ಅಕ್ರಮ ಹಣ ವರ್ಗಾವಣೆ ಕೇಸ್: ನಾಳೆ ತಿಹಾರ್​​ ಜೈಲಿನಲ್ಲಿ ಡಿಕೆಶಿ ಭೇಟಿಯಾಗಲಿರುವ ಸೋನಿಯಾ ಗಾಂಧಿ

ಡಿಕೆಶಿ ಭೇಟಿಗೆ ಸೋನಿಯಾ ಗಾಂಧಿಯವರಿಗೆ ಜೈಲು ಅಧಿಕಾರಿಗಳು ನಾಳೆ ಬೆಳಗ್ಗೆ ಅನುಮತಿ ನೀಡಲಿದ್ದಾರೆ. ಬಳಿಕ ಸಂಸದ ಡಿ.ಕೆ ಸುರೇಶ್​​ ಅವರೊಂದಿಗೆ ಸೋನಿಯಾ ಗಾಂಧಿ ತಿಹಾರ್​​ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿಕೆಶಿಯನ್ನು ಭೇಟಿಯಾಗಲಿದ್ದಾರೆ. 

news18-kannada
Updated:October 20, 2019, 7:08 PM IST
ಅಕ್ರಮ ಹಣ ವರ್ಗಾವಣೆ ಕೇಸ್: ನಾಳೆ ತಿಹಾರ್​​ ಜೈಲಿನಲ್ಲಿ ಡಿಕೆಶಿ ಭೇಟಿಯಾಗಲಿರುವ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ, ಡಿಕೆಶಿ (ಸಂಗ್ರಹ ಚಿತ್ರ)
  • Share this:
ಬೆಂಗಳೂರು(ಅ.20): ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಇಡಿ ವಶದಲ್ಲಿರುವ ಡಿ.ಕೆ ಶಿವಕುಮಾರ್​​ರನ್ನು ಭೇಟಿಯಾಗಲು ಅನುಮತಿ ಕೋರಿ ಕಾಂಗ್ರೆಸ್​​​​ ರಾಷ್ಟ್ರೀಯ ಅಧ್ಯಕ್ಷ ಸೋನಿಯಾ ಗಾಂಧಿ ತಿಹಾರ್​​ ಜೈಲು ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಡಿಕೆಶಿ ಭೇಟಿಯಾಗಲು ಸೋನಿಯಾ ಗಾಂಧಿಯವರಿಗೆ ಜೈಲು ಅಧಿಕಾರಿಗಳು ನಾಳೆ ಬೆಳಗ್ಗೆ ಅನುಮತಿ ನೀಡಲಿದ್ದಾರೆ. ಬಳಿಕ ಸಂಸದ ಡಿ.ಕೆ ಸುರೇಶ್​​ ಅವರೊಂದಿಗೆ ಸೋನಿಯಾ ಗಾಂಧಿ ತಿಹಾರ್​​ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಡಿಕೆಶಿಯನ್ನು ಭೇಟಿಯಾಗಲಿದ್ದಾರೆ.

ಕಳೆದ ತಿಂಗಳು ಸೆಪ್ಟೆಂಬರ್​​ 23ರಂದು ಐಎನ್​ಎಕ್ಸ್​ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ತಿಹಾರ್​ ಜೈಲು ಸೇರಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾಗಿದ್ದರು. ಆದರೆ ಅದೇ ಜೈಲಿನಲ್ಲಿರುವ ಕಾಂಗ್ರೆಸ್​ ನಾಯಕ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್​ ಹೈಕಮಾಂಡ್​ ಭೇಟಿಯಾಗಲಿಲ್ಲ. ಅಂದು ಸೋನಿಯಾ ಗಾಂಧಿ ಚಿದಂಬರಂ ಭೇಟಿಗಷ್ಟೇ ಅವಕಾಶ ಕೇಳಿದ್ದರು. ಇದೀಗ ಡಿಕೆಶಿ ಭೇಟಿಗೆ ಅನುಮತಿ ಕೇಳಿರುವ ಕಾಂಗ್ರೆಸ್​ ಹೈಕಮಾಂಡ್​​ ನಾಳೆ ಭೇಟಿಯಾಗಲಿದ್ದು, ಧೈರ್ಯ ಹೇಳಲಿದ್ದಾರೆ ಎನ್ನಲಾಗುತ್ತಿದೆ.

ಕಾಂಗ್ರೆಸ್​ ಟ್ರಬಲ್​​ ಶೂಟರ್​​ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕಸದಸ್ಯ ಪೀಠ ತೀರ್ಪು ಕಾಯ್ದಿರಿಸಿ ಮುಂದೂಡಿದೆ.ಇಡಿ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಮುಂದೂಡುವ ಬಗ್ಗೆ ನ್ಯಾಯಮೂರ್ತಿ ಸುರೇಶ್ ಕುಮಾರ್ ವಕೀಲರ ಅಭಿಪ್ರಾಯ ಕೇಳಿದ್ದರು. ಇಡಿ ಪರ ವಕೀಲರು ನ್ಯಾಯಾಲಯಕ್ಕೆ ತಮ್ಮ ತನಿಖೆಯ ಬಗ್ಗೆ ವರದಿ ಸಲ್ಲಿಸಿದ್ದರು. ಹಾಗಾಗಿ ಡಿಕೆಶಿ ವಿಚಾರಣೆಯನ್ನು ಹೈಕೋರ್ಟ್​ ಮುಂದೂಡಿತ್ತು.

ಈ ಹಿಂದೆಯೇ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ದಸರಾ ಹಬ್ಬದ ಕಾರಣ ಮುಂದೂಡಲಾಗಿತ್ತು. ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್​ ಮತ್ತೆ ಕೈಗೆತ್ತಿಕೊಂಡಿತ್ತು. ತಿಹಾರ್​​ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಎಷ್ಟು ಜಾಮೀನು ಕೋರಿ ಅರ್ಜಿ ಸಲ್ಲಿಸಿದರೂ ನ್ಯಾಯಾಲಯ ತಿರಸ್ಕರಿಸುತ್ತಲೇ ಬಂದಿದೆ. ಸೆ. 4ರಿಂದಲೂ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ನ್ಯಾಯಾಂಗ ವಶಕ್ಕೆ ಒಳಪಡಿಸಲಾಗಿದೆ. ಅವರಿಗೆ ಜಾಮೀನು ಸಿಗುವವರೆಗೂ ಡಿಕೆಶಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಿದೆ.

ಇದನ್ನೂ ಓದಿ: ವೋಟರ್​​ ಐಡಿ ಪತ್ತೆ ಪ್ರಕರಣ: ಅನರ್ಹ ಶಾಸಕ ಮುನಿರತ್ನಗೆ ಕಂಟಕ; ಬಿಎಸ್​​ವೈ ಮಧ್ಯಪ್ರವೇಶಿಸಿದರೂ ಇತ್ಯರ್ಥವಾಗದ ಕೇಸ್​​

ಈ ಹಿಂದೆಯೇ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ದಸರಾ ಹಬ್ಬದ ಕಾರಣ ಮುಂದೂಡಲಾಗಿತ್ತು. ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್​ ಮತ್ತೆ ಕೈಗೆತ್ತಿಕೊಂಡಿತ್ತು. ತಿಹಾರ್​​ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಎಷ್ಟು ಜಾಮೀನು ಕೋರಿ ಅರ್ಜಿ ಸಲ್ಲಿಸಿದರೂ ನ್ಯಾಯಾಲಯ ತಿರಸ್ಕರಿಸುತ್ತಲೇ ಬಂದಿದೆ. ಸೆ. 4ರಿಂದಲೂ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ನ್ಯಾಯಾಂಗ ವಶಕ್ಕೆ ಒಳಪಡಿಸಲಾಗಿದೆ. ಅವರಿಗೆ ಜಾಮೀನು ಸಿಗುವವರೆಗೂ ಡಿಕೆಶಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಿದೆ.

ತನ್ನ ತಾಯಿ, ಪತ್ನಿ ಸೇರಿ ಇತರರ ಹೆಸರಲ್ಲಿ ಡಿಕೆ ಶಿವಕುಮಾರ್ ಬೇನಾಮಿ ಆಸ್ತಿ ಮಾಡಿರುವುದು ಕಂಡು ಬಂದಿದ್ದರಿಂದ ಇಡಿ ಅಧಿಕಾರಿಗಳ ವಿಚಾರಣೆ ಮುಂದುವರಿದಿದೆ. ಇಡಿ ತನಿಖೆ ಮುಗಿದ ಬಳಿಕ ಸರ್ಕಾರ ಅಧಿಕೃತವಾಗಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಸಾಧ್ಯತೆಯಿದೆ. ಈ ಹಿಂದೆ 2017ರ ಆಗಸ್ಟ್​ನಲ್ಲಿ ಐಟಿ ಅಧಿಕಾರಿಗಳು ಶಿವಕುಮಾರ್ ಮೇಲೆ ನಡೆಸಿದ ದಾಳಿ ವೇಳೆ ಸುಮಾರು 400 ಕೋಟಿ ರೂ.ಗೂ ಅಧಿಕ ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿತ್ತು. ಆ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿದಾಗ ಹಲವರ ಹೆಸರಲ್ಲಿ ಆಸ್ತಿ ಮಾಡಿರುವುದು ಬೆಳಕಿಗೆ ಬಂದಿತ್ತು ಎನ್ನಲಾಗಿದೆ.-----------
First published: October 20, 2019, 6:59 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading