• ಹೋಂ
  • »
  • ನ್ಯೂಸ್
  • »
  • ರಾಜ್ಯ
  • »
  • Siddaramaiah: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್​ ಕಾರ್ಯಕರ್ತ!

Siddaramaiah: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್​ ಕಾರ್ಯಕರ್ತ!

ಸಿದ್ದರಾಮಯ್ಯ

ಸಿದ್ದರಾಮಯ್ಯ

ಸಿದ್ದರಾಮಯ್ಯರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್​ ಕಾರ್ಯಕರ್ತನೇ ಅನ್ನೋದು ಬಹಿರಂಗವಾಗಿದೆ. ಸಿದ್ದರಾಮಯ್ಯರ ಹಿಂದೂ ವಿರೋಧಿ ಹೇಳಿಕೆಗೆ ಬೇಸತ್ತು ಹೀಗೆ ಮಾಡಿದ್ದೇನೆ ಅಂತಾ ಕಾಂಗ್ರೆಸ್​ ಕಾರ್ಯಕರ್ತ ಸಂಪತ್ ಒಪ್ಪಿಕೊಂಡಿದ್ದಾರೆ.

ಮುಂದೆ ಓದಿ ...
  • Share this:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೊಡಗಿಗೆ (Kodagu) ಭೇಟಿ ಕೊಟ್ಟಿದ್ದಾಗ ಅಲ್ಲಿ ಅವರ ಕಾರಿನ ಮೇಲೆ ಮೊಟ್ಟೆ (Egg) ಎಸೆಯಲಾಗಿತ್ತು. ಮಡಿಕೇರಿಯ ಜನರಲ್ ತಿಮ್ಮಯ್ಯ ಸರ್ಕಲ್​ಗೆ ಸಿದ್ದರಾಮಯ್ಯನವರ ಕಾರು (Car) ಬರುತ್ತಿದ್ದಂತೆ ಮೊಟ್ಟೆ ಎಸೆಯಲಾಗಿತ್ತು. ಇದಕ್ಕೆ ಕಾಂಗ್ರೆಸ್​ (Congress) ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು. ಸಿದ್ದರಾಮಯ್ಯ ಕೂಡ ಸರ್ಕಾರ, ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಿಡಿಕಾರಿದ್ದರು. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ನಂತರ ಸಿಎಂ ಬೊಮ್ಮಾಯಿ ಪ್ರಕರಣದ ತನಿಖೆಗೆ ಆದೇಶ ಮಾಡಿದ್ದರು. ಈಗ ಮೊಟ್ಟೆ ಎಸೆದ ಪ್ರಕರಣಕ್ಕೆ ಟ್ವಿಸ್ಟ್ (Twist)​ ಸಿಕ್ಕಿದೆ. ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್​ ಕಾರ್ಯಕರ್ತನೇ ಅನ್ನೋದು ಗೊತ್ತಾಗಿದೆ.


ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್​ ಕಾರ್ಯಕರ್ತನೇ ಅನ್ನೋದು ಬಹಿರಂಗವಾಗಿದೆ. ಹಿಂದೂ ವಿರೋಧಿ ಹೇಳಿಕೆಗೆ ಬೇಸತ್ತು ಹೀಗೆ ಮಾಡಿದ್ದೇನೆ ಅಂತಾ ಕಾಂಗ್ರೆಸ್​ ಕಾರ್ಯಕರ್ತ ಸಂಪತ್ ಒಪ್ಪಿಕೊಂಡಿದ್ದಾರೆ.


ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಸಂಪತ್​!


ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ತಿರುವು ದೊರೆತಿದ್ದು, ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ನಾನೇ. ನಾನು ಬಿಜೆಪಿ ಕಾರ್ಯಕರ್ತನಲ್ಲ. ನಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಬಂಧಿತ ಆರೋಪಿ ಸಂಪತ್ ಹೇಳಿದ್ದಾರೆ.


ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ; ಕೊಲೆಗೆ ಸಂಚು ಎಂಬ ಆರೋಪದಲ್ಲಿ ಹುರುಳಿಲ್ಲ ಎಂದ ಪ್ರಹ್ಲಾದ್ ಜೋಶಿ


ಸಿದ್ದು ಹಿಂದೂ ವಿರೋಧಿ ಹೇಳಿಕೆಗೆ ಮೊಟ್ಟೆ ಎಸೆದೆ!


ಸಿದ್ದರಾಮಯ್ಯರ ಕಾರಿಗೆ ಮೊಟ್ಟೆ ಎಸೆದಿದ್ದು ನಾನೇ ಎಂದು ಕಾಂಗ್ರೆಸ್ ಕಾರ್ಯಕರ್ತ ಸಂಪತ್ ಒಪ್ಪಿಕೊಂಡಿದ್ದಾರೆ. ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್​ನಲ್ಲಿ ಹಿಂದೂಗಳಿಲ್ವಾ? ಸಿದ್ದರಾಮಯ್ಯ ಹಿಂದೂಗಳು ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ? ಅವರ ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದಿದ್ದೆ ಎಂದು ಸಂಪತ್​ ಹೇಳಿದ್ದಾರೆ.


ಕಾಂಗ್ರೆಸ್ ಕಾರ್ಯಕರ್ತ ಸಂಪತ್​ನನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಕುಶಾಲನಗರ ಜೆಎಂಎಫ್​ಸಿ ನ್ಯಾಯಾಲಯ ಆವರಣದಲ್ಲಿ ಬಂಧಿಸಿದ್ದಾರೆ. ಸಿದ್ದರಾಮಯ್ಯ ಭೇಟಿ ನೀಡಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಆರೋಪಿ ಸಂಪತ್ ಸಿದ್ದು ಕಾರಿನತ್ತ ಮೊಟ್ಟೆ ತೂರಿದ್ದರು.


ಪ್ರತಿಕ್ರಿಯೆಗೆ ಡಿಕೆಶಿ ನಕಾರ!


ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ಪ್ರಕರಣ ಸಂಬಂಧ ಮೊಟ್ಟೆ ಎಸೆದವ ಕಾಂಗ್ರೆಸ್ ‌ಕಾರ್ಯಕರ್ತ ಅನ್ನೋದು ಗೊತ್ತಾಗ್ತಿದ್ದಂತೆ ಡಿಕೆಶಿ ಮಾಧ್ಯಮದೊಂದಿಗೆ ಪ್ರತಿಕ್ರಿಯೆಗೂ ನಿರಾಕರಿಸಿದ್ದಾರೆ. ನಿನ್ನೆಯಷ್ಟೇ ಡಿಕೆಶಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಸಿಎಂ ಬೊಮ್ಮಾಯಿಯವರೇ ನಿನ್ನ ಕಾರ್ಯಕರ್ತರನ್ನು ಹದ್ದುಬಸ್ತಿನಲ್ಲಿಡಿ ಅಂತಾ ಎಚ್ಚರಿಸಿದ್ದರು.


ಇದನ್ನೂ ಓದಿ: ಧರ್ಮ ಒಡೆದ ಬಗ್ಗೆ ಸಿದ್ದರಾಮಯ್ಯ ಪಶ್ಚಾತಾಪ ? ರಂಭಾಪುರೀ ಶ್ರೀಗಳ ಹೇಳಿಕೆ, ರಾಜಕೀಯದಲ್ಲಿ ಸಂಚಲನ


ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯರಿಗೆ ಪೊಲೀಸ್ ಭದ್ರತೆ‌


ಇನ್ನು ಕೊಡಗಿಗೆ ನೆರೆಹಾನಿ ವೀಕ್ಷಣೆಗೆ ಸಿದ್ದರಾಮಯ್ಯ ಭೇಟಿ ನೀಡಿದ ಬಳಿಕ ಪರಿಸ್ಥಿತಿ ಮೊದಲಿನಂತಿಲ್ಲ. ಈ ಹಿನ್ನೆಲೆ ಶಾಸಕ ಅಪ್ಪಚ್ಚು ರಂಜನ್ ಮತ್ತು ಕೆ ಜಿ ಬೋಪಯ್ಯರಿಗೆ ಪೊಲೀಸ್ ಭದ್ರತೆ‌ ಹೆಚ್ಚಿಸಲಾಗಿದೆ. ಪೋನ್ ಮೂಲಕ ಬೆಂಗಳೂರು ಪೊಲೀಸರು ನಿರಂತರ ಸಂಪರ್ಕದಲ್ಲಿದ್ದಾರೆ. ಬೆಂಗಳೂರಿಗೆ ಬರುವಾಗ ಮೊದಲೇ ತಿಳಿಸುವಂತೆ ಪೊಲೀಸರು ಸೂಚನೆ ಕೊಟ್ಟಿದ್ದಾರೆ.


ಮಡಿಕೇರಿ ಚಲೋಗೆ ಕೈ ಕಾರ್ಯಕರ್ತರ ಸಿದ್ಧತೆ


ಇನ್ನು ಮಡಿಕೇರಿ ಪ್ರವಾಸದ ವೇಳೆ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ಸಿದ್ದರಾಮಯ್ಯ ಬೆಂಬಲಿಗರು ಮಡಿಕೇರಿ ಚಲೋಗೆ ರೂಪುರೇಷೆ ತಯಾರಿ ಮಾಡಿಕೊಂಡಿದ್ದಾರೆ. ಇದೆ ಆಗಸ್ಟ್ 26ರಂದು ಮಡಿಕೇರಿ ಚಲೋ ಪಾದಯಾತ್ರೆಗೆ ಅಭಿಮಾನಿಗಳು ಸಿದ್ಧತೆ ನಡೆಸುತ್ತಿದ್ದಾರೆ.

Published by:Thara Kemmara
First published: