B S Yediyurappa: ಮತ್ತೆ ಯಡಿಯೂರಪ್ಪಗೆ ಸಂಕಷ್ಟ; ಏನಿದು ಭ್ರಷ್ಟಾಚಾರದ ಪ್ರಕರಣ?

ಯಡಿಯೂರಪ್ಪ ಮತ್ತು ಆರೋಪ ಹೊತ್ತ ಇತರರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ಹಾಗೂ ನವೆಂಬರ್ 2ರ ಒಳಗೆ ವರದಿ ನೀಡುವಂತೆ ಲೋಕಾಯುಕ್ತ ಪೋಲಿಸರಿಗೆ ವಿಶೇಷ ಕೋರ್ಟ್​​ ಕಟ್ಟು ನಿಟ್ಟಿನ ಆದೇಶ ನೀಡಿದೆ.

ಬಿ. ಎಸ್.ಯಡಿಯೂರಪ್ಪ

ಬಿ. ಎಸ್.ಯಡಿಯೂರಪ್ಪ

  • Share this:
ಬೆಂಗಳೂರು (ಸೆ. 14): ಮತ್ತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ (B.S Yediyurappa) ಸಂಕಷ್ಟ ಎದುರಾಗಿದೆ. ಬಿಎಸ್​ವೈ ಪುತ್ರ ಬಿ.ವೈ ವಿಜಯೇಂದ್ರ (Vijayendra) ಹಾಗೂ ಇತರರಿಗೆ ಮತ್ತೆ ಕಂಟಕ ಎದುರಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ (Chief Minister) ಆಗಿದ್ದಾಗ ನಡೆಸಿದ್ದಾರೆ ಎಂಬ ಭ್ರಷ್ಟಾಚಾರ (Corruption) ಆರೋಪ ಪ್ರಕರಣಕ್ಕೆ ಈಗ ನ್ಯಾಯಾಲಯ ಮರುಜೀವ ನೀಡಿದೆ. 

ಅಧಿಕಾರ ದುರ್ಬಳಕೆ ಆರೋಪ

ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿಡಿಎ ಅರ್ಥಾತ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಾಂತರ ರೂಪಾಯಿ ನಗದು ಪಡೆದಿದ್ದಾರೆ. ಜೊತೆಗೆ ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರ್ ಟಿಐ ಕಾರ್ಯಕರ್ತ ಟಿ.ಜೆ ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು.

Former CM BS Yediyurappa barrage at H D Kumaraswamy, D K Shivakumar
ಬಿ ಎಸ್ ಯಡಿಯೂರಪ್ಪ


ತನಿಖೆಗೆ ಆಗ್ರಹ, ವರದಿ ನೀಡಲು ಡೆಡ್​ಲೈನ್​

ಈ ದೂರಿನ ಬಗ್ಗೆ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಜಯಂತ್ ಕುಮಾರ್ ಅವರು ಯಡಿಯೂರಪ್ಪ ಮತ್ತು ಆರೋಪ ಹೊತ್ತ ಇತರರ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಿ ಹಾಗೂ ನವೆಂಬರ್ 2 ರ ಒಳಗೆ ವರದಿ ನೀಡುವಂತೆ ಲೋಕಾಯುಕ್ತ ಪೋಲಿಸರಿಗೆ ಕಟ್ಟು ನಿಟ್ಟಿನ ಆದೇಶ ನೀಡಿದ್ದಾರೆ.

ಇದನ್ನೂ ಓದಿ: Girls Missing: ಒಂದೇ ಶಾಲೆಯ ಮೂವರು ಬಾಲಕಿಯರು ನಾಪತ್ತೆ; ಪತ್ರ ಬರೆದಿಟ್ಟು ಮನೆ ಬಿಟ್ಟ ಮಕ್ಕಳು

ಹಳೆಯ ಭ್ರಷ್ಟಾಚಾರ ಕೇಸ್​ಗೆ ಮರುಜೀವ

ಇದರಿಂದ ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಶಶಿಧರ ಮರಡಿ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ವಿರುಪಾಕ್ಷಪ್ಪ, ಕೆ.ರವಿ ಅವರ ವಿರುದ್ಧ ಎಫ್​ಐಆರ್ ದಾಖಲಾಗಲಿದ್ದು, ಇವರಿಗೆಲ್ಲಾ ಸಂಕಷ್ಟ ಎದುರಾಗಲಿದೆ. ಈ ಮೂಲಕ ಹಳೆಯ ಭ್ರಷ್ಟಾಚಾರ ಕೇಸ್ ಗೆ ಈಗ ಮರು ಜೀವ ಬಂದಿದೆ. ಇದು ಯಡಿಯೂರಪ್ಪ ಮತ್ತು ಇತರರ ಕೊರಳಿಗೆ ಯಾವ ರೀತಿ ಸುತ್ತಿಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.

ದೂರಿನಲ್ಲಿರುವುದೇನು?


 ಎಂಎಸ್ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪನಿ ಪ್ರೈವೇಟ್ ಲಿಮಿಟೆಡ್ ಪರವಾಗಿ ಬಿಡಿಎಯಿಂದ ವರ್ಕ್ ಆರ್ಡರ್ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಯಡಿಯೂರಪ್ಪ ಪರವಾಗಿ ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್ 12 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಕಾಶ್ ವಸೂಲಿ ಮಾಡಿ ಮಗನ ಮೂಲಕ ಯಡಿಯೂರಪ್ಪಗೆ ಪಾವತಿಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ, ವಿಜಯೇಂದ್ರ, ಶಶಿದರ್ ಮರಡಿ ಮತ್ತು ಸಂಜಯ್ ಶ್ರೀಗಳು ಶೆಲ್ ಕಂಪನಿಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅರ್ಜಿದಾರರು ದೂರಿನಲ್ಲಿ ಆರೋಪಿಸಿದ್ದಾರೆ.


ಇದನ್ನೂ ಓದಿ: Basavaraj Bommai: ಶೀಘ್ರದಲ್ಲೇ ಕನ್ನಡ ಕಡ್ಡಾಯ ಕಾನೂನು ಜಾರಿ; ನಮ್ಮ ಭಾಷೆ ರಕ್ಷಣೆಗೆ ನಾವು ಬದ್ಧ ಎಂದ ಸಿಎಂ ಬೊಮ್ಮಾಯಿ

ಏನಿದು ಪ್ರಕರಣ


ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ, ಮೊಮ್ಮಗ ಶಶಿದರ್ ಮರಡಿ, ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಹಾಲಿ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್, ಕೆ ರವಿ ಮತ್ತು ವಿರೂಪಾಕ್ಷಪ್ಪ ವಿರುದ್ಧ ಕೋರ್ಟ್​ಗೆ ದೂರು ನೀಡಲಾಗಿತ್ತು. ಈ ಸಂಬಂಧದ ಅರ್ಜಿಯನ್ನು ಜುಲೈ 8, 2021 ರಂದು ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯವು ದೂರು ವಜಾಗೊಳಿಸಿತ್ತು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿದಾರರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿದ್ದರು.. ಇಂದು ಈ ಬಗ್ಗೆ ತೀರ್ಪು ಪ್ರಕಟಿಸಿದ್ದಾರೆ.

Published by:ಪಾವನ ಎಚ್ ಎಸ್
First published: