ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜ್ಯ ಕಾಂಗ್ರೆಸ್​ನ ಕೆಸಿ ರಾಮಮೂರ್ತಿ; ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ

ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿರುವ ಕೆ.ಸಿ.ರಾಮಮೂರ್ತಿ ಅವರನ್ನು ಕಾಂಗ್ರೆಸ್​ 2016ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆ ಮಾಡಿತ್ತು. ಇದೀಗ ದಿಢೀರ್​ಆಗಿ ರಾಮಮೂರ್ತಿ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಆಘಾತ ನೀಡಿದ್ದಾರೆ.

HR Ramesh | news18-kannada
Updated:October 16, 2019, 2:55 PM IST
ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಜ್ಯ ಕಾಂಗ್ರೆಸ್​ನ ಕೆಸಿ ರಾಮಮೂರ್ತಿ; ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ
ಕೆ.ಸಿ.ರಾಮಮೂರ್ತಿ
  • Share this:
ಬೆಂಗಳೂರು: ಕಾಂಗ್ರೆಸ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೆ.ಸಿ.ರಾಮಮೂರ್ತಿ ಅವರು ಇಂದು ತಮ್ಮ ಸಂಸದ ಸ್ಥಾನ ಮತ್ತು ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಸಭಾಪತಿಯಾಗಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾದ ರಾಮಮೂರ್ತಿ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮಾಜಿ ಐಪಿಎಸ್​ ಅಧಿಕಾರಿಯಾಗಿರುವ ರಾಮಮೂರ್ತಿ ಅವರು ಶೀಘ್ರದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆ.ಸಿ.‌ರಾಮಮೂರ್ತಿ ಅವರು, ನಾನು ರಾಜೀನಾಮೆ ನೀಡಿರುವುದು ಸತ್ಯ. ದೇಶದ ಪ್ರಗತಿಯ ಜೊತೆ ಇರಬೇಕೆಂದು ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಸೇರಲು ನಿರ್ಧರಿಸಿದ್ದೇನೆ. ಹಿಂದೆ ಯಾವ ಬಿಜೆಪಿ ನಾಯಕರನ್ನೂ ಭೇಟಿಯಾಗಿಲ್ಲ. ಈಗ ಬಿಜೆಪಿ ನಾಯಕರನ್ನು ಭೇಟಿಯಾಗಿ, ಬಿಜೆಪಿ ಸೇರ್ಪಡೆ ಬಗ್ಗೆ ಚರ್ಚಿಸುತ್ತೇನೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದೇನೆ. ನಾನು ಯಾವುದೇ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡಲ್ಲ. ಎಲ್ಲರೂ ನನ್ನನ್ನು ಗೌರವಯುತವಾಗಿ ನಡೆಸಿಕೊಂಡಿದ್ದಾರೆ. ಒಂದು ವರ್ಷದಿಂದಲೇ ಕಾಂಗ್ರೆಸ್ ಬಿಡುವ ಚಿಂತನೆಯಲ್ಲಿದ್ದೆ. ಈಗ ಕಾಲ ಕೂಡಿ ಬಂತು ಎಂದು ಹೇಳಿದ್ದಾರೆ.

ಇದನ್ನು ಓದಿ: ವಿಪಕ್ಷ ನಾಯಕರಾದ ಬಳಿಕ ಮೊದಲ ಬಾರಿಗೆ ಸೋನಿಯಾ ಗಾಂಧಿ ಭೇಟಿ ಮಾಡಿದ ಸಿದ್ದರಾಮಯ್ಯ; ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ

ಬೆಂಗಳೂರು ನಿವಾಸಿಯಾಗಿರುವ ಕೆ.ಸಿ.ರಾಮಮೂರ್ತಿ ಮಾಜಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಸಿಎಆರ್​ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಬೆಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್, ಯುವಜನ ಸೇವೆ, ಸಂಚಾರ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು, ಬೆಂಗಳೂರು ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಸೇವೆ ಸಲ್ಲಿಸಿರುವ ಕೆ.ಸಿ.ರಾಮಮೂರ್ತಿ ಅವರನ್ನು ಕಾಂಗ್ರೆಸ್​ 2016ರಲ್ಲಿ ಕರ್ನಾಟಕದಿಂದ ರಾಜ್ಯಸಭೆಗೆ ಮೊದಲ ಬಾರಿಗೆ ಆಯ್ಕೆ ಮಾಡಿತ್ತು. ಇದೀಗ ದಿಢೀರ್​ಆಗಿ ರಾಮಮೂರ್ತಿ ಅವರು ತಮ್ಮ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್​ಗೆ ಆಘಾತ ನೀಡಿದ್ದಾರೆ.

 

First published:October 16, 2019
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading