DB Inamdar: ಮಾಜಿ ಸಚಿವ ಡಿ ಬಿ ಇನಾಮದಾರ್ ನಿಧನ, ಗಣ್ಯರ ಸಂತಾಪ

ಡಿ. ಬಿ. ಇನಾಮ​ದಾರ್

ಡಿ. ಬಿ. ಇನಾಮ​ದಾರ್

ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ. ಬಿ. ಇನಾಮದಾರ್ ನಿಧರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

  • News18 Kannada
  • 4-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು(ಏ.25): ಬೆಳಗಾವಿಯ ಕಾಂಗ್ರೆಸ್​ (Belagavi Congress) ಹಿರಿಯ ನಾಯಕ ಹಾಗೂ ಮಾಜಿ ಸಚಿವ ಡಿ. ಬಿ. ಇನಾಮದಾರ್​ (DB Inamdar) ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ‌ಅವರನ್ನ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಅವರು ತಡರಾತ್ರಿ ಮಣಿಪಾಲ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಇವರ ನಿಧನ ವಾರ್ತೆ ಕಾಂಗ್ರೆಸ್​ಗೆ ಆಘಾತ ಕೊಟ್ಟಿದೆ.


ಕಿತ್ತೂರು ವಿಧಾನಸಭೆ ಕ್ಷೇತ್ರದಿಂದ 9 ಸಲ ಸ್ಪರ್ಧಿಸಿ, 5 ಬಾರಿ ಗೆದ್ದಿದ್ದ ಡಿಬಿ ಇನಾಮದಾರ್, ಹಲವು ಪ್ರಮುಖ ಖಾತೆ ನಿರ್ವಹಣೆ ಮಾಡಿ ಜನಪ್ರಿಯತೆ ಗಳಸಿದ್ದ ನಾಯಕ. ಸರಳ, ಸಜ್ಜನಿಕೆಯಿಂದಲೇ ಬೆಳಗಾವಿ ಜಿಲ್ಲೆಯಲ್ಲಿ ಪ್ರಭಾವ ಹೊಂದಿದ್ದ ಅವರು ಈ ಬಾರಿಯೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅನಾರೋಗ್ಯ ಹಿನ್ನೆಲೆ ಬಾಬಾ ಸಾಹೇಬ್​ ಪಾಟೀಲ್​ ಅವರಿಗೆ ಟಿಕೆಟ್​ ಲಭಿಸಿತ್ತು ಎಂಬುವುದು ಉಲ್ಲೇಖನೀಯ.


ಇದನ್ನೂ ಓದಿ: Rizwan Arshad: ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್ ಅರ್ಷದ್‌ ಅವರ ರಾಜಕೀಯ ಜೀವನ ಹೀಗಿದೆ


ಇನ್ನು ಹುಬ್ಬಳ್ಳಿಯ ಮಲಪ್ರಭಾ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾಗಿದ್ದ ಡಿ. ಬಿ. ಇನಮದಾರ್, ಕಿತ್ತೂರು ರಾಣಿ ಸೈನಿಕ ಶಾಲೆಯ ಅಧ್ಯಕ್ಷರಾಗಿ ಡಿಬಿ ಕಾರ್ಯನಿರ್ವಹಿಸಿದ್ದಾರೆ.


ನಾಳೆ ಮದ್ಯಾಹ್ನ 2ಕ್ಕೆ ಸ್ವಗ್ರಾಮ ನೇಗಿನಾಳ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರ ತೀರ್ಮಾನ. ಮಾಡಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ ಪಹಲವು ರಜಕೀಯ ಗಣ್ಯರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: Dr K Annadani: ಗೆದ್ದೇ ಗೆಲ್ಲುವ ಛಲದಲ್ಲಿರುವ ಮಳವಳ್ಳಿ ಶಾಸಕ ಡಾ ಕೆ ಅನ್ನದಾನಿಯವರ ಬಗ್ಗೆ ನಿಮಗೆಷ್ಟು ಗೊತ್ತು?


ಮಾಜಿ ಸಚಿವ ಡಿ ಬಿ ಇನಾಮದಾರ ರಾಜಕೀಯ ಪಯಣ


1950ರ ಜುಲೈ 2ರಂದು ಕಿತ್ತೂರು ತಾಲೂಕಿನ ನೇಗಿನಾಳ ಗ್ರಾಮದಲ್ಲಿ ಜನಿಸಿದ ಡಿ. ಬಿ. ಇನಾಮದಾರ್ 1983ರಲ್ಲಿ ಜನತಾ ಪಕ್ಷದಿಂದ‌ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ‌ಮೊದಲ ಬಾರಿ ಗೆಲುವಿನ ನಗೆ ಬೀರಿದ್ದರು.


1994 ರಲ್ಲಿ ಕಾಂಗ್ರೆಸ್ ಸೇರ್ಪಡೆ ಯಾದ ಇನಾಮದಾರ್​ ಇಂದಿನವರೆಗೂ ಪಕ್ಷ ಬಿಟ್ಟಿಲ್ಲ. ಒಟ್ಟು 9 ಚುನಾವಣೆಗಳನ್ನ ಎದುರಿಸಿದ ಅವರು ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದಾರೆ. ದೇವರಾಜ ಅರಸ, ಎಸ್.ಎಂ ಕೃಷ್ಣ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.
ಸಚಿವರಾಗಿ ಯಾವೆಲ್ಲಾ ಖಾತೆ ನಿರ್ವಹಿಸಿದ್ದಾರೆ?


ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಮೊದಲನೇ ಸಲ 1983ರಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವರಾಗಿ ಕೆಲಸ


ಎರಡನೇ ಸಲ 1985ರಲ್ಲಿ ಆರೋಗ್ಯ ಸಚಿವರಾಗಿ ಕೆಲಸ


ಮೂರನೇ ಸಲ 1987ರಲ್ಲಿ ಅಬಕಾರಿ ಸಚಿವರಾಗಿ ಸಂಪುಟ ದರ್ಜೆ ಸಚಿವರಾಗಿ ಸೇವೆ


1999 ರಲ್ಲಿ ಎಸ್ಎಂ ಕೃಷ್ಣ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು.

top videos


    2000ರಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ. ಪ್ರವಾಸೋದ್ಯಮ ಸಚಿವರಾಗಿ ಸೇವೆ ಸಲ್ಲಿಸಿರುತ್ತಾರೆ.

    First published: