Covid19: ಮಕ್ಕಳಿಗೆ ಕೊರೊನಾ ಲಕ್ಷಣಗಳಿದ್ರೆ ಶಾಲೆಗೆ ಕಳುಹಿಸಬೇಡಿ; BBMPಯಿಂದ ಗೈಡ್​ಲೈನ್ ಬಿಡುಗಡೆ

ಮಕ್ಕಳಿಗೆ, ಪೋಷಕರಿಗೆ ಪ್ರತ್ಯೇಕ ಮುಂಜಾಗ್ರತಾ ಕ್ರಮಗಳು ಹಾಗೂ  ವಿದ್ಯಾಸಂಸ್ಥೆಗಳಿಗೆ ಮಾರ್ಗಸೂಚಿ ಪ್ರಕಟಿಸಿರೋ ಬಿಬಿಎಂಪಿ, ಕೊರೊ‌ನಾಗೆ ಭಯಪಡದೇ ಲಸಿಕೆ ಹಾಕಿಸಿಕೊಳ್ಳಲು ಸಲಹೆ ನೀಡಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಜೂ 16): ಬೆಂಗಳೂರಿನಲ್ಲಿ ಕೊರೊನಾ ಕೇಸ್ (Corona Case) ಏರಿಕೆಯಾಗ್ತಿರೋ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಲ್ಲಿ ಕೊರೊನಾ ಮಾರ್ಗಸೂಚಿ (Guidelines) ಪ್ರಕಟ ಮಾಡಲಾಗಿದೆ.  ಸಾರ್ವಜನಿಕರಿಗೂ ಕೊರೊನಾ‌ ಮುಂಜಾಗ್ರತಾ ಕ್ರಮ (Precautionary Measures) ಪಾಲನೆಗೆ ಬಿಬಿಎಂಪಿ (BBMP) ಸೂಚನೆ ನೀಡಿದೆ. ಮಕ್ಕಳಿಗೆ, ಪೋಷಕರಿಗೆ ಪ್ರತ್ಯೇಕ ಮುಂಜಾಗ್ರತಾ ಕ್ರಮಗಳು ಹಾಗೂ  ವಿದ್ಯಾಸಂಸ್ಥೆಗಳಿಗೆ (Schools) ಮಾರ್ಗಸೂಚಿ ಪ್ರಕಟಿಸಿರೋ ಬಿಬಿಎಂಪಿ, ಕೊರೊ‌ನಾಗೆ ಭಯಪಡದೇ ಲಸಿಕೆ (Vaccine) ಹಾಕಿಸಿಕೊಳ್ಳಲು ಸಲಹೆ ನೀಡಿದೆ.

ವಿದ್ಯಾಸಂಸ್ಥೆಗಳು ಅನುಸರಿಸಬೇಕಾದ ಕ್ರಮಗಳು

1. ಸಂಸ್ಥೆಯ ದ್ವಾರದಲ್ಲಿ ಎಲ್ಲರಿಗೂ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್

2. ಕೋವಿಡ್ ಗುಣಲಕ್ಷಣ ಕಂಡು ಬಂದಲ್ಲಿ ಕೂಡಲೇ ಕೋವಿಡ್-19 ಪರೀಕ್ಷೆ ನಡೆಸಬೇಕು

3. ಫಲಿತಾಂಶ ಬರುವವರೆಗೂ ಪ್ರತ್ಯೇಕವಾಗಿ ಇರಿಸುವುದು

4. ಸಂಸ್ಥೆಯ ಆವರಣದಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು

5. ಮಾಸ್ಕ್ ಧರಿಸಿರುವುದು, ಸಾಮಾಜಿಕ ಅಂತರ ಕಾಪಾಡುವುದು ಖಚಿತಪಡಿಸಿಕೊಳ್ಳಬೇಕು

6. ಸಂಸ್ಥೆಯ ಆವರಣದ ಮುಖ್ಯ ಸ್ಥಳಗಳಲ್ಲಿ ಸ್ಯಾನಿಟೈಸರ್ ಲಭ್ಯತೆಯನ್ನು ಖಚಿತಪಡಿಸಿಕೊಳ್ಳುವುದು.

7. ಸಂಸ್ಥೆಯ ಆವರಣದಲ್ಲಿ ಸ್ವಚ್ಛತೆ ಕಾಪಾಡುವುದು.

8. ಸಂಸ್ಥೆಯ ಸಿಬ್ಬಂದಿ ಕೋವಿಡ್-19 ಲಸಿಕೆ ಪಡೆದಿರುವುದನ್ನು ಖಚಿತಪಡಿಸಿಕೊಳ್ಳಬೇಕು

9. ಲಸಿಕೆ ಪಡೆಯದವರು ಕೂಡಲೇ ಲಸಿಕೆ ಪಡೆಯುವಂತೆ ವ್ಯವಸ್ಥೆ ಮಾಡುವುದು

10. ಕೋವಿಡ್-19 ಲಸಿಕೆ ಪಡೆಯುವಂತೆ ಪ್ರೇರೇಪಿಸಿ, ಅಗತ್ಯ ಕ್ರಮ ಕೈಗೊಳ್ಳುವುದು.

ಇದನ್ನೂ ಓದಿ: Bengaluru: ಬೆಂಗಳೂರಲ್ಲೂ ಡೆಂಗ್ಯೂ, ಕೊರೋನಾ ಪ್ರಕರಣ ಹೆಚ್ಚಳ!

ವಿದ್ಯಾರ್ಥಿಗಳು, ಪೋಷಕರು ಅನುಸರಿಸಬೇಕಾದ ಕ್ರಮಗಳು

1. ಮನೆಯಲ್ಲಿರುವ ಎಲ್ಲರೂ ಕೋವಿಡ್-19 ಲಸಿಕೆ ಹಾಕಿಸಿಕೊಳ್ಳಬೇಕು

2. ಪೋಷಕರು, ಮಕ್ಕಳಲ್ಲಿ ಕೋವಿಡ್ ಲಕ್ಷಣ ಕಂಡು ಬಂದಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು

3. ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಿಸಿದಲ್ಲಿ ಫಲಿತಾಂಶ ಬರುವವರೆಗೂ ಶಾಲೆಗೆ ಕಳುಹಿಸಬೇಡಿ

4. ಮನೆಯಲ್ಲಿರುವ ಎಲ್ಲಾ ಅರ್ಹ ಮಕ್ಕಳು ಕೋವಿಡ್-19 ಲಸಿಕೆ ಪಡೆಯಲು ಪ್ರೇರೇಪಿಸುವುದು.

5. ಮನೆಯಲ್ಲಿರುವ ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು

ಬೆಂಗಳೂರು ಶಾಲೆಗಳಲ್ಲಿ ಕೊರೊನಾ ಸ್ಫೋಟ

ಬಿಬಿಎಂಪಿಯ ದಾಸರಹಳ್ಳಿ ವಲಯದ  ಎರಡು ಶಾಲೆಯ ಒಟ್ಟು 31 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಸೋಂಕಿತರು ಪತ್ತೆಯಾದ ತರಗತಿಯ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ. ದಾಸರಹಳ್ಳಿ ವಲಯದ ಪೀಣ್ಯ ಎರಡನೇ ಹಂತದ ಖಾಸಗಿ ಶಾಲೆಯ 5ನೇ ತರಗತಿಯ 10 ವಿದ್ಯಾರ್ಥಿಗಳಿಗೆ ಸೋಮವಾರ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

21 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಕಳೆದ ಗುರುವಾರ ರಾಜಗೋಪಾಲ ನಗರದ ಖಾಸಗಿ ಶಾಲೆಯ 5 ಮತ್ತು 6ನೇ ತರಗತಿಯ ಒಟ್ಟು 21 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿತ್ತು.  ಉಳಿದ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಕೊಠಡಿ ಹಾಗೂ ಆವರಣಕ್ಕೆ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಿ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ದಾಸರಹಳ್ಳಿ ವಲಯದ ಆರೋಗ್ಯ ವೈದ್ಯಾಧಿಕಾರಿ ಸುರೇಶ್ ರುದ್ರಪ್ಪ ಮಾಹಿತಿ ನೀಡಿದ್ದಾರೆ.

ಕಂಟೈನ್ಮೆಂಟ್ ವಲಯಗಳ ಸಂಖ್ಯೆ 21ಕ್ಕೆ ಏರಿಕೆ !

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ದೈನಂದಿನ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾದರೂ ಕಂಟೈನ್ಮೆಂಟ್ ವಲಯಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರ ಐದು ಹೊಸ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿವೆ. ಈ ಮೂಲಕ ಒಟ್ಟು ಕಂಟೈನ್ಮೆಂಟ್ ವಲಯಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಮಹದೇವಪುರ ವಲಯದಲ್ಲಿ ನಾಲ್ಕು ಹಾಗೂ ದಾಸರಹಳ್ಳಿ ವಲಯದಲ್ಲಿ ಒಂದು ಹೊಸದಾಗಿ ಕಂಟೈನ್ಮೆಂಟ್ ವಲಯ ಸೃಷ್ಟಿಯಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ಇದನ್ನೂ ಓದಿ: Covid19: ಜುಲೈ ಮೊದಲ ವಾರದಲ್ಲಿ ಕೊರೊನಾ 4ನೇ ಅಲೆ ಫಿಕ್ಸ್​! ಬೆಂಗಳೂರಲ್ಲೇ ಹೆಚ್ಚಾಗಿದೆ ಕೇಸ್

ನಗರದಲ್ಲಿ 500ರ ಗಡಿದಾಟಿದ ದೈನಂದಿನ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಕಳೆದ ಭಾನುವಾರ 429ಕ್ಕೆ ಇಳಿಕೆಯಾದರೆ, ಸೋಮವಾರ 400ಕ್ಕೆ ಕುಸಿದಿದೆ. ಉಳಿದಂತೆ ನಗರದಲ್ಲಿ ಸೋಮವಾರ 358 ಮಂದಿ ಗುಣಮುಖರಾಗಿದ್ದು, ಸೋಂಕಿತರ ಸಾವಿನ ಬಗ್ಗೆ ವರದಿಯಾಗಿಲ್ಲ. ನಗರದಲ್ಲಿ 3,542 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 29 ಮಂದಿ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಮೂವರು ಐಸಿಯು ಮತ್ತು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದೆಲ್ಲರೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
Published by:Pavana HS
First published: