Shivamogga: ಮಾಲ್​ನಲ್ಲಿ ಸಾವರ್ಕರ್ ಫೋಟೋ ವಿವಾದ, ಶಿವಮೊಗ್ಗ ಕೆಲ ಹೊತ್ತು ಉದ್ವಿಗ್ನ

ಇಡೀ ಭಾರತ ದೇಶ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಪುಟಾಣಿ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಸಂಭ್ರಮಿಸ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದೇ ವಿಚಾರಕ್ಕೆ ವಿವಾದ ಸೃಷ್ಟಿಯಾಗಿದೆ. ಶಿವಮೊಗ್ಗದ ಶಿವಪ್ಪನಾಯಕ ಮಾಲ್​​​ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಶಿವಮೊಗ್ಗದಲ್ಲಿ ಫೋಟೋ ವಿವಾದ

ಶಿವಮೊಗ್ಗದಲ್ಲಿ ಫೋಟೋ ವಿವಾದ

  • Share this:
ದೇಶಾದ್ಯಂತ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮ (Celebration)  ಮುಗಿಲುಮುಟ್ಟಿದೆ. ರಾಷ್ಟ್ರದೆಲ್ಲೆಡೆ (India) ಮತ್ತಷ್ಟು ಸಡಗರದಿಂದ ಆಜಾದಿ ಕಾ ಅಮೃತಮಹೋತ್ಸವ ಆಚರಿಸಲಾಗುತ್ತಿದೆ. ಎಲ್ಲೆಡೆ ಹರ್​ ಘರ್​ ತಿರಂಗಾ ರಾರಾಜಿಸ್ತಿದೆ. ಆದರೆ ಶಿವಮೊಗ್ಗದಲ್ಲಿ ವಿವಾದ (Controversy)  ಶುರುವಾಗಿದೆ. ಸ್ವಾತಂತ್ರ್ಯೋತ್ಸವ (Independence) ಅಮೃತ ಮಹೋತ್ಸವದ ಅಂಗವಾಗಿ ಶಿವಮೊಗ್ಗ (Shivamogga) ಮಹಾನಗರ ಪಾಲಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರ ಪ್ರದರ್ಶನ (Photo exhibition) ಏರ್ಪಡಿಸಲಾಗಿತ್ತು. ಇದೀಗ ಛಾಯಾಚಿತ್ರ ಪ್ರದರ್ಶನ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಸ್ವಾತಂತ್ರ್ಯ ಹೋರಾಟಗಾರ (Freedom Fighter) ವೀರಸಾವರ್ಕರ್ ಫೋಟೋ ಹಾಕಿದ್ದಕ್ಕೆ ಎಸ್​ಡಿಪಿಐ ಕಿರಿಕ್ ತೆಗೆದಿದೆ. ಪರಿಣಾಮ ಸ್ಥಳದಲ್ಲಿ ಪ್ರತಿಭಟನೆಗಳು ಕೂಡ ನಡೆಯಿತು. ಪೊಲೀಸರು ಓರ್ವನನ್ನು ವಶಕ್ಕೆ ಕೂಡ ಪಡೆದಿದ್ದಾರೆ.

ಇಡೀ ಭಾರತ ದೇಶ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ. ಪುಟಾಣಿ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಸಂಭ್ರಮಿಸ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದೇ ವಿಚಾರಕ್ಕೆ ವಿವಾದ ಸೃಷ್ಟಿಯಾಗಿದೆ. ಶಿವಮೊಗ್ಗದ ಶಿವಪ್ಪನಾಯಕ ಮಾಲ್​​ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ.

ಛಾಯಾಚಿತ್ರ ಪ್ರದರ್ಶನದಲ್ಲಿ ವಿವಾದ

ಶಿವಮೊಗ್ಗದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರ ಪ್ರದರ್ಶನ. ಇಲ್ಲಿನ ಮಹಾನಗರ ಪಾಲಿಕೆ ವತಿಯಿಂದ ನಗರದ ಶಿವಪ್ಪನಾಯಕ ಮಾಲ್​​​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಭಗತ್ ಸಿಂಗ್, ಸರ್ದಾರ್ ವಲ್ಲಭಬಾಯ್ ಪಟೇಲ್, ಚಂದ್ರಶೇಖರ್ ಆಜಾದ್, ಅಂಬೇಡ್ಕರ್, ಸುಭಾಷ್ ಚಂದ್ರಬೋಸ್, ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ಏರ್ಪಡಿಸಲಾಗಿತ್ತು.

Controversy in photo exhibition organized in connection with Independence Day in Shivamogga
ಶಿವಮೊಗ್ಗದಲ್ಲಿ ವೀರ ಸಾವರ್ಕರ್ ಫೋಟೋ ವಿವಾದ


ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್ಚಿದ ಆಕ್ರೋಶ, ಸ್ಯಾಂಡಲ್​ವುಡ್​ ಯುವನಟನ ಬಂಧನ- ಇಂದಿನ ಪ್ರಮುಖ ಸುದ್ದಿಗಳು

ವೀರ ಸಾವರ್ಕರ್ ಫೋಟೋ ಹಾಕಿದ್ದಕ್ಕೆ ಕಿರಿಕ್

ಮಾಲ್​ನಲ್ಲಿ ಛಾಯಾಚಿತ್ರ ಪ್ರದರ್ಶನ ಗಮನಿಸಿದ ಎಸ್​​ಡಿಪಿಐ ಕಾರ್ಯಕರ್ತರು, ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರನೇ ಅಲ್ಲ. ಬ್ರಿಟಿಷರ ಬೂಟ್ ನೆಕ್ಕಿದವನು. ಬ್ರಿಟಿಷರಿಗೆ ಕ್ಷಮಾಪಣ ಪತ್ರ ಬರೆದುಕೊಟ್ಟು ಬಂದವನು. ಆತ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗುತ್ತಾನೆ ಎಂದು ಫೋಟೋ ತೆಗೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಹಾಕುವಂತೆ ಆಗ್ರಹಿಸಿದರು.

ಇದನ್ನೂ ಓದಿ: ಕೊಡಗಿನಲ್ಲಿ ತ್ರಿಕೋನ ಪ್ರೇಮಕಥೆ, ಇಬ್ಬರಿಗೆ ಚಾಕು ಇರಿದ ಯುವಕ!

ಸಾವರ್ಕರ್ ಫೋಟೋಗೆ SDPI ವಿರೋಧ

ಎಸ್​​ಡಿಪಿಐ ಕಾರ್ಯಕರ್ತರು ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಎಸ್​​ಡಿಪಿಐ ಕಾರ್ಯಕರ್ತರ‌ ವಿರುದ್ಧ ಪ್ರತಿಭಟನೆ ನಡೆಸಿದರು.

Controversy in photo exhibition organized in connection with Independence Day in Shivamogga
SDPI ಕಾರ್ಯಕರ್ತರಿಂದ ಅಡ್ಡಿ


ಸ್ವಾತಂತ್ರ್ಯ ಹೋರಾಟಗಾರರಿಗೆ ಎಸ್​​ಡಿಪಿಐ ಕಾರ್ಯಕರ್ತರು ಅವಮಾನ ಮಾಡಿದ್ದಾರೆ. ಕೆಲವು ಮುಸ್ಲಿಂ ಕಿಡಿಗೇಡಿಗಳು ಭಾವಚಿತ್ರವನ್ನು ತೆಗೆಸಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಕಲಾಂ ಭಾವಚಿತ್ರ ಅಳವಡಿಸಿದ ಮಾಲ್ ಸಿಬ್ಬಂದಿ

ಘಟನೆ ಬಳಿಕ ಎಚ್ಚೆತ್ತ ಮಾಲ್ ಸಿಬ್ಬಂದಿ ವೀರ ಸಾವರ್ಕರ್ ಭಾವಚಿತ್ರ ಮತ್ತೆ ಹಾಕುವುದರ ಜೊತೆಗೆ ಅಬ್ದುಲ್ ಕಲಾಂ ಅವರ ಭಾವಚಿತ್ರವನ್ನು ಅಳವಡಿಸಿದರು. ಭಾವಚಿತ್ರದ ಗೊಂದಲ ಕೆಲಕಾಲ ಅಮೃತ ಮಹೋತ್ಸವದ ಸಂಭ್ರಮಕ್ಕೆ ಅಡ್ಡಿಯಾಯಿತು.

SDPI ಕಾರ್ಯಕರ್ತರ ವಿರುದ್ಧ ದೂರು

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿಯಲ್ಲಿ ಕೆಲವು ಎಸ್​ಡಿಪಿಐ ಕಾರ್ಯಕರ್ತರ ವಿರುದ್ದ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಾಲಿಕೆ ಅಧಿಕಾರಿಗಳು ದೊಡ್ಡಪೇಟೆ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ದಾರೆ. ಈ ವೇಳೆ ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆಗೆ ಮುಂದಾದ ಘಟನೆಯೂ ನಡೆದಿದೆ.

ವಿಜಯಪುರದಲ್ಲಿ ಶಾಸಕರಿಂದಲೇ ರಾಷ್ಟ್ರಧ್ವಜಕ್ಕೆ ಅಪಮಾನ

ಹರ್ ಘರ್ ತಿರಂಗಾ ರ್ಯಾಲಿಯಲ್ಲಿ ಮುದ್ದೇಬಿಹಾಳ ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಯಡವಟ್ಟು ಮಾಡಿದ್ದಾರೆ. ಆನೆ‌ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ‌ ಮೇಲೆ ಅವರ ಮಗನನ್ನು ಕೂರಿಸಿ ಅಪಮಾನ ಮಾಡಿದ್ದಾರೆ. ಆಲಮಟ್ಟಿಯಿಂದ ತಾಳಿಕೋಟೆವರೆಗೆ ನಡೆದ ಆಜಾದಿ ‌ಕಾ ಅಮೃತ ಮಹೋತ್ಸವ ರ್ಯಾಲಿಯಲ್ಲಿ ಘಟನೆ ನಡೆದಿದೆ. ಶಾಸಕ ಎ.ಎಸ್ ಪಾಟೀಲ್ ನಡಹಳ್ಳಿ ಪುತ್ರ ಕುಳಿತಿದ್ದ ವಿಡಿಯೋ ಸಾಮಾಜಿಕ‌‌ ಜಾಲತಾಣದಲ್ಲಿ ವೈರಲ್ ಆಗಿದೆ.
Published by:Thara Kemmara
First published: