ಸೋತಾಗ ರಾಜೀನಾಮೆ ನೀಡೋದು ಮಾಮುಲು; ಸಿದ್ದರಾಮಯ್ಯ-ಗುಂಡೂರಾವ್ ನಿರ್ಧಾರಕ್ಕೆ​ ಶಾಮನೂರು ವ್ಯಂಗ್ಯ

ಹೀಗೆ ಮಾತು ಮುಂದುವರೆಸಿದ ಶಾಮನೂರು ಶಿವಶಂಕರಪ್ಪ, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ರಾಜ್ಯದಲ್ಲಿ ಯಾವ ಸರ್ಕಾರ ಇರುತ್ತದೋ ಅದಕ್ಕೆ ಸೋರ್ಸ್​ ಇರುತ್ತದೆ. ಹಾಗಾಗಿ ಸೋರ್ಸ್​​ನ ಆಧಾರದ ಮೇರೆಗೆ ಹೋಗೋ ಚುನಾವಣೆ ಗೆಲ್ಲುತ್ತಾರೆ ಎಂದು ಶಾಮನೂರು ಹೇಳಿದರು.

ಶಾಮನೂರು ಶಿವಶಂಕರಪ್ಪ

ಶಾಮನೂರು ಶಿವಶಂಕರಪ್ಪ

 • Share this:
  ದಾವಣಗೆರೆ(ಡಿ.09): ರಾಜ್ಯದ 15 ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಎದುರು ಕಾಂಗ್ರೆಸ್​ ಹೀನಾಯ ಸೋಲು ಕಂಡಿದೆ. ಸೋಲಿನ ನೈತಿಕ ಹೊಣೆ ಹೊತ್ತು ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್​ ಶಾಸಕಾಂಗ ನಾಯಕ ಮತ್ತು ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್​ ಗುಂಡೂರಾವ್​​ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತಂತೆ ಕಾಂಗ್ರೆಸ್​​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ವ್ಯಂಗ್ಯವಾಡಿದ್ದಾರೆ.

  ಚುನಾವಣೆಯಲ್ಲಿ ಕಾಂಗ್ರೆಸ್​ ಸೋತಾಗ ರಾಜ್ಯ ನಾಯಕರು ರಾಜೀನಾಮೆ ನೀಡುತ್ತಾರೆ. ಬಳಿಕ ಹೈಕಮಾಂಡ್​​ ಖುದ್ದು ಕರೆದು ರಾಜೀನಾಮೆ ವಾಪಸ್ಸು ತೆಗೆದುಕೊಳ್ಳಿ ಎಂದು ಒತ್ತಾಯಿಸುತ್ತಾರೆ. ಆಗ ನೀಡಿದ ರಾಜೀನಾಮೆ ಕಾಂಗ್ರೆಸ್​ ನಾಯಕರು ವಾಪಸ್ಸು ಪಡೆಯುತ್ತಾರೆ. ಪ್ರತಿ ಬಾರಿಯೂ  ಇದು ಮಾಮುಲು ಎಂದು ಸಿದ್ದರಾಮಯ್ಯ ಮತ್ತು ದಿನೇಶ್​​ ರಾಜೀನಾಮೆ ಬಗ್ಗೆ ಶಾಮನೂರು ಶಿವಶಂಕರಪ್ಪ ಕುಟುಕಿದ್ದಾರೆ.

  ಹೀಗೆ ಮಾತು ಮುಂದುವರೆಸಿದ ಶಾಮನೂರು ಶಿವಶಂಕರಪ್ಪ, ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ರಾಜ್ಯದಲ್ಲಿ ಯಾವ ಸರ್ಕಾರ ಇರುತ್ತದೋ ಅದಕ್ಕೆ ಸೋರ್ಸ್​ ಇರುತ್ತದೆ. ಹಾಗಾಗಿ ಸೋರ್ಸ್​​ನ ಆಧಾರದ ಮೇರೆಗೆ ಹೋಗೋ ಚುನಾವಣೆ ಗೆಲ್ಲುತ್ತಾರೆ ಎಂದು ಹೇಳಿದರು.

  ಇದನ್ನೂ ಓದಿ: ಸೋಲಿನ ಹೊಣೆ ಹೊತ್ತು ಗುಂಡೂರಾವ್​​ ರಾಜೀನಾಮೆ; ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಡಿಕೆಶಿ ಸೇರಿದಂತೆ ಹಲವರು ಲಾಬಿ

  ಉಪಚುನಾವಣೆಯಲ್ಲಿ ಹೀನಾಯ ಸೋಲುಂಡ ಕಾಂಗ್ರೆಸ್ ಪಕ್ಷದಲ್ಲಿ ಅಲ್ಲೋಲಕಲ್ಲೋಲದ ಸ್ಥಿತಿ ನಿರ್ಮಾಣವಾಗಿದೆ. ಸೋಲಿನ ಹೊಣೆ ಹೊತ್ತು ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರು ಕಾಂಗ್ರೆಸ್​ ಶಾಸಕಾಂಗ ನಾಯಕ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರಿಬ್ಬರೂ ತಮ್ಮ ರಾಜೀನಾಮೆ ಪತ್ರವನ್ನು ಪಕ್ಷದ ಹೈಕಮಾಂಡ್​ಗೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ರಾಜೀನಾಮೆಯನ್ನು ಅಂಗೀಕರಿಸಿಲ್ಲ ಎಂಬ ಮಾಹಿತಿ ತಿಳಿದು ಬಂದಿದೆ.

  ಡಿ. 5ರಂದು 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು ಬಿಜೆಪಿ 12 ಕ್ಷೇತ್ರಗಳಲ್ಲಿ ಗೆದ್ದು ಸರ್ಕಾರವನ್ನು ಭದ್ರಪಡಿಸಿಕೊಂಡಿದೆ. ಕನಿಷ್ಠ 9 ಕ್ಷೇತ್ರಗಳಲ್ಲಿ ಗೆಲುವು ಕಾಣುವ ನಿರೀಕ್ಷೆ ಇಟ್ಟುಕೊಂಡಿದ್ದ ಕಾಂಗ್ರೆಸ್ ಪಕ್ಷ ಕೇವಲ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಹುಣಸೂರು ಮತ್ತು ಶಿವಾಜಿನಗರ ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಉಳಿದ ಕ್ಷೇತ್ರಗಳು ಪಕ್ಷದ ಕೈ ತಪ್ಪಿವೆ.

  ಇದನ್ನೂ ಓದಿ: ಉಪಚುನಾವಣೆ ಶಾಕ್: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ

  ಈ ಉಪಚುನಾವಣೆಯು ಸಿದ್ದರಾಮಯ್ಯ ಪಾಲಿಗೆ ಪ್ರತಿಷ್ಠೆಯ ವಿಷಯವಾಗಿತ್ತು. ಕಾಂಗ್ರೆಸ್​ನೊಳಗಿನ ಆಂತರಿಕ ಮುಸುಕಿನ ಗುದ್ದಾಟದ ನಡುವೆಯೂ ಅವರು ಈ ಚುನಾವಣೆಯಲ್ಲಿ ಎಡಬಿಡದೇ ಕೆಲಸ ಮಾಡಿದ್ದರು. ಆದರೆ, ಬಿಜೆಪಿಯ ಗೆಲುವನ್ನು ತಡೆಗಟ್ಟಲು ಅವರಿಂದ ಸಾಧ್ಯವಾಗಿಲ್ಲ. ಹಾಗಾಗಿ ದಿನೇಶ್​​ ಮತ್ತು ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ನೀಡಿರುವುದಾಗಿ ತಿಳಿಸಿದ್ದಾರೆ.
  First published: