HOME » NEWS » State » CORONAVIRUS IN KARNATAKA 3 TEACHERS TESTED COVID1 POSITIVE IN CHIKMAGALUR AFTER SCHOOLS REOPENS VCTV SCT

ಚಿಕ್ಕಮಗಳೂರಲ್ಲಿ ಮೂವರು ಶಿಕ್ಷಕರಿಗೆ ಕೊರೋನಾ; ವಿದ್ಯಾರ್ಥಿಗಳು ಸೇರಿ ಶಾಲಾ ಸಿಬ್ಬಂದಿಗೆ ಹೆಚ್ಚಿದ ಆತಂಕ

Karnataka Coronavirus Updates: ಜೆಎಂಇ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ತಕ್ಷಣ ಸ್ಕೂಲನ್ನು ಬಂದ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ನಿಡುವಾಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ.

news18-kannada
Updated:January 5, 2021, 8:22 AM IST
ಚಿಕ್ಕಮಗಳೂರಲ್ಲಿ ಮೂವರು ಶಿಕ್ಷಕರಿಗೆ ಕೊರೋನಾ; ವಿದ್ಯಾರ್ಥಿಗಳು ಸೇರಿ ಶಾಲಾ ಸಿಬ್ಬಂದಿಗೆ ಹೆಚ್ಚಿದ ಆತಂಕ
ಸಾಂದರ್ಭಿಕ ಚಿತ್ರ
  • Share this:
ಚಿಕ್ಕಮಗಳೂರು (ಜ. 5): ಜನವರಿ 1ರಿಂದ ಶಾಲಾ ಕಾಲೇಜುಗಳು ಆರಂಭವಾದ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯ ಮೂವರು ಶಿಕ್ಷಕರಿಗೆ ಕೊರೋನಾ ಸೋಂಕು ತಗುಲಿದೆ. ಜಿಲ್ಲೆಯ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಸರ್ಕಾರಿ ಶಾಲೆಯ ಓರ್ವ ಶಿಕ್ಷಕನಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ 7 ದಿನಗಳ ಕಾಲ ಎರಡು ಶಾಲೆಗಳನ್ನು ಬಂದ್ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಕಳಸ ಪಟ್ಟಣದ ಜೆಎಂಇ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಮೂಡಿಗೆರೆ ತಾಲೂಕಿನ ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಓರ್ವ ಶಿಕ್ಷಕರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

ಜೆಎಂಇ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ತಕ್ಷಣ ಸ್ಕೂಲನ್ನು ಬಂದ್ ಮಾಡಲಾಗಿದೆ. ಕೊರೊನಾ ರಿಫೋರ್ಟ್ ಬರುವ ಮುನ್ನವೇ ಶಿಕ್ಷಕರು ಶಾಲೆಗೆ ಬಂದ ಪರಿಣಾಮ ಇದೀಗ ವಿದ್ಯಾರ್ಥಿಗಳು ಸೇರಿದಂತೆ ಸಹ ಶಿಕ್ಷಕರಿಗೂ ಆತಂಕ ಎದುರಾಗಿದೆ. ಶಾಲೆ ಆಡಳಿತ ಮಂಡಳಿ ಯಡವಟ್ಟಿನಿಂದ ಇದೀಗ ಶಾಲೆಯನ್ನು ಬಂದ್ ಮಾಡಲಾಗಿದೆ. ಜೆಎಂಇ ಶಾಲೆಯಲ್ಲಿ 15 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ಅದರಲ್ಲಿ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉಳಿದ 13 ಮಂದಿಗೆ ಕೊರೊನಾ ನೆಗೆಟಿವ್ ಬಂದಿದೆ.

ಇದನ್ನೂ ಓದಿ: Pearl Valley: ಬೆಂಗಳೂರು ಸುತ್ತಲಿನ ಪ್ರವಾಸಿಗರನ್ನು ಸೆಳೆಯುತ್ತಿದೆ ಆನೇಕಲ್​ನ ಪರ್ಲ್ ವ್ಯಾಲಿ

ಇನ್ನು, ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಬ್ಬರು ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು ಓರ್ವ ಶಿಕ್ಷಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶಿಕ್ಷಕರಲ್ಲಿ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಎರಡು ಶಾಲೆಗಳನ್ನು 7 ದಿನಗಳ ಅವಧಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲೆ ಕಾಲೇಜು ಆರಂಭಕ್ಕೆ ಸರ್ಕಾರ ಜ.1ರಿಂದ ಆದೇಶ ನೀಡಿದ್ದು, ಶಾಲೆ ಆರಂಭವಾಗಿ ಎರಡು ದಿನ ಕಳೆಯುವಷ್ಟರಲ್ಲಿ ಜಿಲ್ಲೆಯ ಮೂರು ಮಂದಿ ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮೂಡಿಗೆರೆ ತಾಲೂಕಿನ ನಿಡುವಾಳೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಶಿಕ್ಷಕ ಕೂಡ ಜನವರಿ ಒಂದರಿಂದ ಶಾಲೆಗೆ ಬರುತ್ತಿದ್ದರಿಂದ ಇದೀಗ ವಿದ್ಯಾರ್ಥಿಗಳಿಗೆ ಆತಂಕ ಎದುರಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರೋ ಡಿಡಿಪಿಐ ಮಲ್ಲೇಶಪ್ಪ ಈಗಾಗಲೇ ಎರಡು ಶಾಲೆಗಳಲ್ಲೂ ಸೋಂಕಿತರ ಸಂಪರ್ಕ ಹೊಂದಿದ್ದ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರಿಗೆ ಕೊರೊನಾ ಟೆಸ್ಟ್ ಮಾಡಿಸಲು ನಮ್ಮ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದೇನೆ. ಅಲ್ಲದೆ, ಎರಡು ಶಾಲೆಗೂ ಮತ್ತೊಮ್ಮೆ ಸ್ಯಾನಿಟೈಸ್ ಮಾಡಲು ಸೂಚಿಸಿದ್ದೇನೆ. ಜಿಲ್ಲೆಯ ಕಳಸ ಪಟ್ಟಣದ ಜೆಎಂಇ ಶಾಲೆಯ ಇಬ್ಬರು ಶಿಕ್ಷಕರು ಹಾಗೂ ಮೂಡಿಗೆರೆ ತಾಲೂಕಿನ ನಿಡುವಾಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಓರ್ವ ಶಿಕ್ಷಕರಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ. ಮುಂಜಾಗೃತಕ್ರಮವಾಗಿ ಎರಡು ಶಾಲೆಗಳಲ್ಲಿ 7ದಿನಗಳ ಮಟ್ಟಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Published by: Sushma Chakre
First published: January 5, 2021, 8:22 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories