• Home
  • »
  • News
  • »
  • state
  • »
  • Congress Protest: ಡಬಲ್​ ಇಂಜಿನ್ ಸರ್ಕಾರದಲ್ಲಿ ಭ್ರಷ್ಟಾಚಾರವೂ ಡಬಲ್! ಕಡೂರಿನಲ್ಲಿ ಕಾಂಗ್ರೆಸ್ ಕಿಡಿ

Congress Protest: ಡಬಲ್​ ಇಂಜಿನ್ ಸರ್ಕಾರದಲ್ಲಿ ಭ್ರಷ್ಟಾಚಾರವೂ ಡಬಲ್! ಕಡೂರಿನಲ್ಲಿ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಪ್ರತಿಭಟನೆ

ಕಾಂಗ್ರೆಸ್ ಪ್ರತಿಭಟನೆ

ಕಾಂಗ್ರೆಸ್ ಕಾರ್ಯಕರ್ತರು BJP ಭ್ರಷ್ಟಾಚಾರದ ಸರ್ಕಾರ, 40 ಪರ್ಸೆಂಟ್​ ಸರ್ಕಾರ ಈ ಸರ್ಕಾರವನ್ನ ಕಿತ್ತೊಗೆಯಬೇಕು ಎಂದು ಕಡೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಾಲೂಕು ಕಚೇರಿಗೆ ಬೀಗ ಜಡಿದಿದ್ದಾರೆ.

  • News18 Kannada
  • Last Updated :
  • Karnataka, India
  • Share this:

ಚಿಕ್ಕಮಗಳೂರು : ಅತ್ತ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬಿಜೆಪಿ ಸಂಕಲ್ಪ ಯಾತ್ರೆಗೆ ತಯಾರಿ ನಡೆಸುತ್ತಿದ್ದರೆ ಇತ್ತ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ (BJP) ಭ್ರಷ್ಟಾಚಾರದ (Corruption) ಸರ್ಕಾರ, 40 ಪರ್ಸೆಂಟ್​ ಸರ್ಕಾರ ಈ ಸರ್ಕಾರವನ್ನ ಕಿತ್ತೊಗೆಯಬೇಕು ಎಂದು ಕಡೂರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿ ತಾಲೂಕು ಕಚೇರಿಗೆ ಬೀಗ ಜಡಿದಿದ್ದಾರೆ. ಕಡೂರು ತಾಲೂಕಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು (Congress Activist) ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ.


ಕಡೂರು ತಾಲೂಕಿನಲ್ಲಿ ಭ್ರಷ್ಟಾಚಾರ


ಕಡೂರು ತಾಲೂಕಿನಲ್ಲಿ ಭ್ರಷ್ಟಾಚಾರ ತಾಂಡವ ಆಡುತ್ತಿದೆ. ಹಲವು ಅಧಿಕಾರಿಗಳು ಲಂಚ ಪಡೆಯುವಾಗಲೇ ಸಿಕ್ಕಿಬಿದ್ದು ಅಮಾನತ್ತಾಗಿದ್ದಾರೆ. ತಾಲೂಕು ಪಂಚಾಯಿತಿ ಇಓ ಲಂಚ ಕೇಳುತ್ತಿರುವ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಶಾಸಕರಿಗೆ ಪಾಲು ನೀಡಬೇಕು ಎಂಬ ಅರ್ಥ ಬರುವ ಸಂಭಾಷಣೆಯೂ ಇದೆ.


ಈ ವಿಷಯವಾಗಿ ಗುತ್ತಿಗೆದಾರರೊಬ್ಬರು ಬಿಲ್ ಕೊಡಿಸಿ ಅಥವಾ ದಯಾಮರಣ ಕರುಣಿಸಿ ಎಂದು ರಾಷ್ಟ್ರಪತಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ತಾಲೂಕು ಆಡಳಿತ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು ಶಾಸಕ ಅನುಮತಿಗೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.


ನ್ಯಾಯ ಸಿಗದಿದ್ರೆ ಉಗ್ರ ಹೋರಾಟದ ಎಚ್ಚರಿಕೆ 


ಕೆಪಿಸಿಸಿ ಸದಸ್ಯ ಕೆ.ಎಸ್. ಆನಂದ್ ಮಾತನಾಡಿ ತಾಲೂಕಿನಲ್ಲಿ ಭ್ರಷ್ಟಾಚಾರ ತಾಂಡವ ಆಗುತ್ತಿದೆ, ಹಲವು ಅಧಿಕಾರಿಗಳು ಲಂಚ ಪಡೆಯುವಾಗಲೇ ಸಿಕ್ಕಿಬಿದ್ದು ಅಮಾನತುಗೊಂಡಿದ್ದಾರೆ ಎಂದ್ರು. ತಾಲೂಕು ಆಡಳಿತ ಅಧಿಕಾರಿಗಳು ಸಾರ್ವಜನಿಕರ ಕೆಲಸ ಮಾಡಿಕೊಡಲು  ಶಾಸಕ ಅನುಮತಿಗೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದೆಲ್ಲವನ್ನು ಗಮನಿಸಿ ಜಿಲ್ಲಾಧಿಕಾರಿ ಅವರು ಸೂಕ್ತ ಕ್ರಮ ಕೈಗೊಂಡು ತಾಲೂಕಿನ ಜನತೆಗೆ ನ್ಯಾಯ ಒದಗಿಸಿ ಕೊಡುವಂತೆ ಮನವಿ ಸಲ್ಲಿಸಿದ್ದೇವೆ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.


ಹಣ ನೀಡದೇ ಅಧಿಕಾರಿಗಳು ಕೆಲಸ ಮಾಡಲ್ಲ


ಜಿ ಪಂ ಮಾಜಿ ಸದಸ್ಯ ಶರತ್ ಕೃಷ್ಣಮೂರ್ತಿ ಮಾತನಾಡಿ ಭ್ರಷ್ಟಾಚಾರ ನಿರ್ಮೂಲನೆ ಬಗ್ಗೆ ಡಬ್ಬಲ್ ಇಂಜಿನ್ ಸರ್ಕಾರ ಮಾತಾಡುತ್ತೆ. ಬಿಜೆಪಿ ಶಾಸಕರೇ ಇರುವ ನಮ್ಮ ಕ್ಷೇತ್ರದಲ್ಲಿ ಅವ್ಯಾಹತವಾಗಿ ಭ್ರಷ್ಟಾಚಾರ ನಡೆಯುತ್ತಿರುವುದು ವಿಪರ್ಯಾಸವೇ ಸರಿ. ಹಣ ನೀಡದೇ ಯಾವುದೇ ಅಧಿಕಾರಿ ತಮ್ಮ ಕೆಲಸ ಮಾಡುವುದೇ ಇಲ್ಲ ಎಂಬುದು ಸಾರ್ವಜನಿಕರ ದಿನನಿತ್ಯದ ದೂರಾಗಿದೆ, ಇದಕ್ಕೆಲ್ಲಾ ಅಂತ್ಯ ಎಂದು ಹೇಳಿದ್ರು


ಶಾಸಕರು ಪಾಲು ಪಡೆಯುತ್ತಿದ್ದಾರಾ?


ಪುರಸಭೆ ಸದಸ್ಯ ಮೋಹನ್ ಕುಮಾರ್ ಮಾತನಾಡಿ ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ನೋಡಿಯೂ ಸುಮ್ಮನೆ ಇರುವ ಶಾಸಕರು ಈ ಭ್ರಷ್ಟಾಚಾರದಲ್ಲಿ ಪಾಲು ಪಡೆಯುತ್ತಿರುವರೋ ಎಂದು ಸಂಶಯ ಕಾಡುತ್ತಿದೆ. ಎಲ್ಲರಿಗೂ ಕಾಣುವಂತೆ ಹೆಚ್ಚಾಗಿರುವ ಶಾಸಕರ ಆಸ್ತಿ ಈ ಸಂಶಯಕ್ಕೆ ಇಂಬು ನೀಡುತ್ತಿದೆ ಎಂದರು. ಮನವಿ ನೀಡುವ ಸಮಯದಲ್ಲಿ ಸಾರ್ವಜನಿಕರು ತಹಶೀಲ್ದಾರ್ ಅವರಿಗೆ ಬಗರ್ ಹುಕುಂ ಸಾಗುವಾಳಿ ಪತ್ರ ನೀಡಲು ಲಕ್ಷಾಂತರ ಲಂಚ ಸಣ್ಣ ಪುಟ್ಟ ಕೆಲಸ ಮಾಡಿಕೊಡಲು ಲಂಚದ ಬೇಡಿಕೆ ಇಡುತ್ತಿರುವ ಬಗ್ಗೆ ಪ್ರಶ್ನಿಸಿದರು.


ಇದನ್ನೂ ಓದಿ: KSRTC ಸಿಬ್ಬಂದಿಗೆ ಗುಡ್​ ನ್ಯೂಸ್​; 1 ಕೋಟಿ ರೂ. ಮೊತ್ತದ ಅಪಘಾತ ವಿಮಾ ಯೋಜನೆ ಜಾರಿ


ಮನವಿ ನೀಡುವ ಸಮಯದಲ್ಲಿ ಸಾರ್ವಜನಿಕರು ತಹಶೀಲ್ದಾರ್ ಅವರಿಗೆ ಬಗರ್ ಹುಕುಂ ಸಾಗುವಾಳಿ ಪತ್ರ ನೀಡಲು ಲಕ್ಷಾಂತರ ಲಂಚ ನೀಡಬೇಕು. ಸಣ್ಣ ಪುಟ್ಟ ಕೆಲಸ ಮಾಡಿಕೊಡಲು ಲಂಚ ಬೇಡಿಕೆ ಇಡುತ್ತಿರುವ ಬಗ್ಗೆ ಪ್ರಶ್ನಿಸಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ್ ಉಮೇಶ್ ಮನವಿಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಗೆ ತಲುಪಿಸುತ್ತೇನೆ ಎಂದರು.

Published by:ಪಾವನ ಎಚ್ ಎಸ್
First published: