ಕಲ್ಲು ತೂರಾಡಿದ್ದ ಕಾಂಗ್ರೆಸ್ ಪುಡಾರಿಗಳಿಂದಲೇ ಪೊಲೀಸರ ವಿರುದ್ಧ ಆರೋಪ: ಸಚಿವ ಶ್ರೀರಾಮುಲು ಕೋಪ

ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆಯೇ ಹೊರತು ಭಿನ್ನಮತದ ಚಟುವಟಿಕೆ ನಡೆಸಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಅವರನ್ನು ತಾವು ಭೇಟಿ ಮಾಡಿದ್ದಾಗ ರಾಜಕೀಯ ವಿಚಾರ ಚರ್ಚಿಸಿಲ್ಲ

 ಸಚಿವ ಶ್ರೀರಾಮುಲು

ಸಚಿವ ಶ್ರೀರಾಮುಲು

  • Share this:
ವಿಜಯಪುರ(ಫೆ.19): ಮಂಗಳೂರು ಗೋಲಿಬಾರ್ ಬಗ್ಗೆ ಕಾಂಗ್ರೆಸ್ ನಾಯಕರು ಸದನದಲ್ಲಿ ಗದ್ದಲ ನಡೆಸುತ್ತಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಕಾಂಗ್ರೆಸ್ಸಿನ ಪುಡಾರಿಗಳು ಕಲ್ಲು ತೂರಾಟ ನಡೆಸಿದ ಬಗ್ಗೆ ವಿಡಿಯೋಗಳಿವೆ. ಆದರೆ, ಕಾಂಗ್ರೆಸ್ ನಾಯಕರು ಪೊಲೀಸರ ವಿರುದ್ಧವೇ ಆರೋಪ ಮಾಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಆಪಾದಿಸಿದ್ದಾರೆ.

ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಸರ್ಕಾರ ಪಿಎಫ್​ಐ, ಎಸ್​ಡಿಪಿಐ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿತ್ತು. ಆದರೆ, ಹಿಂದೂಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆದಿರಲಿಲ್ಲ. ಕಾಂಗ್ರೆಸ್ ಈಗ ಮತ ರಾಜಕೀಯ ಮಾಡುತ್ತಿದೆ. ಪಾಕಿಸ್ತಾನಕ್ಕೆ ಜೈ ಎನ್ನುವವರ ಪರ ಕಾಂಗ್ರೆಸ್ಸಿಗರು ಮಾತನಾಡುತ್ತಿದ್ದಾರೆ. ಮತ ರಾಜಕೀಯಕ್ಕಾಗಿ ಕಾಂಗ್ರೆಸ್ ನಾಯಕರು ಹೀಗೆ ವರ್ತಿಸುತ್ತಿದ್ದಾರೆ. ಆದರೆ, ಪಾಕಿಸ್ತಾನದ ಪರ ಜೈ ಎನ್ನುವವರ ವಿರುದ್ಧ ನಮ್ಮ ಸರಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ವಿಜಯನಗರ ನಂತರ ಹರಪನಹಳ್ಳಿ ಹೊಸ ಜಿಲ್ಲೆಗೆ ಆಗ್ರಹಿಸಿ ಬಿಜೆಪಿ ಶಾಸಕ ಕರುಣಾಕರರೆಡ್ಡಿ ಸಿಎಂ ಭೇಟಿ ಮಾಡಿದ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಹೊಸ ಜಿಲ್ಲೆ ರಚನೆ ವಿಚಾರ ಸಿಎಂ ವಿವೇಚನೆ ಬಿಟ್ಟಿದ್ದು.  ಈ ಹಿಂದೆಯೂ ನಾನು ಇದೇ ನಿಲುವನ್ನು ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಚಿವ ಜಗದೀಶ್ ಶೆಟ್ಟರ್ ಮನೆಯಲ್ಲಿ ಶಾಸಕರು ಸಭೆ ನಡೆಸಿದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಉತ್ತರ ಕರ್ನಾಟಕದ ಶಾಸಕರು ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಿದ್ದಾರೆಯೇ ಹೊರತು ಭಿನ್ನಮತದ ಚಟುವಟಿಕೆ ನಡೆಸಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಅವರನ್ನು ತಾವು ಭೇಟಿ ಮಾಡಿದ್ದಾಗ ರಾಜಕೀಯ ವಿಚಾರ ಚರ್ಚಿಸಿಲ್ಲ. ಯಡಿಯೂರಪ್ಪ ನಮ್ಮ ಪರಮೋಚ್ಚ ನಾಯಕರು.  ಅವರು ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೂರು ತಿಂಗಳಲ್ಲಿ ರಾಜ್ಯದಲ್ಲಿ ವೈದ್ಯರ ಕೊರತೆ ನೀಗಿಸಲಾಗುವುದು:

ಕೆಪಿಎಸ್‌ಸಿ ಬದಲು ಸ್ಥಳೀಯವಾಗಿ ಜಿಲ್ಲಾ ಮಟ್ಟದಲ್ಲಿಯೇ ವೈದ್ಯರುಗಳನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.  ಆದರೆ, ದಂತ ವೈದ್ಯರನ್ನು ಮಾತ್ರ ಬೆಂಗಳೂರಿನಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ನಿವಾರಣೆಯಾಗಲಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ಇದನ್ನೂ ಓದಿ : ಕನಕಪುರ ಮೆಡಿಕಲ್​ ಕಾಲೇಜ್​ ಸ್ಥಳಾಂತರ ಎಷ್ಟು ಸರಿ?; ಸಿಎಂ ಭೇಟಿಯಾಗಿ ಸರ್ಕಾರದ ಕ್ರಮ ಪ್ರಶ್ನಿಸಿದ ಡಿಕೆ ಶಿವಕುಮಾರ್​​

ಇದೇ ವೇಳೆ, ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪ ಇರುವ ಅನಾಮಧೇಯ ಪತ್ರವೊಂದು ಹರಿದಾಡುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಎಲ್ಲ ವಿಷಯಗಳನ್ನು ಎದುರಿಸಲು ಸಮರ್ಥರಿದ್ದಾರೆ. ಮುಖ್ಯಮಂತ್ರಿಯಾದ ಬಳಿಕವಂತೂ ಇನ್ನೂ ಜೋರಾಗಿದ್ದಾರೆ ಎಂದು ಸಿಎಂ ಪರ ಬ್ಯಾಟಿಂಗ್ ನಡೆಸಿದರು.
First published: