್. ಎಸ್.ಆರ್. ಪಾಟೀಲ್ ಇದ್ದರು.

ಇದನ್ನೂ ಓದಿ : ಹೆಚ್.ಡಿ. ದೇವೇಗೌಡರ ಕುಟುಂಬ ಪೂಜಿಸುವ ದೇವಾಲಯದಲ್ಲಿ ಪೂಜೆಗಾಗಿ ಅರ್ಚಕರ ಕಿತ್ತಾಟ, ದೇಗುಲಕ್ಕೆ ಬೀಗ

First published: