HOME » NEWS » State » CONGRESS MLA BK SANGAMESH SON ARRESTED IN CHITRADURGA SESR

BK Sangamesh: ಕಾಂಗ್ರೆಸ್​ ಶಾಸಕ ಸಂಗಮೇಶ್​ ಮಗ ಬಸವೇಶ್​ ಬಂಧನ

ಕಾಂಗ್ರೆಸ್​ ಮುಖಂಡ ಬಸವೇಶ್​ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ದೂರಿನ ಅನ್ವಯ ಬಸವೇಶ್​ ಅವರನ್ನು ಬಂಧಿಸಲಾಗಿದೆ.

news18-kannada
Updated:March 6, 2021, 2:55 PM IST
BK Sangamesh: ಕಾಂಗ್ರೆಸ್​ ಶಾಸಕ ಸಂಗಮೇಶ್​ ಮಗ ಬಸವೇಶ್​ ಬಂಧನ
ಶಾಸಕ ಸಂಗಮೇಶ್
  • Share this:
ಚಿತ್ರದುರ್ಗ (ಮಾ. 6): ಭದ್ರಾವತಿಯಲ್ಲಿ ನಡೆದ ಕಬ್ಬಡಿ ಪಂದ್ಯಾವಳಿ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್​ ಶಾಸಕ ಸಂಗಮೇಶ್​ ಅವರ ಮಗ ಬಸವೇಶ್​ ಅವರನ್ನು ಬಂಧಿಸಲಾಗಿದೆ. ಚಿತ್ರದುರ್ಗದಲ್ಲಿ ಇದ್ದ ಬಸವೇಶ್​ ಅವರನ್ನು ಭದ್ರಾವತಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಭಾನುವಾರ ನಡೆದ ಕಬ್ಬಡ್ಡಿ ಪಂದ್ಯಾವಳಿ ಅಂತಿಮ ಪಂದ್ಯಾವಳಿ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಈ ವೇಳೆ ಕಾಂಗ್ರೆಸ್​ ಮುಖಂಡ ಬಸವೇಶ್​ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ದೂರಿನ ಅನ್ವಯ ಬಸವೇಶ್​ ಅವರನ್ನು ಬಂಧಿಸಲಾಗಿದೆ.

ಏನಿದು ಗಲಭೆ

ಕಳೆದ ಭಾನುವಾರ ಭದ್ರಾವತಿಯಲ್ಲಿ ನಡೆದ ಕಬ್ಬಡ್ಡಿ ಪಂದ್ಯಾವಳಿಯ ಅಂತಿಮ ಪಂದ್ಯದ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಹಲ್ಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್​ ಘೋಷಣೆ ಕೂಗಿದ ಹಿನ್ನಲೆ ಕಾಂಗ್ರೆಸ್​ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ನಗರದಲ್ಲಿ ಬಿಗುವಿನ ವಾತವಾರಣ ನಿರ್ಮಾಣವಾಗಿ ಎರಡು ದಿನಗಳ ಕಾಲ ನಗರದಲ್ಲಿ ನಿಷೇಧಾಜ್ಞೆಯನ್ನು ಪೊಲೀಸರು ಹೇರಿದ್ದರು.

ಈ ಘಟನೆ ಬಳಿಕ ಸಂಗಮೇಶ್​ ಮಗ ಸೇರಿದಂತೆ ಏಳು ಜನರ ವಿರುದ್ಧ ಹಾಗೂ ಕಾಂಗ್ರೆಸ್​ನ 20 ಮಂದಿ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣ ದಾಖಲಾಗುತ್ತಿದ್ದಂತೆ ಬಸವೇಶ್​ ನಾಪತ್ತೆಯಾಗಿದ್ದರು.

ಇದನ್ನು ಓದಿ: ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದ ಕೈ ಕಾರ್ಯಕರ್ತರ ಅಮಾನತು; ಪಕ್ಷದಲ್ಲಿ ಏಕಾಂಗಿಯಾದರಾ ತನ್ವೀರ್ ಸೇಠ್?

ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಈ ಘಟನೆ ವಿರುದ್ಧ ಜಿಲ್ಲಾ ಬಿಜೆಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.
ಇನ್ನು ಈ ಘಟನೆ ಕುರಿತು ಪ್ರತಿಕ್ರಿಯಿಸಿದ್ದ ಕಾಂಗ್ರೆಸ್​ ಶಾಸಕ ಸಂಗಮೇಶ್​ ಜಿಲ್ಲೆಯಲ್ಲಿ ತಾವೊಬ್ಬರೇ ಕಾಂಗ್ರೆಸ್​ ಅಭ್ಯರ್ಥಿ ಗೆದ್ದಿದ್ದು, ಇದು ಶಾಂತಿ ಕದಡುವ ಉದ್ದೇಶದಿಂದ ನಡೆದ ರಾಜಕೀಯ ಪಿತೂರಿ ಎಂದು ಆರೋಪಿಸಿದ್ದರು.ಭದ್ರಾವತಿಯಲ್ಲಿ ತಮ್ಮ ವಿರುದ್ಧ ಕೇಸ್ ದಾಖಲಿಸಿದ್ದನ್ನು ಖಂಡಿಸಿ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ್ ಇಂದು ವಿಧಾನಸಭಾ ಬಜೆಟ್ ಅಧಿವೇಶನದಲ್ಲಿ ಶರ್ಟ್​ ಬಿಚ್ಚಿ ಪ್ರತಿಭಟನೆ ನಡೆಸಿದರು. ಇದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆಕ್ರೋಶಕ್ಕೂ ಕಾರಣವಾಯಿತು. ಸದನದಲ್ಲಿ ಶರ್ಟ್ ಬಿಚ್ಚಿದ್ದ ಸಂಗಮೇಶ್ ಅವರಿಗೆ ಶಿಕ್ಷೆ ನೀಡಿದ ಸ್ಪೀಕರ್ ಕಾಗೇರಿ ಸಂಗಮೇಶ್ ಅವರನ್ನು ಒಂದು ವಾರ ಸದನದಿಂದ ಅಮಾನತು ಮಾಡಿದರು. ಸದನದಲ್ಲಿ ಅಸಭ್ಯವಾಗಿ ವರ್ತಿಸಿದ ಸಂಗಮೇಶ್ ಅವರನ್ನು ಅಮಾನತು ಮಾಡಬೇಕೆಂದು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಸದನದಲ್ಲಿ ಮಂಡನೆ ಮಾಡಿದರು. ಅದನ್ನು ಅಂಗೀಕರಿಸಿದ ಸ್ಪೀಕರ್ ಕಾಗೇರಿ 1 ವಾರ ಸಂಗಮೇಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದರು.
Published by: Seema R
First published: March 6, 2021, 2:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories