HOME » NEWS » State » CONGRESS LODGES COMPLAINT AGAINST MINISTER MADHUSWAMY MAK

ರೈತ ಮಹಿಳೆಯನ್ನು ಸಚಿವ ಮಾಧುಸ್ವಾಮಿ ನಿಂದಿಸಿದ ಪ್ರಕರಣ; ಪೊಲೀಸ್‌ ಮಹಾನಿರ್ದೇಶಕರಿಗೆ ಕಾಂಗ್ರೆಸ್‌ ದೂರು

ಇಂದು ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಅವರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ಕಾರ್ಯಕರ್ತರು, ಸಚಿವ ಮಾಧುಸ್ವಾಮಿ ರೈತ ಮಹಿಳೆಯ ಮೇಲೆ ದರ್ಪ ತೋರಿಸಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಿದ್ದಾರೆ.

news18-kannada
Updated:May 21, 2020, 2:41 PM IST
ರೈತ ಮಹಿಳೆಯನ್ನು ಸಚಿವ ಮಾಧುಸ್ವಾಮಿ ನಿಂದಿಸಿದ ಪ್ರಕರಣ; ಪೊಲೀಸ್‌ ಮಹಾನಿರ್ದೇಶಕರಿಗೆ ಕಾಂಗ್ರೆಸ್‌ ದೂರು
ರೈತ ಮಹಿಳೆಯನ್ನು ಒತ್ತಾಯಪೂರ್ವಕವಾಗಿ ಹೊರ ಹಾಕುತ್ತಿರುವ ಪೊಲೀಸರು.
  • Share this:
ಬೆಂಗಳೂರು (ಮೇ 21); ಕಾನೂನು ಸಚಿವ ಮಾಧುಸ್ವಾಮಿ ಬುಧವಾರ ಕೋಲಾರದಲ್ಲಿ ರೈತ ಮಹಿಳೆಯನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಕಾರ್ಯಕರ್ತರು ಇಂದು ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ಗೆ ದುರು ನೀಡಿದ್ದಾರೆ.

ಕೆಸಿ ವ್ಯಾಲಿ ಯೋಜನೆಯಿಂದ ತುಂಬಿದ ಕೆರೆಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ನಿನ್ನೆ ಕೋಲಾರಕ್ಕೆ ಆಗಮಿಸಿದ್ದರು.  ಇದೇ ವೇಳೆ ಅವರು ಅಗ್ರಹಾರ ಕೆರೆ ವೀಕ್ಷಣೆಗಾಗಿಯೂ ಸ್ಥಳಕ್ಕೆ ಆಗಮಿಸಿದ್ದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಕೋಲಾರ ಜಿಲ್ಲಾದ್ಯಕ್ಷೆ ನಳಿನಿ ಗೌಡ ಹಾಗೂ ಮತ್ತೊರ್ವ ಮಹಿಳಾ ಹೋರಾಟಗಾರ್ತಿ ಸಚಿವರಿಗೆ ಮನವಿ ನೀಡಲು ಮುಂದಾದರು. ಅಲ್ಲದೆ, "ದಯವಿಟ್ಟು ಅಗ್ರಹಾರ ಕೆರೆಯಲ್ಲಿನ ಒತ್ತುವರಿಯನ್ನು ತೆರವುಗೊಳಿಸಿ" ಎಂದು ಸಚಿವರ ಬಳಿ ವಿನಂತಿಸಿಕೊಂಡಿದ್ದರು. ಆದರೆ, ಈ ವೇಳೆ ಗರಂ ಆದ ಸಚಿವರು "ನೀನು ತೆರವು ಮಾಡ್ತೀಯೇನಮ್ಮ" ಎಂದು ಗದರಿಸಲು ಶುರು ಮಾಡಿದ್ದರು.

ದೂರಿನ ಪ್ರತಿ.


ಸಚಿವರ ಮಾತಿಗೆ ಉತ್ತರಿಸಿದ್ದ ರೈತ ಮಹಿಳಾ, "ಅದು ನಮ್ಮ ಕೆಲಸ ಅಲ್ಲಾ ಸಾರ್‌..! ನಿಮ್ಮ ಕೆಲಸ ಅದನ್ನು ನೀವು ಮಾಡಿ" ಎಂದದ್ದೇ ತಪ್ಪಾಯಿತೇನೋ? ಕೂಡಲೇ ತಾಳ್ಮೆ ಕಳೆದುಕೊಂಡು ಕೆಂಡಾಮಂಡಲವಾದ ಸಚಿವ ಮಾಧುಸ್ವಾಮಿ, "ನಾನು ಬಾರಿ ಕೆಟ್ಟ ಮನುಷ್ಯ ಇದ್ದಿನಿ.. ಬಾಯಿ ಮುಚ್ಚು ರಾಸ್ಕಲ್" ಎಂದು ಮಹಿಳೆಯರನ್ನು ಗದರಿಸಿದ್ದಾರೆ. ಅಲ್ಲದೆ, ಪೊಲೀಸ್‌ ಅಧಿಕಾರಿಗಳನ್ನು ಕರೆದು ಕೂಡಲೇ ಇಬ್ಬರೂ ಮಹಿಳೆಯರನ್ನೂ ಅಲ್ಲಿಂದ ಒತ್ತಾಯಪೂರ್ವಕವಾಗಿ ಹೊರಹಾಕಿಸಿದ್ದಾರೆ.

ನೂರಾರು ಜನ ಹಾಗೂ ಸ್ವತಃ ಪೊಲೀಸರ ಎದುರು ಕಾನೂನು ಸಚಿವ ರೈತ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿರುವುದು ಇದೀಗ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯ ಕಾಂಗ್ರೆಸ್‌ ಘಟಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು ಕೂಡಲೇ ಸಚಿವ ಮಾಧುಸ್ವಾಮಿ ಕ್ಷಮೆ ಕೇಳಬೇಕು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌ ಅವರನ್ನು ಭೇಟಿ ಮಾಡಿರುವ ಕಾಂಗ್ರೆಸ್‌ ಕಾರ್ಯಕರ್ತರು, "ಸಚಿವ ಮಾಧುಸ್ವಾಮಿ ರೈತ ಮಹಿಳೆಯ ಮೇಲೆ ದರ್ಪ ತೋರಿಸಿದ್ದಾರೆ. ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಹೀಗಾಗಿ ಸಚಿವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು" ಎಂದು ದೂರು ನೀಡಿದ್ದಾರೆ.ಇದನ್ನೂ ಓದಿ ; ರೈತ ಮಹಿಳೆಯರನ್ನು ಸಾರ್ವಜನಿಕವಾಗಿ ನಿಂದಿಸಿದ ಸಚಿವ ಮಾಧುಸ್ವಾಮಿ; ಕ್ಷಮೆ-ತಲೆದಂಡಕ್ಕೆ ಸಿದ್ದರಾಮಯ್ಯ ಆಗ್ರಹ
First published: May 21, 2020, 2:40 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories