ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Election) ಘೋಷಣೆ ಬೆನ್ನಲ್ಲೇ ಮತದಾರರಿಗೆ (Voter) ಆಮಿಷ, ಉಡುಗೊರೆಗಳ (Gift) ಮಹಾಪೂರವೇ ಹರಿದುಬರುತ್ತಿದೆ. ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಆಗುತ್ತಿದ್ದಂತೆ, ಮತದಾರರನ್ನ ಸೆಳೆಯಲು ಕಸರತ್ತು ಶುರುವಾಗಿದೆ. ಉಡುಗೊರೆ ಹಂಚುವುದು, ಆಮಿಷ ತೋರುವ ಪ್ರಕರಣಗಳು ಹೆಚ್ಚಾಗಿದೆ. ಪೊಲೀಸರು (Police) ಇಂತಹ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಪ್ರತಿಯೊಂದು ಜಿಲ್ಲೆಯಲ್ಲೂ ಚೆಕ್ಪೋಸ್ಟ್ಗಳನ್ನು (Checkpost) ನಿರ್ಮಿಸಿ ಪೊಲೀಸರು ವಾಹನ ಸವಾರರನ್ನು ಪರಿಶೀಲನೆ ನಡೆಸುತ್ತಿದ್ದು, ಈ ವೇಳೆ ನೀತಿ ಸಂಹಿತೆ (Code of Conduct) ಉಲ್ಲಂಘನೆ ಮಾಡಿ ಯಾವುದೇ ದಾಖಲೆ ಇಲ್ಲದೆ ಹಣ ಸಾಗಾಟ ಮಾಡುತ್ತಿದ್ದ ಪ್ರಕರಣಗಳು ವರದಿಯಾಗುತ್ತಿದ್ದು, ಇಂದು ಕೂಡ ಹಣವನ್ನು (Money) ಬೆಲ್ಟ್ನಂತೆ ಸೊಂಟಕ್ಕೆ ಕಟ್ಟಿಕೊಂಡು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಹಣವನ್ನು ಸೀಜ್ ಮಾಡಿದ್ದಾರೆ. ದಾವಣಗೆರೆಯ ಹೊನ್ನಾಳಿ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್ಪೋಸ್ಟ್ನಲ್ಲಿ ನಡೆದಿದೆ.
ನಿನ್ನೆ ತಡರಾತ್ರಿ 12 ಗಂಟೆ ಸರಿಸುಮಾರಿಗೆ ಘಟನೆ ನಡೆದಿದ್ದು, ಬೈಕ್ನಲ್ಲಿ ಬಂದ ವ್ಯಕ್ತಿಯನ್ನು ಪರಿಶೀಲನೆ ನಡೆಸಿದ ವೇಳೆ 7.5 ಲಕ್ಷ ರೂಪಾಯಿ ಪತ್ತೆಯಾಗಿದೆ. ದಾಖಲೆ ಇಲ್ಲದೆ ಸೊಂಟದ ಸುತ್ತ ಹಣ ಇಟ್ಟುಕೊಂಡು ಹೋಗುತ್ತಿದ್ದ ವ್ಯಕ್ತಿಗಳು ಸೈಫುಲ್ಲಾ, ಮತ್ತು ಕುಮಾರ್ ಶಿಕಾರಿಪುರ ಮೂಲದವರು ಎನ್ನಲಾಗಿದೆ.
ಇದನ್ನೂ ಓದಿ: Mandya News: ಮ್ಯಾಟ್ರಿಮೋನಿಯಲ್ಲಿ ಯುವತಿಗೆ ಗಾಳ, 31 ಲಕ್ಷ ವಂಚಿಸಿದ ಖದೀಮ!
ಹಣ ಪತ್ತೆಯಾದ ಬಳಿಕ ವಿಚಾರಣೆ ವೇಳೆ ಸೈಫುಲ್ಲಾ ಮತ್ತು ಕುಮಾರ್ ಸರಿಯಾದ ಮಾಹಿತಿ ನೀಡಿರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ದಾವಣಗೆರೆಯಿಂದ ಬಂದ ವ್ಯಕ್ತಿಗಳು ಹೊನ್ನಾಳಿಯಿಂದ ಬಂದಿದ್ದು ಎಂದು ಪೊಲೀಸರ ಎದುರು ಗೊಂದಲ ಹೇಳಿಕೆ ನೀಡಿದ್ದಾರೆ.
ಚಿಕ್ಕೋಡಿಯಲ್ಲಿ 1.5 ಕೋಟಿ ನಗದು ಸೀಜ್
ಇನ್ನು, ಚಿಕ್ಕೋಡಿಯ ಕುಗನೋಳ್ಳಿ ಚೆಕ್ ಪೋಸ್ಟ್ ನಲ್ಲಿ ನಿಪ್ಪಾಣಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ತಪಾಸಣೆ ವೇಳೆ ಬರೋಬ್ಬರಿ 1.5 ಕೋಟಿ ರೂಪಾಯಿ ಸೀಜ್ ಮಾಡಿದ್ದಾರೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕುಗನೋಳ್ಳಿ ಚೆಕ್ ಪೋಸ್ಟ್ ಬಳಿ ಮಹಾರಾಷ್ಟ್ರದ ಮುಂಬೈನಿಂದ ರಾಜ್ಯಕ್ಕೆ ಆಗಮಿಸುತ್ತಿದ್ದ ಬಸ್ನಲ್ಲಿ ಹಣ ಪತ್ತೆಯಾಗಿದೆ.
ಯಾವುದೇ ದಾಖಲಾತಿ ಇಲ್ಲದೆ ಕೋಟಿ ಕೋಟಿ ಹಣ ಸಾಗಾಟ ಮಾಡುತ್ತಿದ್ದ ಕಾರಣ ಹಣವನ್ನು ವಶಕ್ಕೆ ಪಡೆದುಕೊಂಡಿರುವ ನಿಪ್ಪಾಣಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ