ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ (Former Minister Ramesh Jarkiholi) ಅವರನ್ನು ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ (Gokak Assembly Constituency) ಕಟ್ಟಿ ಹಾಕಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ಗೋಕಾಕ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ರಮೇಶ್ ಜಾರಕಿಹೊಳಿ ಆಪ್ತ ಮಹೇಶ್ ಕುಮಟಳ್ಳಿ (Mahesh Kumatalli) ಅವರನ್ನು ಗೆಲ್ಲಿಸಲು ಪಣ ತೊಟ್ಟಿದ್ದಾರೆ. ಇತ್ತ ರಾಜಕೀಯ ಬದ್ಧ ವೈರಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಪ್ತ ನಾಗೇಶ್ ಮನ್ನೋಳಕರ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ರಮೇಶ್ ಜಾರಕಿಹೊಳಿ ಯಶಸ್ವಿಯಾಗಿದ್ದರು. ಬೆಳಗಾವಿಯಲ್ಲಿ ಆಪ್ತರನ್ನು ಗೆಲ್ಲಿಸುವ ಮೂಲಕ ತಮ್ಮದೇ ಸಾಮ್ರಾಜ್ಯ ವಿಸ್ತರಿಸಿಕೊಳ್ಳುವ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಕೆಲಸ ಮಾಡುತ್ತಿದ್ದಾರೆ. ಇತ್ತ ಕಾಂಗ್ರೆಸ್ ಸದ್ದಿಲ್ಲದೇ ಸ್ವಕ್ಷೇತ್ರದಲ್ಲಿಯೇ ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಲು ಚುನಾವಣಾ ರಣತಂತ್ರ ಹೆಣೆದಿದೆ.
ಈ ಬಾರಿ ಗೋಕಾಕ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಹಾಂತೇಶ ಕಡಾಡಿ ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ್ ಪೂಜಾರಿ ಅಸಮಾಧಾನಗೊಂಡಿದ್ದರು. ಇದೀಗ ಅಶೋಕ್ ಪೂಜಾರಿ ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕರು ಯಶಸ್ವಿಯಾಗಿದ್ದಾರೆ.
ಪಂಚಮಸಾಲಿ ಜೊತೆಗೆ ಅಹಿಂದ ಮತ ಬ್ಯಾಂಕ್
ಸತೀಶ್ ಜಾರಕಿಹೊಳಿ, ಲಕ್ಷ್ಮಣ ಸವದಿ, ಅಶೋಕ ಪಟ್ಟಣ, ಚನ್ನರಾಜ್ ಹಟ್ಟಿಹೊಳಿ ತೀವ್ರ ಪ್ರಯತ್ನದ ಫಲವಾಗಿ ಅಶೋಕ್ ಪೂಜಾರಿ ಕಾಂಗ್ರೆಸ್ ಪರ ಪ್ರಚಾರ ನಡೆಸಲು ಒಪ್ಪಿಕೊಂಡಿದ್ದಾರೆ. ಪಂಚಮಸಾಲಿ ಜೊತೆಗೆ ಅಹಿಂದ ಮತ ಬ್ಯಾಂಕ್ ಮೂಲಕ ರಮೇಶ್ ಜಾರಕಿಹೊಳಿ ಅವರಿಗೆ ಶಾಕ್ ಕೊಡಲು ಕಾಂಗ್ರೆಸ್ ತಯಾರಿ ನಡೆಸಿದೆ.
ಜಾರಕಿಜೊಳಿ ವಿರುದ್ಧ ಸ್ಪರ್ಧಿಸಿದ್ದ ಪೂಜಾರಿ
ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಗೋಕಾಕ್ನಲ್ಲಿ ಅಶೋಕ್ ಪೂಜಾರಿ ಕ್ಯಾಂಪೇನ್ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಾಂತೇಶ ಕಡಾಡಿ ಗೆಲ್ಲಿಸಲು ಮುಂದಾಗಿದ್ದಾರೆ. ಅಶೋಕ್ ಪೂಜಾರಿ 2008, 2013, 2018, 2019ರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪರ್ಧೆ ಮಾಡಿದ್ದರು.
ಈ ಸಲ ಟಿಕೆಟ್ ಸಿಗದ ಹಿನ್ನೆಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಅಶೋಕ್ ಪೂಜಾರಿ ಮುಂದಾಗಿದ್ದರು. ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಸ್ಥಳೀಯ ನಾಯಕರೆಲ್ಲಾ ಜೊತೆಯಾಗಿ ಅಶೋಕ್ ಪೂಜಾರಿಯವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಶೋಕ್ ಪೂಜಾರಿ ಹೇಳಿಕೆ
ಗೋಕಾಕ್ ಚುನಾವಣೆ ಮಹತ್ವದ ಚುನಾವಣೆಯಾಗಿದೆ. ವ್ಯವಸ್ಥೆ ಬದಲಾವಣೆಯ ಹೋರಾಟ ಇದೆ. ಕಾಂಗ್ರೆಸ್ ನನಗೆ ಮೋಸ ಮಾಡಿದ್ದಾರೆ ಎಂಬುದು ಅಭಿಮಾನಿಗಳ ಭಾವನೆ. ಉದ್ದೇಶ ಈಡೇರಿಕೆ ಆಗಬೇಕು ಅಂದ್ರೆ ತ್ಯಾಗ ಮಾಡುವುದು ಅನಿವಾರ್ಯ.ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸೂಕ್ತ ಸ್ಥಾನಮಾನದ ಭರವಸೆ ನೀಡಿದ್ದಾರೆ ಎಂದು ಅಶೋಕ್ ಪೂಜಾರಿ ಹೇಳಿದ್ದಾರೆ.
ಇದನ್ನೂ ಓದಿ: Hubballi Politics: ಕಾಂಗ್ರೆಸ್ ಪಕ್ಷಕ್ಕೆ ಖುಷಿಯಿಂದ ಬಂದ ಶೆಟ್ಟರ್ಗೆ ಆರಂಭಿಕ ವಿಘ್ನ
ವಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ 30 ವರ್ಷಗಳ ಒಡನಾಟ ಸಹ ಇದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಹ ಮಾತುಕತೆ ನಡೆಸಿದ್ದಾರೆಕಡಾಡಿ ಅಲ್ಲ ನಾವೇ ಅಭ್ಯರ್ಥಿ ಎನ್ನುವ ರೀತಿಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ಕಾರ್ಯಕರ್ತರಿಗೆ ಕರೆ ಕೊಟ್ಟರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ