Holiday: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಬ್ಯಾಂಕ್, ಸರ್ಕಾರಿ ಕಚೇರಿಗಳಿಗೆ ರಜೆ  ಘೋಷಣೆ

ಸೋಮವಾರ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆ ಇರಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಸೋಮವಾರ (ಜೂನ್ 13) ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಗಳು (Legislative Council Election) ನಡೆಯಲಿವೆ. ಈ ಹಿನ್ನೆಲೆ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ನಾಳೆ ವಿಶೇಷ ಸಾಂದರ್ಭಿಕ ರಜೆಯನ್ನು (Special Holiday) ಘೋಷಣೆ ಮಾಡಲಾಗಿದೆ. ಶಿಕ್ಷಕರು ಮತ್ತು ಪದವೀಧರರು ಈ ಚುನಾವಣೆಯಲ್ಲಿ ಮತದಾನ (Voting) ಮಾಡಲಿದ್ದಾರೆ. ವಿಧಾನ ಪರಿಷತ್ ನ ಮತದಾನ ಕ್ಷೇತ್ರಗಳಲ್ಲಿನ ಸರಕಾರಿ, ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳು ಸೇರಿದಂತೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ (Education Institution) ರಜೆ ಘೋಷಣೆ ಮಾಡಲಾಗಿದೆ.

ರಾಜ್ಯ ಮತ್ತು ಕೇಂದ್ರ ಸರ್ಕಾರಿ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು, ಇನ್ನುಳಿದ ಕೈಗಾರಿಕ ಸಂಸ್ಥೆಗಲು ಹಾಗೂ ಸಹಕಾರಿ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಆಧಾರದ ಮೇಲೆ ಕೆಲಸ ಮಾಡುವ ಪದವೀಧರು ಮತ್ತು ಶಿಕ್ಷಕರಿಗೆ ಮತದಾನ ಮಾಡಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಾಂದರ್ಭಿಕ ರಜೆಯನ್ನು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗ್ಗೆ 8 ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಈ ಹಿಂದೆ ನಾಲ್ಕು ಗಂಟೆವರೆಗೆ ಮತದಾನ ನಡೆಯುತ್ತಿತ್ತು. ಅಭ್ಯರ್ಥಿಗಳ ಮನವಿ ಮೇರೆ ಮತದಾನದ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಾಗಿದೆ.

ಇದನ್ನೂ ಓದಿ:  Council Election: ಪ್ರಭಾಕರ್ ಕೋರೆ ಭೇಟಿಯಾದ ಸಿಎಂ ಬೊಮ್ಮಾಯಿ; ಯಾರಾದ್ರೂ ಬಿ ಟೀಂ ಆಗಲಿ, ನಾವ್ ಮಾತ್ರ ಎ ಟೀಂ

ಯಾವ ಜಿಲ್ಲೆಗಳಲ್ಲಿ ಮತದಾನ ಮತ್ತು  ರಜೆ ಘೋಷಣೆ?

*ಕರ್ನಾಟಕ ವಾಯುವ್ಯ ಪದವೀಧರರ ಕ್ಷೇತ್ರ: ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ

*ಕರ್ನಾಟಕ ದಕ್ಷಿಣ ಪದವೀಧರ ಕ್ಷೇತ್ರ: ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ

*ಕರ್ನಾಟಕ ವಾಯುವ್ಯ ಶಿಕ್ಷಕರ ಕ್ಷೇತ್ರ: ವಿಜಯಪುರ, ಬಾಗಲಕೋಟೆ ಮತ್ತು ಬೆಳಗಾವಿ

*ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರ: ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ

ಸೋಮವಾರ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರಜೆ ಇರಲಿದೆ.

ಬೆಳಗಾವಿ ಮತಗಳು ನಿರ್ಣಾಯಕ

ವಾಯವ್ಯ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಕೆಎಲ್ಇ ಸಂಸ್ಥೆಯ ಮತಗಳೇ ನಿರ್ಣಾಯವಾಗಿವೆ. ಮೂರು ಜಿಲ್ಲೆಯಲ್ಲಿ 95 ಶಿಕ್ಷಣ ಸಂಸ್ಥೆ ಹೊಂದಿರುವ ಕೆಎಲ್ಇ ಸಂಸ್ಥೆಯು ಒಟ್ಟು 3 ಸಾವಿರ ಶಿಕ್ಷಕ ಮತಗಳನ್ನು (Vote) ಹೊಂದಿದೆ. ಈ ಹಿನ್ನೆಲೆ ಪ್ರಭಾಕರ್ ಕೋರೆ ಅವರನ್ನು ಭೇಟಿಯಾಗಿ ಬೆಂಬಲ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ವೇಳೆ ಮುಖ್ಯಮಂತ್ರಿಗಳಿಗೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Ex DCM Laxman Savadi) ಸಾಥ್ ನೀಡಿದ್ದರು.

ವಿಜಯಪುರದ ಬಿಎಲ್ ಡಿಇ ಮತ್ತು ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘದ  ಮತಗಳು ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಈ ಮೂರು ಶಿಕ್ಷಣ ಸಂಸ್ಥೆಗಳ ಬೆಂಬಲಿತ ಅಭ್ಯರ್ಥಿ ಚುನಾವಣೆಯಲ್ಲಿ ಗೆಲ್ಲುತ್ತಾರೆ.

ಇದನ್ನೂ ಓದಿ:  Mysuru Yoga Politics: ಮೈಲೇಜ್ ಪಾಲಿಟಿಕ್ಸ್;  ಪ್ರತಾಪ್ ಸಿಂಹ, ರಾಮದಾಸ್ ನಡುವೆ ಪೈಪೋಟಿ

ಯಾರು ಯಾವ ಪಕ್ಷಕ್ಕೆ ಬೆಂಬಲ

ಕೆಎಲ್ಇ ಸಂಸ್ಥೆಯ ಕಾರ್ಯಧ್ಯಕ್ಷರಾಗಿರುವ ಪ್ರಭಾಕರ್ ಕೋರೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. ಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ವೀರಣ್ಣ ಚರಂತಿಮಠ ಅವರು ಬಿಜೆಪಿಯ ಶಾಸಕರು. ಇನ್ನು ಬಿಎಲ್ ಡಿಇ ಮುಖ್ಯಸ್ಥ ಎಂಬಿ ಪಾಟೀಲ್ ಕಾಂಗ್ರೆಸ್ ಶಾಸಕರಾಗಿದ್ದಾರೆ.

ಪಕ್ಷೇತರ ಅಭ್ಯರ್ಥಿಗಳು

ವಾಯವ್ಯ ಶಿಕ್ಷಕ ಕ್ಷೇತ್ರದ ಚುನಾವಣಾ ಕಣದಲ್ಲಿ ಅರುಣ ಶಹಪುರ (ಬಿಜೆಪಿ), ಪ್ರಕಾಶ್ ಹುಕ್ಕೇರಿ (ಕಾಂಗ್ರೆಸ್) ಮತ್ತು ಚಂದ್ರಶೇಖರ್ ಲೋಣ (ಜೆಡಿಎಸ್) ಇದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ನಿಂಗಪ್ಪ ಬನ್ನೂರು,. ಶ್ರೀಕಾಂತ್ ಪಾಟೀಲ್, ಬಸಪ್ಪ ಮನಿಗಾರ, ಜಯಪಾಲ್ ದೇಸಾಯಿ, ಅಪ್ಪಾಸಾಹೇಬ್ ಕರುಣೆ, ಚಂದ್ರಶೇಖರ್ ಗಡಸಿ, ಸಂಗಮೇಶ್ ಚಿಕ್ಕನರಗುಂದ ಮತ್ತು ಶ್ರೇಣೀಕ್ ಜಾಂಗಟೆ ಕಣದಲ್ಲಿದ್ದಾರೆ.
Published by:Mahmadrafik K
First published: