Crime News| ಕರ್ನಾಟಕದಲ್ಲಿ ಖೋಟಾ ನೋಟು ಚಲಾವಣೆ ಪ್ರಕರಣ; ಪ್ರಮುಖ ಆರೋಪಿ ಬಂಧನ
ಆರೋಪಿ ಶರೀಫುಲ್ಲಾನನ್ನು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬುಪುರದಲ್ಲಿ ಬಂಧಿಸಲಾಗಿದೆ. ಬಾಂಗ್ಲಾದೇಶ ಮೂಲದ ವ್ಯಕ್ತಿಗಳಿಂದ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಆರೋಪಿ, ಕರ್ನಾಟಕದಲ್ಲಿ ಆ ಖೋಟಾ ನೋಟು ಚಲಾವಣೆಯ ಜವಾಬ್ದಾರಿ ವಹಿಸಿಕೊಂಡಿದ್ದ.
ಬೆಂಗಳೂರು (ಜೂನ್ 20); ಕರ್ನಾಟಕದಲ್ಲಿ ಖೋಟಾ ನೋಟುಗಳ ಚಲಾವಣೆಯಲ್ಲಿ ತೊಡಗಿದ್ದ ಪ್ರಮುಖ ಆರೋಪಿ ಪಶ್ಚಿಮ ಬಂಗಾಳ ಮೂಲದ ಶರೀಫುಲ್ಲಾ ಇಸ್ಲಾಂ ಎಂಬ ವ್ಯಕ್ತಿಯನ್ನು ಎನ್ಐಎ (National Investigation Agency) ಪೊಲೀಸರು ಇಂದು ಬಂಧಿಸಿದ್ದಾರೆ. ನಕಲಿ ನೋಟುಗಳ ಚಲಾವಣೆ ಪ್ರಕರಣದಲ್ಲಿ ಹಲವು ದಿನಗಳಿಂದ ಪೊಲೀಸರು ಈತನಿಗಾಗಿ ಬಲೆ ಬೀಸಿದ್ದರು. ಆದರೆ, ಆರೋಪಿ ಶರೀಫುಲ್ಲಾ ಪಶ್ಚಿಮ ಬಂಗಾಳದಲ್ಲಿ ತಲೆ ಮರೆಸಿಕೊಂಡಿದ್ದ. ಕೊನೆಗೂ ಇಂದು ಖಚಿತ ಮಾಹಿತಿ ಮೇಲೆ ದಾಳಿ ನಡೆಸಿರುವ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿ ಶರೀಫುಲ್ಲಾನನ್ನು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಬಾಬುಪುರದಲ್ಲಿ ಬಂಧಿಸಲಾಗಿದೆ. ಬಾಂಗ್ಲಾದೇಶ ಮೂಲದ ವ್ಯಕ್ತಿಗಳಿಂದ ನಕಲಿ ಭಾರತೀಯ ನೋಟು ಪಡೆಯುತ್ತಿದ್ದ ಆರೋಪಿ, ಕರ್ನಾಟಕದಲ್ಲಿ ಆ ಖೋಟಾ ನೋಟು ಚಲಾವಣೆಯ ಜವಾಬ್ದಾರಿ ವಹಿಸಿಕೊಂಡಿದ್ದ. 2018ರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಈತನ ವಿರುದ್ಧ ಮೊದಲ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಪೊಲೀಸರು ಈತನ ಬೆನ್ನುಬಿದ್ದದ್ದರು.
ಅಲ್ಲದೆ, ಆಗಲೇ ಚಿಕ್ಕೋಡಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿ 82 ಸಾವಿರ ರೂ. ಮೌಲ್ಯದ ಖೋಟಾ ನೋಟುಗಳನ್ನು ಜಪ್ತಿ ಮಾಡಿದ್ದರು. ನಂತರ ಎನ್ಐಎ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಅಲ್ಲದೆ ಪ್ರಕರಣದ ಐವರು ಆರೋಪಿಗಳಿಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯ 6 ವರ್ಷ ಸಜೆ ವಿಧಿಸಿತ್ತು.
ಆದರೆ, ಪ್ರಮುಖ ಆರೋಪಿ ಶರೀಫುಲ್ಲಾ ತಲೆ ಮರೆಸಿಕೊಂಡಿದ್ದ. ಸದ್ಯ ಆರೋಪಿ ಶರೀಫುಲ್ಲಾ ಇಸ್ಲಾಂ ಬಂಧನವಾಗಿದೆ. ಬಾಂಗ್ಲಾ ಮೂಲದ ಮತ್ತೊಬ್ಬ ಆರೋಪಿಗಾಗಿ ಶೋಧ ಮುಂದುವರೆದಿದೆ.
ನ್ಯೂಸ್18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್ ನಿಯಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್ಡೌನ್ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:MAshok Kumar
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ