Coronavirus: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆ ನಾಳೆ ಸಿಎಂ ನೇತೃತ್ವದಲ್ಲಿ ಸಭೆ; ಟಫ್ ರೂಲ್ಸ್​ ಜಾರಿ ಸಾಧ್ಯತೆ

ಈ ಶೈಕ್ಷಣಿಕ ವರ್ಷದಿಂದ 1 ರಿಂದ 9ನೇ ತರಗತಿವರೆಗೆ ಎಲ್ಲರನ್ನೂ ತೇರ್ಗಡೆ ಮಾಡಬೇಕು ಅಂತಾ ಸರ್ಕಾರ ಸೂಚಿಸಿದೆ.  ಪರೀಕ್ಷೆ ಮಾಡದೇ ತೇರ್ಗಡೆ ಮಾಡುವುದರ ಬಗ್ಗೆ ಗೊತ್ತಿಲ್ಲ, ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.

ಸಿಎಂ ಬಿಎಸ್ ಯಡಿಯೂರಪ್ಪ.

ಸಿಎಂ ಬಿಎಸ್ ಯಡಿಯೂರಪ್ಪ.

 • Share this:
  ಬೆಂಗಳೂರು(ಮಾ.28):  ರಾಜ್ಯದಲ್ಲಿ ಕೋವಿಡ್ ಸೊಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಸಿಎಂ ಬಿಎಸ್​ ಯಡಿಯೂರಪ್ಪ ನಾಳೆ ಸಚಿವರು ಹಾಗೂ ವಲಯ ಉಸ್ತುವಾರಿಗಳ ಸಭೆ ಕರೆದಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಸೋಂಕಿನ ಪ್ರಮಾಣವನ್ನು ತಡೆಯುವ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ. ನಾಳೆ ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್​ವೈ ಸಭೆ ನಡೆಸಲಿದ್ದಾರೆ. ಸರ್ಕಾರ ಮುಂದೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಕುರಿತು ಚರ್ಚೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ. ನಾಳೆ‌ಯ ಸಭೆಯಲ್ಲಿ ಮತ್ತಷ್ಟು ಟಫ್ ರೂಲ್ಸ್ ಬಗ್ಗೆ ಅಭಿಪ್ರಾಯ ವ್ಯಕ್ತವಾಗುವ ಸಾಧ್ಯತೆ ಇದೆ. ಸಚಿವರಿಂದ ಅಭಿಪ್ರಾಯ ಪಡೆದು, ಅದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ನಿರ್ಧಾರ ಮಾಡಲಿದ್ದಾರೆ.

  ಈ ಕುರಿತು ಮಾತನಾಡಿರುವ ಆರೋಗ್ಯ ಸಚಿವ  ಡಾ.ಕೆ.ಸುಧಾಕರ್,  ಕೊರೋನಾ ಹೆಚ್ಚಳ ಆಗ್ತಿದೆ.  ನಾಳೆ ಸಿಎಂ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಗೃಹ ಸಚಿವರು, ಕಂದಾಯ ಸಚಿವರು, ಶಿಕ್ಷಣ ಸಚಿವರು ಚರ್ಚೆ ಮಾಡುತ್ತೇವೆ.  ನಾಗ್ಪುರದಲ್ಲಿ ಲಾಕ್ ಡೌನ್ ಮಾಡಿರುವುದನ್ನು ನೋಡಿದ್ದೇವೆ, ಮಹಾರಾಷ್ಟ್ರದಲ್ಲೂ ಲಾಕ್ ಡೌನ್, ಸೀಲ್ ಡೌನ್ ಗಮನಿಸಿದ್ದೇವೆ. ನಾಳೆ ಎಲ್ಲ ವಿಚಾರಗಳ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದರು.

  ರಾಯಚೂರು: ಕೊರೋನಾ ಹೆಚ್ಚಾದ ಹಿನ್ನಲೆ ಅಮರೇಶ್ವರ ಜಾತ್ರೆ ರದ್ದು ಮಾಡಿದ ಜಿಲ್ಲಾಡಳಿತ

  ನಾಲ್ಕು ವಾರಗಳಿಂದ 300 ಕೊರೋನಾ ಕೇಸ್ ಬರ್ತಿತ್ತು, ಈಗ ಮೂರು ಸಾವಿರ ಬರ್ತಿದೆ. ಈಗ ತೆಗೆದುಕೊಂಡಿರುವ ಕ್ರಮಗಳು ಸಾಕಾಗಲ್ಲ. ಗಡಿ ಭಾಗಗಳಲ್ಲಿ ಕಟ್ಟು ನಿಟ್ಟಿನ ಕ್ರಮ, ಬೆಂಗಳೂರಿಗೆ ಬರುವವರ ಬಗ್ಗೆ ತೀಕ್ಷ್ಣವಾಗಿ ಗಮನ ಇಡಬೇಕು.  ಈ ಬಗ್ಗೆ ಗೃಹ ಸಚಿವರ ಜೊತೆ ಚರ್ಚೆ ನಡೆಸಿದ್ದೇನೆ. ನಾಳೆ ಸಿಎಂ ಗಮನಕ್ಕೆ ತಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

  ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದೆ, ಇದನ್ನ ಗಮನಿಸಿದ್ದೇವೆ. ನಮ್ಮ ರಾಜ್ಯದ ಆಸ್ಪತ್ರೆಗಳಲ್ಲಿ ಕ್ರಮ ಕೈಗೊಳ್ಳುತ್ತೇವೆ. ಮುಂದಿನ 6 ರಿಂದ 8 ವಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ತಾಂತ್ರಿಕ ಸಲಹಾ ಸಮಿತಿಯಿಂದಲೂ ವರದಿ ಬಂದಿದೆ. ಗಡಿ ಬಂದ್ ಮಾಡಬಾರದು ಅಂತಾ ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆ ಇದೆ. ಆದ್ರೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

  ರೂಪಾಂತರ ವೈರಸ್ ಕರ್ನಾಟಕದಲ್ಲೂ ಬಂದಿದೆ, ಆದ್ರೆ ಆಫಿಕ್ರಾ ದೇಶದ ವೈರಾಣು ಬಂದಿಲ್ಲ. ತೀವ್ರತೆ ಇರುವ ವೈರಾಣು ಬಂದಿಲ್ಲ, ಆದ್ರೆ ತೀವ್ರವಾಗಿ ಹರಡುವ ವೈರಾಣು ಬಂದಿದೆ ಎಂದರು.

  ಈ ಶೈಕ್ಷಣಿಕ ವರ್ಷದಿಂದ 1 ರಿಂದ 9ನೇ ತರಗತಿವರೆಗೆ ಎಲ್ಲರನ್ನೂ ತೇರ್ಗಡೆ ಮಾಡಬೇಕು ಅಂತಾ ಸರ್ಕಾರ ಸೂಚಿಸಿದೆ.  ಪರೀಕ್ಷೆ ಮಾಡದೇ ತೇರ್ಗಡೆ ಮಾಡುವುದರ ಬಗ್ಗೆ ಗೊತ್ತಿಲ್ಲ, ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿ ಮಾತನಾಡುತ್ತೇನೆ ಎಂದು ಹೇಳಿದರು.

  ಮಹಾರಾಷ್ಟ್ರ ಮಾದರಿಯಲ್ಲಿ ಕಟ್ಡು ನಿಟ್ಟಿನ ಕ್ರಮ ರಾಜ್ಯದಲ್ಲಿ ಜಾರಿ ಮಾಡುವ ವಿಚಾರವಾಗಿ, ಪ್ರತಿಕ್ರಿಯೆ ನೀಡಿದ ಸುಧಾಕರ್, ಮಹಾರಾಷ್ಟ್ರದಲ್ಲಿ ಮಾಡಿರೋ ನಿಯಮಗಳ ಬಗ್ಗೆ ಗಮನಿಸಿದ್ದೇನೆ.  ಇಲ್ಲಿಯೂ ಅದನ್ನು ಮಾಡಬೇಕಾ ಎಂಬುದರ ಬಗ್ಗೆ ನಾಳೆ ಚರ್ಚೆ ಮಾಡಲಾಗುತ್ತದೆ. ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡ್ತೇವೆ.  ಸಿನಿಮಾ ಥಿಯೇಟರ್​ಗಳಿಗೆ ಮಾರ್ಗಸೂಚಿ ಬಗ್ಗೆಯೂ ನಾಳೆ ತೀರ್ಮಾನ ಮಾಡಲಾಗುತ್ತೆ. ಎಲ್ಲಾ ಚಟುವಟಿಕೆಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
  Published by:Latha CG
  First published: