ದಾವಣಗೆರೆ: ಹೊನ್ನಾಳಿ ವಿಧಾನಸಭಾ ಕ್ಷೇತ್ರದ (Honnali Constituency) ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿಯಲಾಗಿದೆ. 24 ವರ್ಷದ ಮಧು ಚಾಕು ಇರಿತಕ್ಕೊಳಗಾದ ಕಾಂಗ್ರೆಸ್ ಕಾರ್ಯಕರ್ತ. ಸದ್ಯ ಮಧು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ (Former MLA MP Renukacharya) ಅವರ ಬೆಂಬಲಿಗರಾದ ಪ್ರವೀಣ್ ಪ್ರಕಾಶ್ ತೀರ್ಥಲಿಂಗ ಸೇರಿ ಕೆಲ ಬಿಜೆಪಿ ಕಾರ್ಯಕರ್ತರು ಈ ದಾಳಿ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹೊನ್ನಾಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಂತನಗೌಡ (Shantanagowda) ಗೆದ್ದ ಹಿನ್ನೆಲೆ ಗ್ರಾಮದಲ್ಲಿ ಪಟಾಕಿ ಹಚ್ಚಿದ ವಿಚಾರಕ್ಕೆ ಜಗಳ ಆರಂಭಗೊಂಡಿತ್ತು. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನನ್ನ ಸೋಲಿಗೆ ನಾನೇ ಕಾರಣ
ಕೋವಿಡ್ ಸಮಯದಲ್ಲಿ ಕೆಲಸ ಮಾಡಿದ್ದೆ, ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡಿದ್ದೆ. ಆದರೆ ಈಗ ಸೋತ ಬಳಿಕ ನಾನು ಯಾರ ಬಗ್ಗೆಯೂ ಆರೋಪ ಮಾಡಲ್ಲ, ನನ್ನ ಸೋಲಿಗೆ ನಾನೇ ಕಾರಣ ಅಂತ ಭಾವಿಸುತ್ತೇನೆ. ಮತದಾರರಿಗೆ ನನ್ನ ಮೇಲೆ ನಂಬಿಕೆ ಇರಲಿಲ್ಲ ಅನ್ಸುತ್ತೆ. ನಾನು ಗೆದ್ದರೂ ದ್ವೇಷ ರಾಜಕಾರಣ ಮಾಡಿರಲಿಲ್ಲ ಎಂದು ರೇಣುಕಾಚಾರ್ಯ ನೋವು ತೋಡಿಕೊಂಡಿದ್ದಾರೆ.
ಕೊಲೆ ಆರೋಪಿಯ ಬಂಧನ
ಒಂಟಿ ಮಹಿಳೆ ಟಾರ್ಗೆಟ್ ಮಾಡಿ ಕೊಲೆ ಮಾಡುತ್ತಿದ್ದ ಆರೋಪಿಯನ್ನು ಶಹಾಪುರ ತಾಲೂಕಿನ ಯಡ್ರಾಮಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹಣಮಂತ ಭಜಂತ್ರಿ ಬಂಧಿತ ಆರೋಪಿ. ಮಾರ್ಚ್ ಹಾಗೂ ಮೇ ತಿಂಗಳಲ್ಲಿ ಇಬ್ಬರು ಮಹಿಳೆಯರನ್ನು ಹಣಮಂತ ಭಜಂತ್ರಿ ಕೊಲೆ ಮಾಡಿದ್ದನು.
ಇದನ್ನೂ ಓದಿ: ಕರ್ನಾಟಕ ಚುನಾವಣಾ ಫಲಿತಾಂಶ 2023 LIVE: ಸಿಎಂ ಕುರ್ಚಿ ಯಾರಿಗೆ? ಖರ್ಗೆ ನಿವಾಸದಲ್ಲಿ ಡಿಕೆಶಿ ಬ್ರದರ್ಸ್ ಮೀಟಿಂಗ್
ಹರನಾಳ (ಬಿ) ಹಾಗೂ ಕುಕನೂರು ಗ್ರಾಮದಲ್ಲಿಇಬ್ಬರು ಮಹಿಳೆಯರ ಕೊಲೆಯಾಗಿತ್ತು. ಕೊಲೆಗೈದು ಶವವನ್ನು ಹೂತಿಡುತ್ತಿದ್ದನು. ಈ ಸಂಬಂಧ ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಶಹಾಪುರ ಪಟ್ಟಣದಲ್ಲಿ ಬಂಧಿಸಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ