• ಹೋಂ
 • »
 • ನ್ಯೂಸ್
 • »
 • ರಾಜ್ಯ
 • »
 • Vishnuvardhan Smaraka: 'ಯಜಮಾನ'ನ ಸ್ಮಾರಕ ಉದ್ಘಾಟನೆಗೆ ಕೌಂಟ್​ಡೌನ್; ಸರ್ಕಾರದ ವಿರುದ್ಧ ವಿಷ್ಣು ಅಭಿಮಾನಿಗಳ ಆಕ್ರೋಶ

Vishnuvardhan Smaraka: 'ಯಜಮಾನ'ನ ಸ್ಮಾರಕ ಉದ್ಘಾಟನೆಗೆ ಕೌಂಟ್​ಡೌನ್; ಸರ್ಕಾರದ ವಿರುದ್ಧ ವಿಷ್ಣು ಅಭಿಮಾನಿಗಳ ಆಕ್ರೋಶ

ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ

ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ

ಮೈಸೂರಿನಲ್ಲಿ ದಿವಂಗತ ನಟ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಸಾವಿರಾರು ಅಭಿಮಾನಿಗಳು ಬೃಹತ್ ಮೆರವಣಿಗೆ ಮೂಲಕ ಪ್ರಯಾಣ ಬೆಳೆಸಿದರು.

 • News18 Kannada
 • 2-MIN READ
 • Last Updated :
 • Bangalore [Bangalore], India
 • Share this:

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ (Vishnuvardhan) ಅಭಿಮಾನಿಗಳಿಗೆ ಸಿಹಿ ಸುದ್ದಿ. ಬರೋಬ್ಬರಿ 13 ವರ್ಷಗಳ ನಂತರ ಕೊನೆಗೂ ವಿಷ್ಣುದಾದ ಸ್ಮಾರಕ (Vishnuvardhan Memorial) ಇಂದು ಲೋಕಾರ್ಪಣೆಯಾಗುತ್ತಿದೆ. 2009ರಲ್ಲಿ ವಿಷ್ಣುವರ್ಧನ್ ನಿಧನರಾದ ನಂತರ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ (Bengaluru Abhiman Studio) ಸ್ಮಾರಕ ಮಾಡುವಂತೆ ಅಭಿಮಾನಿಗಳು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರೆ ವಿಷ್ಣು ಕುಟುಂಬ ಮೈಸೂರಿನಲ್ಲಿ (Mysuru) ಸ್ಮಾರಕ ನಿರ್ಮಾಣ ಮಾಡುವಂತೆ ಒತ್ತಾಯಿಸಿತ್ತು. ಇದೀಗ ಮೈಸೂರಿನಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai), ಲೋಕಾರ್ಪಣೆ ಮಾಡುತ್ತಿದ್ದಾರೆ. ಸುಮಾರು 5 ಎಕರೆ ಜಾಗದಲ್ಲಿ 11 ಕೋಟಿ ರೂಪಾಯಿ ವೆಚ್ಚದಲ್ಲಿ ಸಿಂಹ ಸ್ಮಾರಕ ನಿರ್ಮಾಣವಾಗಿದೆ. ಸ್ಮಾರಕದ ಬಳಿ ದೀಪೋತ್ಸವ ಮತ್ತು ಕುಂಭೋತ್ಸವ ನಡೆಯಲಿದೆ.


ಬೆಂಗಳೂರಿನಿಂದ ಹೊರಟ ಅಭಿಮಾನಿಗಳು


ಇಂದು ಮೈಸೂರಿನಲ್ಲಿ ದಿವಂಗತ ನಟ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಸಾವಿರಾರು ಅಭಿಮಾನಿಗಳು ಬೃಹತ್ ಮೆರವಣಿಗೆ ಮೂಲಕ ಪ್ರಯಾಣ ಬೆಳೆಸಿದರು. ಅಭಿಮಾನ್ ಸ್ಟೂಡಿಯೋದಲ್ಲಿ ವಿಷ್ಣು ಸಮಾಧಿಗೆ ನಮನ ಸಲ್ಲಿಸಿದ ಬಳಿಕ ಮೈಸೂರಿನತ್ತ ಸುಮಾರು ಒಂದು ಸಾವಿರಕ್ಕೂ ಅಧಿಕ ವಾಹನಗಳಲ್ಲಿ ಸಾವಿರಾರು ಡಾ. ವಿಷ್ಣು ಅಭಿಮಾನಿಗಳು ತೆರಳಿದ್ದಾರೆ.


ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ


ಇದನ್ನೂ ಓದಿ: Vishnuvardhan: ವಿಷ್ಣು ಸ್ಮಾರಕದಲ್ಲಿ ಏನೇನಿದೆ ಗೊತ್ತಾ? ವಿಶೇಷತೆಗಳೇನು?


ಚಲನಚಿತ್ರ ವಾಣಿಜ್ಯ ಮಂಡಳಿ, ಸರ್ಕಾರದ ವಿರುದ್ಧ ವಿಷ್ಣು ಅಭಿಮಾನಿಗಳ ಆಕ್ರೋಶ


ಇದಕ್ಕೂ ಮುನ್ನ ರಾಜ್ಯ ಸರ್ಕಾರದ ವಿರುದ್ಧ ವಿಷ್ಣು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಮಾರಕ ಉದ್ಘಾಟನೆಯನ್ನು ರಾಜ್ಯ ಸರ್ಕಾರ ಕಾಟಚಾರಕ್ಕೆ ಮಾಡುತ್ತಿದೆ. ಬೇರೆ ಕಾರ್ಯಕ್ರಮಗಳಿಗೆ ರಾಜ್ಯದಾದ್ಯಂತ ಹೆಚ್ಚಿನ ಪ್ರಚಾರ ಮಾಡುವ ಸರ್ಕಾರ ಈ ವಿಚಾರದಲ್ಲಿ ಮಾತ್ರ ನಿರ್ಲಕ್ಷ್ಯ ಮಾಡುತ್ತಿದೆ. ಕೇವಲ ಮೈಸೂರು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ಮುಗಿಸಿ ಸುಮ್ಮನಾಗುತ್ತಿದ್ದಾರೆ. ಸರ್ಕಾರ, ಚಲನಚಿತ್ರ ಮಂಡಳಿ, ಕನ್ನಡ ನಟರು ಯಾರು ಕೂಡ ಈ ಬಗ್ಗೆ ಸರಿಯಾದ ಗಮನ ಹರಿಸಿಲ್ಲ.
ರಾಜ್ಯ ಸರ್ಕಾರ ಇತರೆ ಕಾರ್ಯಕ್ರಮಗಳಿಗೆ ಖಾಸಗಿ ಜೆಟ್ ಮೂಲಕ ಬೇರೆ ಭಾಷೆಗಳ ನಟರನ್ನು ಕರೆತಂದು ಅದ್ದೂರಿ ಕಾರ್ಯಕ್ರಮ ಮಾಡುತ್ತಾರೆ. ವಿಷ್ಣುವರ್ಧನ್ ವಿಚಾರದಲ್ಲಿ ಮಾತ್ರ ಯಾಕಿಷ್ಟು ನಿರ್ಲಕ್ಷ್ಯ? 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ವಿಷ್ಣುವರ್ಧನ್ ಅವರಿಗೆ ಈ ರೀತಿ ಮಾಡೋದು ಸರಿಯಲ್ಲ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ, ಸರ್ಕಾರದ ವಿರುದ್ಧ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ.


ಸಾಹಸ ಸಿಂಹ ವಿಷ್ಣುವರ್ಧನ್ ಅಭಿಮಾನಿ


10 ಸಾವಿರಕ್ಕೂ ಹೆಚ್ಚು ಅಭಿಮಾನಿಗಳು ಮೆರಣಿಗೆಯಲ್ಲಿ ಭಾಗಿ


ಇನ್ನು, ವಿಷ್ಣು ಸ್ಮಾರಕ ಉದ್ಘಾಟನೆ ಕುರಿತಂತೆ ಮಾತನಾಡಿರುವ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್, 10 ವರ್ಷಗಳ ಅಭಿಮಾನಿಗಳ ಕನಸು ಈ ದಿನ ನನಸಾಗುತ್ತಿದೆ. ಒಂದು ಸಾವಿರ ವಾಹನಗಳಲ್ಲಿ ಮೈಸೂರಿನ ಸ್ಮಾರಕ ಉದ್ಘಾಟನೆಗೆ ತೆರಳುತ್ತಿದ್ದೇವೆ. ಇದರ ದಾರಿ ಉದ್ದಕ್ಕೂ ಅಭಿಮಾನಿಗಳು ಸೇರ್ಪಡೆಯಾಗುತ್ತಾರೆ. ಮೈಸೂರಿನಲ್ಲಿ ಕಲಾತಂಡಗಳ ಜೊತೆಗೆ ಮೆರವಣಿಗೆ ಮಾಡಲಾಗುತ್ತೆ. ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಮೆರವಣಿಗೆಯಲ್ಲಿ ಭಾಗಿಯಾಗುತ್ತಾರೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: Mandeep Roy Passes Away: ನಟ ಮನ್​ದೀಪ್ ರಾಯ್ ಇನ್ನಿಲ್ಲ


ಸಾಹಸ ಸಿಂಹ ವಿಷ್ಣುವರ್ಧನ್ ಅವರ 8 ಅಡಿ ಸ್ಮಾರಕ ಕೂಡ ಸ್ಥಾಪನೆ ಆಗಿದೆ. ವಿಷ್ಣುವರ್ಧನ್ ಅವರ 600 ಫೋಟೋಗಳ ಗ್ಯಾಲರಿ ಕೂಡ ಇಲ್ಲಿದೆ. ವಿಷ್ಣುವರ್ಧನ್ ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಆಗಿದ್ದು, ಆಡಿಟೋರಿಯಂ ಕೂಡ ಇಲ್ಲಿ ನಿರ್ಮಾಣ ಮಾಡಲಾಗಿದೆ. ವಿಷ್ಣುವರ್ಧನ್ ಅಭಿಮಾನಿಗಳು ವಿಷ್ಣು ಸ್ಮಾರಕ ಲೋಕಾರ್ಪಣೆಯನ್ನ ದೊಡ್ಡ ಹಬ್ಬದಂತೆ ಆಚರಿಸುತ್ತಿದ್ದಾರೆ.

Published by:Sumanth SN
First published: