ಬೆಳಗಾವಿ: ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಗ್ರಾಮೀಣ (Belagavi Rural) ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ (Congress MLA Laxmi Hebbalkar), ತಮ್ಮ ಮೇಲೆ ಲೋಕಾಯುಕ್ತ (Lokayukta Raid), ಐಟಿ ದಾಳಿ (IT Raid) ನಡೆಯಲಿದೆ ಎಂಬ ವಿಷಯವನ್ನು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಸುಮಾರು 50ಕ್ಕೂ ಹೆಚ್ಚು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ (Congress And JDS Leaders) ನಿವಾಸಗಳ ಮೇಲೆ ಲೋಕಾಯುಕ್ತ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಲಿದ್ದ್ದಾರೆ ಎಂಬ ವಿಷಯವನ್ನು ಹೇಳಿದರು.
ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ (Karnataka Assembly Election 2023) ಇನ್ನೂ 10 ದಿನ ಉಳಿದಿದೆ. ರಾಜ್ಯದಲ್ಲಿ ಈ ಸಲ ಕಾಂಗ್ರೆಸ್ (Congress) ಪರವಾದ ವಾತಾವರಣ ಇದೆ. ರಾಜ್ಯದ ಮತದಾರರು ಕಾಂಗ್ರೆಸ್ ಸರ್ಕಾರ ರಚನೆ ಮಾಡಲು ತೀರ್ಮಾನ ಮಾಡಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಜನ ಭರವಸೆ ಇಟ್ಟಿದ್ದಾರೆ. ಬಿಜೆಪಿ ಹತಾಶೆಯಿಂದ ವಾಮಮಾರ್ಗ ಹಿಡಿಯುವಂತ ಸುದ್ದಿ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.
ದಾಳಿಯ ಮುನ್ಸೂಚನೆ ಸಿಕ್ಕಿದೆಯಂತೆ!
ಅಭ್ಯರ್ಥಿಗಳು ಮತ್ತು ಅವರ ಸಂಬಂಧಿಕರ ಮೇಲೆ 50 ಜನರ ಮೇಲೆ ಲೋಕಾಯುಕ್ತ, ಐಟಿ ದಾಳಿ ಸಂಬಂಧ ಇದೆ. ಕಾರ್ಯಕರ್ತರು ಗೊಂದಲ ಸೃಷ್ಟಿಯಾಗುತ್ತದೆ. ಒಂದು, ಎರಡು ದಿನದಲ್ಲಿ ದಾಳಿಯ ಮೂನ್ಸುಚನೆ ಸಿಕ್ಕಿದೆ ಎಂದು ಸ್ಫೋಟಕ ವಿಷಯವನ್ನು ತಿಳಿಸಿದರು.
50 ಜನರಲ್ಲಿ ನನ್ನ ಹೆಸರಿದೆ
ವಾಮಮಾರ್ಗ ಕೈ ಬಿಟ್ಟು ಸತ್ಯ, ಧರ್ಮದ ಮೇಲೆ ಚುನಾವಣೆ ಆಗಬೇಕು. ರಾಜ್ಯದ ಕಾಂಗ್ರೆಸ್ ಪಕ್ಷದ ವಕ್ತಾರೆಯಾಗಿ ಸುದ್ದಿಗೋಷ್ಠಿ ಮಾಡುತ್ತಿದ್ದೇನೆ. 50 ಜನರಲ್ಲಿ ನನ್ನ ಹೆಸರು ಸಹ ಇದೆ ಎಂದು ಮಾಹಿತಿ ಇದೆ ಎಂದರು.
ಒಂದು ಸಾವಿರ ಅಧಿಕಾರಿಗಳಿಂದ ದಾಳಿಯ ಮಾಹಿತಿ
ನಮ್ಮ ಜಿಲ್ಲೆಯಲ್ಲಿ ಮೂರು ಜನರನ್ನು ಟಾರ್ಗೆಟ್ ಮಾಡಿದ್ದಾರೆ. 50 ಜನರಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ. ಜನರ ಭಾವನೆ ಕದಡಲು ಈ ರೀತಿಯ ಪ್ರಯತ್ನಿಸಲಾಗುತ್ತಿದೆ. 1 ಸಾವಿರ ಆದಾಯ ತೆರಿಗೆ ಅಧಿಕಾರಿಗಳು ಬಂದಿರುವ ಮಾಹಿತಿಯನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೇವಾಲಾ ಹೇಳಿದ್ದಾರೆ ಎಂದರು.
ಇದನ್ನೂ ಓದಿ: Hubballi: ಸೋಲಿಸಲು ಕರೆ ನೀಡಿದ್ದ ಯಡಿಯೂರಪ್ಪಗೆ ಟಕ್ಕರ್ ಕೊಟ್ಟ ಜಗದೀಶ್ ಶೆಟ್ಟರ್
ಚುನಾವಣೆ ಬಂದಾಗ ಬೇರೆ ಬೇರೆ ರಾಜ್ಯದಲ್ಲಿ ಈ ರೀತಿ ಆಗಿದೆ. ಹೆದರಿಸುವ ಪ್ರಯತ್ನ ಸಹ ಅನೇಕ ಕಡೆಗಳಲ್ಲಿ ಆಗಿದೆ ಎಂದು ಬಿಜೆಪಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿಕಾರಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ