ಕಲ್ಲು ಬಂಡೆಗಳನ್ನು ನುಂಗಿ ಮಣ್ಣು ಬಗೆದ ಡಿಸೈನ್ ವೀರರಿಗೆ ನೆಲ, ಜಲ ಈಗ ನೆನಪಿಗೆ ಬಂದಿದೆ: DK Brothersಗೆ HDK ಗುದ್ದು

ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ.

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ

  • Share this:
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ (Mekedatu Project) ಕುರಿತು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (Former HD Kumaraswamy) ಮತ್ತೊಮ್ಮೆ ಡಿಕೆ ಸೋದರರ (DK Brothers) ವಿರುದ್ಧ ಟ್ವೀಟಾಸ್ತ್ರ ಪ್ರಯೋಗಿಸಿದ್ದಾರೆ. ರಾಮನಗರ (Ramanagara) ಮತ್ತು ಕನಕಪುರ (Kanakapura) ಯಾರು ಸ್ವತ್ತು ಅಲ್ಲ ಎಂದು ಕಾಲೆಳೆದಿದ್ದಾರೆ. ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಅಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ?. ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ವ್ಯಂಗ್ಯ ಮಾಡಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.ಇದನ್ನೂ ಓದಿ:  ಮೇಕೆದಾಟು ರಾಜಕಾರಣ ಅಂದ್ರೆ ಅಡ್ವಾಣಿ ಮಾಡಿದ ರಥಯಾತ್ರೆ ಏನು? DK Shivakumar ಪ್ರಶ್ನೆ

ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ

ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ.ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಲೇವಡಿ ಮಾಡಿದ್ದಾರೆ.

‘ಸುಳ್ಳಿನಯಾತ್ರೆ’ಗೆ ಹೊರಟವರು ಎಂದ ಎಚ್​ಡಿಕೆ! 

ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ 'ಸುಳ್ಳಿನ ಸರಮಾಲೆ'ಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ 'ರಾಜಕೀಯ ಹುಂಬತನ'ವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ 'ಸುಳ್ಳಿನಯಾತ್ರೆ'ಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ" ಎಂದು ಆರೋಪಿಸಿದ್ದಾರೆ.ಇದನ್ನೂ ಓದಿ:  ವೇದಿಕೆ ಮೇಲೆಯೇ ಸಂಸದ-ಸಚಿವರ ‘ಗಂಡಸ್ತನ’ದ ಗಲಾಟೆ.. ಹೈಡ್ರಾಮಾ ಕಂಡು ಪೆಚ್ಚಾದ CM Bommai

‘ಅಬ್ಬಾ..! ʼಸಿದ್ದಸುಳ್ಳುಶೂರ!!ʼ. ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-DPR ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಸಿಎಂ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು?.

ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ?‘ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ನಮಗೆ ಅಧಿಕಾರ ಒಂದೇ ಮುಖ್ಯವಲ್ಲ ಎಂದ ಡಿಕೆಶಿ

ಭವಿಷ್ಯದಲ್ಲಿ ನಮಗೆ ಜನ ಸಂಪೂರ್ಣ ಬೆಂಬಲ ಕೊಡುತ್ತಾರೆ ಎಂಬ ಸೂಚನೆ ಸಿಕ್ಕಿದೆ. ಮೇಕೆದಾಟು ಯೋಜನೆ (Mekedatu Project) ಪಾದಯಾತ್ರೆಯನ್ನು ರಾಜಕಾರಣಕ್ಕಾಗಿ ಎಂದು ಬಿಂಬಿಸುತ್ತಿದ್ದಾರೆ. ನಮಗೆ ಅಧಿಕಾರ ಒಂದೇ ಮುಖ್ಯವಲ್ಲ. ನಮಗೆ ಸಾಮಾಜಿಕ ಕಳಕಳಿಯಿದೆ. ಬಹುತೇಕ ವಿಷಯಗಳಲ್ಲಿ ಹೋರಾಟ ನಡೆಸಿಕೊಂಡು ಬಂದಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರು.
Published by:Mahmadrafik K
First published: