• Home
  • »
  • News
  • »
  • state
  • »
  • SayCM Campaign: ಪೇಸಿಎಂ ಆಯ್ತು ಇದೀಗ ಸೇಸಿಎಂ ಅಭಿಯಾನ; ಮೂಕ ಬಸವನ ರೀತಿ ಕೂತರೆ ಆಗುವುದಿಲ್ಲ-ಪ್ರಿಯಾಂಕ್​ ಖರ್ಗೆ

SayCM Campaign: ಪೇಸಿಎಂ ಆಯ್ತು ಇದೀಗ ಸೇಸಿಎಂ ಅಭಿಯಾನ; ಮೂಕ ಬಸವನ ರೀತಿ ಕೂತರೆ ಆಗುವುದಿಲ್ಲ-ಪ್ರಿಯಾಂಕ್​ ಖರ್ಗೆ

ಕಾಂಗ್ರೆಸ್​ನಿಂದ SayCM ಅಭಿಯಾನ

ಕಾಂಗ್ರೆಸ್​ನಿಂದ SayCM ಅಭಿಯಾನ

ಕಾಂಗ್ರೆಸ್ ಪಕ್ಷ ಅಭಿಯಾನದ ಮೂಲಕ ಇಂದು 50ನೇ ಪ್ರಶ್ನೆ ಕೇಳುತ್ತಿದ್ದು, ಇಲ್ಲಿಯವರೆಗೂ ಸರ್ಕಾರದಿಂದ ಯಾವುದೇ ಉತ್ತರ ಸಿಕ್ಕಿಲ್ಲ. ಪೇಸಿಎಂ ಅಭಿಯಾನದ ಜತೆಗೆ ನಾವು SayCM ಆಂದೋಲನವನ್ನು ನಡೆಸಬೇಕಿದೆ ಎಂದು ಕಾಂಗ್ರೆಸ್​ ನಾಯಕರು ಹೇಳಿದ್ದಾರೆ.

  • Share this:

ಸರ್ಕಾರದ ವಿರುದ್ಧ ಕಾಂಗ್ರೆಸ್‌ ಪೇಸಿಎಂ ಕ್ಯಾಂಪೇನ್ ಆಯ್ತು, ಈಗ ಕಾಂಗ್ರೆಸ್‌ ನಾಯಕರು ‘ಸೇ ಸಿಎಂ ಕ್ಯಾಂಪೇನ್‌’ (SayCM Campaign) ಶುರು ಮಾಡಿದ್ದಾರೆ. ಪ್ರಣಾಳಿಕೆ ಭರವಸೆಗಳ ಬಗ್ಗೆ ನಿಮ್ಮತ್ರ ಉತ್ತರ ಇದ್ಯಾ ಸಿಎಂ ಬೊಮ್ಮಾಯಿಯವರೇ ಅಂತ ಟ್ವೀಟ್‌ ಮೂಲಕ ಕ್ಯಾಂಪೇನ್ ಶುರು ಮಾಡಿದ್ದಾರೆ. ಇನ್ನು ಪ್ರಿಯಾಂಕ್ ಖರ್ಗೆ (Priyank Kharge) ಮಾತನಾಡಿದ್ದು, ಬಿಜೆಪಿ ಪ್ರಣಾಳಿಕೆಯಲ್ಲಿ‌ ನೀಡಿದ್ದ 10% ಭರವಸೆ ಈಡೇರಿಸಿಲ್ಲ, ಬಿಜೆಪಿ (BJP) ಅವ್ರು ಪ್ರಣಾಳಿಕೆಯಲ್ಲಿ 600ಕ್ಕೂ ಹಚ್ಚು ಭರವಸೆ ನೀಡಿದ್ರು. ಆದ್ರೆ ಈಡೇರಿಸುವ ಕೆಲಸ ಮಾಡಿಲ್ಲ ಅಂತ ಕಿಡಿಕಾರಿದ್ರು. 


ಅಭಿಯಾನದ ಮೂಲಕ 50 ಪ್ರಶ್ನೆ ಕೇಳಿದ ಕಾಂಗ್ರೆಸ್​


ಕಾಂಗ್ರೆಸ್ ಪಕ್ಷ ಅಭಿಯಾನದ ಮೂಲಕ ಇಂದು 50ನೇ ಪ್ರಶ್ನೆ ಕೇಳುತ್ತಿದ್ದು, ಇಲ್ಲಿಯವರೆಗೂ ಸರ್ಕಾರದಿಂದ ಯಾವುದೇ ಉತ್ತರ ಸಿಕ್ಕಿಲ್ಲ. ಪೇಸಿಎಂ ಅಭಿಯಾನದ ಜತೆಗೆ ನಾವು SayCM ಆಂದೋಲನವನ್ನು ನಡೆಸಬೇಕಿದೆ. ಸರ್ಕಾರ ಮೂಕ ಬಸವನ ರೀತಿ ಕೂತರೆ ಆಗುವುದಿಲ್ಲ. ನೀವು ಈ ಪ್ರಣಾಳಿಕೆ ಮೂಲಕ ಜನರಿಂದ ಮತ ಹಾಕಿಸಿಕೊಂಡಿದ್ದೀರಿ. ಹೀಗಾಗಿ ನೀವು ಜನರಿಗೆ ಉತ್ತರಿಸಬೇಕು.


ಬಿಜೆಪಿ ಸುಳ್ಳಿನ ಕಾರ್ಖಾನೆ


ಇನ್ನು ಕೆಲವು ದಿನಗಳ ಹಿಂದೆ ಹೊನ್ನಾವರ ನ್ಯಾಯಾಲಯದಲ್ಲಿ ಪರೇಶ್ ಮೇಸ್ತಾ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ತನ್ನ ವರದಿ ಸಲ್ಲಿಸಿದೆ. ಬಿಜೆಪಿ ಸುಳ್ಳಿನ ಕಾರ್ಖಾನೆ ಎಂಬುದು ಎಲ್ಲರಿಗೂ ಗೊತ್ತು. ಈ ಸುಳ್ಳಿನ ಕಾರ್ಖಾನೆಯಿಂದ ರಾಜ್ಯದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದೆ. ಜತೆಗೆ ನಮ್ಮ ಯುವಕರ ಭವಿಷ್ಯ ನಿರ್ಣಾಮವಾಗುತ್ತಿದೆ. ಬಿಜೆಪಿಯವರು ಯುವಕರ ಭವಿಷ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ. ತಮ್ಮ ರಾಜಕೀಯ ದುರುದ್ದೇಶಕ್ಕೆ ಯುವಕರನ್ನು ಬಿಜೆಪಿ ದಾಳಗಳಾಗಿ ಬಳಸಿಕೊಳ್ಳುತ್ತಿದೆ. ಆ ಮೂಲಕ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಹೆಣದ ಮೇಲೆ ರಾಜಕೀಯ ಮಾಡಲು ನಾಚಿಕೆಯಾಗಲ್ವಾ?


ಹೆಣದ ಮೇಲೆ ರಾಜಕೀಯ ಮಾಡಲು ನಾಚಿಕೆಯಾಗುವುದಿಲ್ಲವೇ? ನೀವು ರಾಜಕೀಯಕ್ಕಾಗಿ ಯಾರನ್ನು ಬೇಕಾದರೂ ಬಲಿ ತೆಗೆದುಕೊಳ್ಳುತ್ತೀರಾ? ಯುವಕರ ಭವಿಷ್ಯಕ್ಕೆ ಕಿಮ್ಮತ್ತಿಲ್ಲವೇ? ನೀವೆಂತಾ ನಾಯಕರು? ನಿಮ್ಮ ಪ್ರತ್ರಿಕಾ ಹೇಳಿಕೆಯಲ್ಲಿ ಪರೇಶ್ ಹತ್ಯೆಯ ಬಗ್ಗೆ ಗ್ರಾಫಿಕ್ ಡೀಟೇಲ್ಸ್ ಎಂದು ಹೇಳಿದ್ದೀರಿ. ಈ ಮಾಹಿತಿಯನ್ನು ಸಿಬಿಐಗೆ ನೀಡಿಲ್ಲ ಏಕೆ? ಪಿಎಸ್ಐ ನೇಮಕಾತಿ ಹಗರಣದ ಬಗ್ಗೆ ಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಮಾಹಿತಿ ಹೇಳಿದರೆ ನನಗೆ ನೊಟೀಸ್ ನೀಡಿದ್ದರು, ಪೇಸಿಎಂ ಪೋಸ್ಟರ್ ಅಂಟಿಸಿದವರಿಗೆ ಸಿಸಿಬಿ ಪ್ರಕರಣ. ಆದರೆ ಹಿಂದೂ ಕಾರ್ಯಕರ್ತ ಸಾವು ಹೇಗಾಗಿದೆ ಎಂದು ಗೊತ್ತಿರುವಾಗ ಅವರಿಗೆ ಸಾಕ್ಷಿ ನೀಡಿ ಎಂದು ಈ ಸರ್ಕಾರ ಕೇಳಿಲ್ಲ. ನಾನು ಅತ್ತಂಗೆ ಮಾಡುತ್ತೇನೆ, ನೀನು ಚಿವುಟಿದಂತೆ ಮಾಡುವ ಪ್ರಯತ್ನವೇ?


ಇದನ್ನೂ ಓದಿ: Potholes in Bengaluru: ಅಪಘಾತ ತಪ್ಪಿಸಲು ಅಖಾಡಕ್ಕಿಳಿದ ಖಾಕಿ! ಟ್ರಾಫಿಕ್ ಪೊಲೀಸರಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯ


 ರಕ್ತ ಹೀರುವ ಕ್ರಿಮಿಗಳು


ಇದೇ ಕಾರಣಕ್ಕೆ ಮಹೇಂದ್ರ ಕುಮಾರ್ ಅವರು ನಿಮ್ಮನ್ನು ರಕ್ತ ಹೀರುವ ಕ್ರಿಮಿಗಳು ಎಂದು ಹೇಳಿದ್ದಾರೆ. ರಾಜ್ಯದ ಯುವ ಜನರಿಗೆ ಈ ಮೂಲಕ ನಾನು ಮನವಿ ಮಾಡಿಕೊಳ್ಳುತ್ತೇನೆ. ನಮ್ಮ ರಾಜ್ಯದ ಯುವಕರಲ್ಲಿ ಸಾಕಷ್ಟು ಪ್ರತಿಭೆ ಇದೆ, ನಿಮಗೆ ಒಳ್ಳೆಯ ಭವಿಷ್ಯ ಇದೆ. ನೀವು ಬಿಜೆಪಿ ಆರ್ ಎಸ್ಎಸ್ ಅಜೆಂಡಾಕ್ಕೆ ನಿಮ್ಮ ತಲೆ ಕೆಡೆಸಿಕೊಂಡು ಭವಿಷ್ಯ ನಾಶ ಮಾಡಿಕೊಳ್ಳಬೇಡಿ. ನಿಮ್ಮ ಭವಿಷ್ಯ ಉಜ್ವಲವಾದರೆ ರಾಜ್ಯ ಉದ್ದಾರವಾಗುತ್ತದೆ.


ಇದನ್ನೂ ಓದಿ: Bengaluru Accident: ಬರ್ತ್‌ ಡೇ ದಿನವೇ ನಡೆಯಿತು ದುರಂತ, ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಯುವತಿ ಸಾವು! ಸಂಭ್ರಮದಲ್ಲಿದ್ದ ಯುವಕನ ಕೈ ಕಟ್


ನಿಮಗೆ ಕೇಸರಿ ಶಾಲು ಹಾಕಲು ಬಂದರೆ, ಬಿಜೆಪಿ ನಾಯಕರ ಮಕ್ಕಳು ಯಾಕೆ ಕೇಸರಿ ಶಾಲು ಹಾಕಿಕೊಂಡು ಧರ್ಮ ರಕ್ಷಣೆ ಮಾಡುತ್ತಿಲ್ಲ ಎಂಬ ಪ್ರಶ್ನೆ ಕೇಳಿ. ಎಷ್ಟು ಜನ ಗೋಶಾಲೆಯಲ್ಲಿದ್ದಾರೆ? ಎಷ್ಟು ಮಂದಿ ಗೋ ಪೂಜೆ ಮಾಡಿ ಗೋಮೂತ್ರ ಕುಡಿಯುತ್ತಾರೆ? ಗೋರಕ್ಷಣೆಗೆ ಕೇವಲ ಬಡವರು, ಈಡಿಗರು, ಪರಿಶಿಷ್ಟರು, ಬಿಲ್ಲವ ಸಮುದಾಯದವರು ಬೇಕಾ? ಸಮೃದ್ಧ ಹಾಗೂ ಪ್ರಬುದ್ಧ ಕರ್ನಾಟಕ ಕಟ್ಟಬೇಕಾದರೆ, ಯುವಕರಿಗೆ ಉತ್ತಮ ಶಿಕ್,ಣ, ಉದ್ಯೋಗ ನೀಡಿ ಅವರ ಭವಿಷ್ಯ ಕಟ್ಟಬೇಕು. ಬಿಜೆಪಿಯವರಿಗೆ ಇವೆರಡನ್ನೂ ನಿಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಗೋರಕ್ಷಣೆ ಧರ್ಮ ರಕ್ಷಣೆಗೆ ಕಳುಹಿಸುತ್ತಿದ್ದಾರೆ.

Published by:ಪಾವನ ಎಚ್ ಎಸ್
First published: