• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • ’ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ‘: ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

’ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ‘: ಇಂದು ಬಿಜೆಪಿ ವಿರುದ್ಧ ಕಾಂಗ್ರೆಸ್​ ಪ್ರತಿಭಟನೆ

ಮಾಜಿ ಸಿಎಂ ಸಿದ್ದರಾಮಯ್ಯ.

ಮಾಜಿ ಸಿಎಂ ಸಿದ್ದರಾಮಯ್ಯ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್​​ ಜಾರಕಿಹೊಳಿ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಈಶ್ವರ್​ ಖಂಡ್ರೆ, ಡಾ. ಜಿ ಪರಮೇಶ್ವರ್​​, ಸೌಮ್ಯ ರಾಮಲಿಂಗಾ ರೆಡ್ಡಿ, ಪ್ರಿಯಾಂಕಾ ಖರ್ಗೆ, ಮಲ್ಲಿಕಾರ್ಜುನ್​ ಖರ್ಗೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ಧಾರೆ.

  • Share this:

ಬೆಂಗಳೂರು(ಜು.27): ಇಂದು ರಾಜ್ಯ ಕಾಂಗ್ರೆಸ್​​ ರಾಜಭವನ ಎದುರು ಪ್ರತಿಭಟನೆ ನಡೆಸಲಿದೆ. ಬಿಜೆಪಿ ವಿರುದ್ಧ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಹೈಕಮಾಂಡ್​​ ಸೋನಿಯಾ ಗಾಂಧಿಯವರು ರಾಜ್ಯ ಕಾಂಗ್ರೆಸ್​ಗೆ ಪ್ರತಿಭಟನೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಇವರ ಸೂಚನೆ ಮೇರೆಗೆ ಮಧ್ಯಾಹ್ನ 1.30ಕ್ಕೆ ಪ್ರತಿಭಟನೆ ನಡೆಸಲು ಕಾಂಗ್ರೆಸ್​ ನಾಯಕರು ತೀರ್ಮಾನ ಮಾಡಿದ್ದಾರೆ.


ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ದಾಳಿಯನ್ನು ಖಂಡಿಸಿ ಕಾಂಗ್ರೆಸ್​ ಪ್ರತಭಟನೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. ‘ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ’ ಎಂಬ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಲಿದ್ದಾರೆ.


ಇತ್ತೀಚೆಗೆ ಮಧ್ಯಪ್ರದೇಶದಲ್ಲಿ ಕಮಲ್​​ ನಾಥ್​ ನೇತೃತ್ವದ ಕಾಂಗ್ರೆಸ್​​​ ಸರ್ಕಾರ ಪತನಗೊಳಿಸಿ ಅಧಿಕಾರಕ್ಕೆ ಬರುವಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರು ಯಶಸ್ವಿಯಾಗಿದ್ದರು. ಈಗ ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್​​ ಗೆಹ್ಲೋಟ್​​ ನೇತೃತ್ವದ ಕಾಂಗ್ರೆಸ್​ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಯತ್ನಿಸಿದ್ದಾರೆ. ಈ ಪ್ರತಿಭಟನೆಗೆ ಈ ಅಂಶವೂ ಕಾರಣ ಎಂದೇಳಲಾಗುತ್ತಿದೆ.


ಭಾರತೀಯ ರಾಷ್ಟ್ರೀಯ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಈ ವಿಚಾರಗಳನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ಮಾಡುವಂತೆ ಪಕ್ಷದ ನಾಯಕರಿಗೆ ಕರೆ ನೀಡಿದ್ದಾರೆ. ಆಯಾ ರಾಜ್ಯಗಳ ರಾಜ್ಯಪಾಲರ ಕಚೇರಿ ಮುಂಭಾಗ ಪ್ರತಿಭಟನೆ ಮಾಡವಂತೆ ಸೂಚನೆ ಕೊಟ್ಟಿದ್ದಾರೆ.


ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್​ ಸಮಿತಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ರಾಜ್ಯಪಾಲರ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ರಾಜ್ಯ ದ ಎಲ್ಲಾ ಕಾಂಗ್ರೆಸ್​​ ನಾಯಕರಿಗೆ ಡಿ.ಕೆ ಶಿವಕುಮಾರ್​​ ಪತ್ರ ಬರದಿದ್ದಾರೆ.


’ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ’ ಹೆಸರಿನಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಯಲಿದೆ. ರಾಜ್ಯಪಾಲರ ಕಚೇರಿ ಎದುರು ನಡೆಯಲಿರುವ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್​ನ ಶಾಸಕರು ಸೇರಿದಂತೆ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.


ಇದನ್ನೂ ಓದಿ: Actress Vijayalakshmi: ಲೈವ್ ವಿಡಿಯೋ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ ನಾಗಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮಿ; ಆಸ್ಪತ್ರೆಗೆ ದಾಖಲು

top videos


    ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್​​ ಜಾರಕಿಹೊಳಿ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಈಶ್ವರ್​ ಖಂಡ್ರೆ, ಡಾ. ಜಿ ಪರಮೇಶ್ವರ್​​, ಸೌಮ್ಯ ರಾಮಲಿಂಗಾ ರೆಡ್ಡಿ, ಪ್ರಿಯಾಂಕಾ ಖರ್ಗೆ, ಮಲ್ಲಿಕಾರ್ಜುನ್​ ಖರ್ಗೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ಧಾರೆ.

    First published: