ಬಿಜೆಪಿ ದುಡ್ಡು, ಕಾಂಗ್ರೆಸ್​​ಗೆ ವೋಟು: 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ ಎಂದ ಸಿದ್ದರಾಮಯ್ಯ

ಉಪಚುನಾವಣೆ ಪ್ರಚಾರದ ಕೊನೆಯ ದಿನಕ್ಕೆ ತಲುಪಿದ್ದೇವೆ. ಎಷ್ಟು ಕ್ಷೇತ್ರ ಗೆಲ್ಲುತ್ತೇವೆ ಎನ್ನುವುದು ಪ್ರಶ್ನೆಯೇ ಅಲ್ಲ. ರಾಜ್ಯದ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು ಸಿದ್ದರಾಮಯ್ಯ.

news18-kannada
Updated:December 3, 2019, 1:17 PM IST
ಬಿಜೆಪಿ ದುಡ್ಡು, ಕಾಂಗ್ರೆಸ್​​ಗೆ ವೋಟು: 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ ಎಂದ ಸಿದ್ದರಾಮಯ್ಯ
ಸಿದ್ದರಾಮಯ್ಯ
  • Share this:
ಮೈಸೂರು(ಡಿ.03): 'ಬಿಜೆಪಿಯ ದುಡ್ಡು, ಕಾಂಗ್ರೆಸ್​​ಗೆ ವೋಟು' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬಿಜೆಪಿ ಚುನಾವಣೆಗಾಗಿ ಬೇಕಾಬಿಟ್ಟಿ  ಹಣ ಖರ್ಚು ಮಾಡುತ್ತಿದೆ. ಹಾಗಾಗಿ ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್​ಗೆ​ ವೋಟ್​​​​ ಮಾಡಿ ಎಂದು ಮತದಾರರಿಗೆ ಮನವಿ ಮಾಡಿದ್ದಾರೆ.

ಮಂಗಳವಾರ(ಇಂದು) ಸುದ್ದಿಗಾರರೊಂದಿಗೆ ಮಾತಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, "ಬಿಜೆಪಿ ಚುನಾವಣೆಗೆ ಗೆಲ್ಲಲು ಮತದಾರರಿಗೆ ಹಣ ನೀಡುತ್ತಿದೆ. ರಾಜ್ಯದ 15 ಕ್ಷೇತ್ರಗಳಲ್ಲೂ ಬೇಕಾದಷ್ಟು ಹಣ ಖರ್ಚು ಮಾಡುತ್ತಿದ್ಧಾರೆ. ಆದರೆ, ಜನ ದುಡ್ಡಿಗೆ ಕರಗುವುದಿಲ್ಲ. ಹೀಗಾಗಿ ನಾನು ಬಿಜೆಪಿ ದುಡ್ಡು, ಕಾಂಗ್ರೆಸ್ಸಿಗೆ ವೋಟು ಎಂದು ಹೇಳುತ್ತಿದ್ದೇನೆ" ಎಂದರು.

ಉಪಚುನಾವಣೆ ಪ್ರಚಾರದ ಕೊನೆಯ ದಿನಕ್ಕೆ ತಲುಪಿದ್ದೇವೆ. ಎಷ್ಟು ಕ್ಷೇತ್ರ ಗೆಲ್ಲುತ್ತೇವೆ ಎನ್ನುವುದು ಪ್ರಶ್ನೆಯೇ ಅಲ್ಲ. ರಾಜ್ಯದ 15 ಕ್ಷೇತ್ರಗಳಲ್ಲೂ ನಾವೇ ಗೆಲ್ಲುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು ಸಿದ್ದರಾಮಯ್ಯ.

ಇನ್ನು ಡಿಸೆಂಬರ್​​​​ 9ನೇ ತಾರೀಕಿನಂತರ ಸಿಹಿ ಹಂಚುತ್ತಾರೆ ಎಂಬ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೂ ಪ್ರತಿಕ್ರಿಯಿಸಿದರು. ಇದೇ ವೇಳೆ ದಲಿತ ಮುಖ್ಯಮಂತ್ರಿ ವಿಚಾರ ಅಲ್ಲಗಳೆದ ಸಿದ್ದರಾಮಯ್ಯ, ಅಂತಹ ಯಾವುದೇ ವಿದ್ಯಮಾನ ಇಲ್ಲ ಎಂದರು. ಸಿಹಿ ಹಂಚುತ್ತಾರೆ ಎಂದರೆ 15 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ ಎಂದರ್ಥ. ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಏನು ಭಾಷಣ ಮಾಡಿದ್ದಾರೋ ಗೊತ್ತಿಲ್ಲ. ನಿಮಗೇ ಬೇಕಾದಂತೆ ಅರ್ಥ ಮಾಡಿಕೊಳ್ಳಬೇಡಿ ಎಂದು ಮಾಧ್ಯಮಗಳ ವಿರುದ್ಧವೇ ಹರಿಹಾಯ್ದರು.

ಇದನ್ನೂ ಓದಿ: ಯಶವಂತಪುರ ಅಭ್ಯರ್ಥಿಗೆ ಕೈಕೊಟ್ಟ ಕಾಂಗ್ರೆಸ್​?: ತನ್ನ ಪರ ಪ್ರಚಾರಕ್ಕೆ ಬರುವಂತೆ ಡಿಕೆಶಿಗೆ ಪಿ. ನಾಗರಾಜ್​​ ಪಟ್ಟು

ಬಿಜೆಪಿ ಸಂಸದ ವಿ. ಶ್ರೀನಿವಾಸ್​ ಪ್ರಸಾದ್​ ಹೇಳಿಕೆಗೂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ಸಿದ್ದರಾಮಯ್ಯ ಕಾಂಗ್ರೆಸ್​ ವಾಶೌಟ್​​ ಮಾಡಲಿದ್ದಾರೆ ಎಂದು ಶ್ರೀನಿವಾಸ ಪ್ರಸಾದ್‌ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಶ್ರೀನಿವಾಸ್ ಪ್ರಸಾದ್‌ಗೆ ಇನ್ನೂ ಬುದ್ದಿ ಬಂದಿಲ್ಲ. ನಂಜನಗೂಡು ಉಪಚುನಾವಣೆಯಲ್ಲಿ ಜೆಪಿಯಿಂದ ಸ್ಪರ್ಧೆ ಮಾಡಿದ ಕಾರಣಕ್ಕೆ ಸೋತರು. ಅವರ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ ಎಂದು ವಿವಾದಕ್ಕೆ ತೆರೆ ಎಳೆದರು.
First published:December 3, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ