ರಾಮನಗರ(ಏ.18): ರಾಜ್ಯಾದ್ಯಂತ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಮನಗರ ಜಿಲ್ಲೆಯಲ್ಲಿಯೂ ಸಹ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ. ಈ ಹಿನ್ನೆಲೆ ರಾಮನಗರ ಜಿಲ್ಲಾಧಿಕಾರಿ ರಾಕೇಶ್ ಕುಮಾರ್, ಎಸ್ಪಿ ಎಸ್.ಗಿರೀಶ್ ಚನ್ನಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು. ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು ಅಧಿಕಾರಿಗಳು ತಾಲೂಕು ಕೇಂದ್ರದ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚಿನ ನಿಗಾವಹಿಸಬೇಕೆಂದು ಆದೇಶಿಸಿದರು. ಜನರು ಮಾಸ್ಕ್ ಕಡ್ಡಾಯವಾಗಿ ಹಾಕಬೇಕು, ಇಲ್ಲವಾದರೆ ಕೇಸ್ ಹಾಕಲು ಸೂಚಿಸಿದರು.
ಇನ್ನು ಮದುವೆ ಸಮಾರಂಭಗಳಲ್ಲಿ ಕೊರೋನಾ ನಿಯಮ ಪಾಲಿಸಬೇಕು, ಇಲ್ಲವಾದರೆ ಕಲ್ಯಾಣಮಂಟಪಗಳನ್ನ ಸೀಜ್ ಮಾಡಲು ಸೂಚಿಸಿದರು. ಇದರ ಜೊತೆಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಹ ಇತರೆ ಇಲಾಖೆಯ ಅಧಿಕಾರಿಗಳ ಜೊತೆಗೆ ಸಹಕರಿಸಿಕೊಂಡು ಜಿಲ್ಲೆಯಲ್ಲಿ ಕೊರೋನಾ ತಡೆಯಲು ಮುಂದಾಗಬೇಕೆಂದು ಮನವಿ ಮಾಡಿದರು. ಇದರ ಜೊತೆಗೆ ರಾಮನಗರ, ಚನ್ನಪಟ್ಟಣದ ಮ್ಯಾಂಗೋ ಮಾರ್ಕೆಟ್ ನಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಲಾಗುತ್ತದೆ ಎಂದು ತಿಳಿಸಿದರು.
ಸಭೆಯ ನಂತರ ಚನ್ನಪಟ್ಟಣದ ನಗರದಲ್ಲಿ ಎಸ್ಪಿ ಹಾಗೂ ಡಿಸಿ ಸಾರ್ವಜನಿಕರಿಗೆ ಮಾಸ್ಕ್ ನೀಡುವ ಮೂಲಕ ಕೊರೋನಾ ಬಗ್ಗೆ ಅರಿವು ಮೂಡಿಸಿದರು. ಕಡ್ಡಾಯವಾಗಿ ಕೊರೋನಾ ನಿಯಮಗಳನ್ನ ಪಾಲಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.
CoronaVirus: ರೈಲು ನಿಲ್ದಾಣ-ಪ್ರಯಾಣದ ವೇಳೆಯೂ ಮಾಸ್ಕ್ ಕಡ್ಡಾಯ; ನಿಯಮ ಮೀರಿದರೆ 500 ರೂ. ದಂಡ
ಜನರು ನಿಯಮ ಪಾಲಿಸದಿದ್ದರೆ ಕೇಸ್ ದಾಖಲು, ಲೈಸೆನ್ಸ್ ರದ್ದು
ಕೊರೋನಾ ಎರಡನೇ ಅಲೆ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ರಾಮನಗರ ಜಿಲ್ಲೆಯಲ್ಲಿ ಅಧಿಕಾರಿಗಳ ವರ್ಗ ಅಲರ್ಟ್ ಆಗಿದೆ. ಚನ್ನಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮತ್ತು ಎಸ್ಪಿ ಗಿರೀಶ್ ಸ್ಪಷ್ಟವಾಗಿ ಆದೇಶ ಮಾಡಿದ್ದಾರೆ.
ಕೊರೋನಾ ನಿಯಮವನ್ನ ಎಲ್ಲರೂ ತಪ್ಪದೇ ಪಾಲಿಸಬೇಕು. ಮದುವೆ ಸಮಾರಂಭಗಳು ನಡೆಯುವ ಸಂದರ್ಭದಲ್ಲಿ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನ ಪಾಲಿಸಬೇಕು. ಇಲ್ಲವಾದರೆ ಕಾರ್ಯಕ್ರಮದ ಆಯೋಜಕರ ವಿರುದ್ಧ ಕೇಸ್ ದಾಖಲು ಮಾಡಲಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು. ಯಾವುದೇ ಕಾರ್ಯವಿದ್ದರೂ 50 ಜನರಿಗಿಂತ ಹೆಚ್ಚು ಇರಬಾರದು. ಒಂದು ವೇಳೆ ನಿಯಮಗಳನ್ನ ಗಾಳಿಗೆ ತೂರಿ ಕಾರ್ಯಕ್ರಮ ಮಾಡಿದರೆ ಕಠಿಣ ಕಾನೂನು ಕ್ರಮ ಗ್ಯಾರಂಟಿ ಎಂದು ತಿಳಿಸಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ