News18 India World Cup 2019

ನೀತಿ ಸಂಹಿತೆ ಉಲ್ಲಂಘನೆ ಆರೋಪ; ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ

Seema.R | news18
Updated:October 12, 2018, 5:39 PM IST
ನೀತಿ ಸಂಹಿತೆ ಉಲ್ಲಂಘನೆ ಆರೋಪ; ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿ
Seema.R | news18
Updated: October 12, 2018, 5:39 PM IST
ಮಂಜುನಾಥ್​, ನ್ಯೂಸ್​ 18 ಕನ್ನಡ

ಬೆಂಗಳೂರು (ಅ.12): 2013ರ ವಿಧಾನಸಭಾ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಜಾಮೀನು ರಹಿತ ವಾರೆಂಟ್​ ಜಾರಿಮಾಡಿ ನ್ಯಾಯಾಲಯ ಆದೇಶ ನೀಡಿದೆ.

2013ರಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಹೆಬ್ಬಾಳ್ಕರ್​ ಕಾಲವಾಕಾಶ ಮುಗಿದಿದ್ದರೂ ಪ್ರಚಾರ ನಡೆಸಿದ ಆರೋಪವನ್ನು ಹೊಂದಿದ್ದರು. ಚುನಾವಣೆಗೆ ಎರಡುದಿನದ ಹಿಂದೆ ಬಹಿರಂಗ ಪ್ರಚಾರ ಅಂತ್ಯವಾದರೂ 5 ಗಂಟೆ ನಂತರ ಅವರು ಚುನಾವಣಾ ಪ್ರಚಾರ ನಡೆಸಿದ್ದರು ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ದೂರು ದಾಖಲಿಸಿತ್ತು.

ಈ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆ ಕೂಡ ನಡೆಯುತ್ತಿತ್ತು.  ಎರಡು ಬಾರಿ ವಿಚಾರಣೆಗೂ ಹಾಜರಾಗುವಂತೆ ನ್ಯಾಯಾಲಯ ಅವರಿಗೆ ಸೂಚನೆ ನೀಡಿತ್ತು. ಆದರೆ ಅವರು ಒಮ್ಮೆ ಕೂಡ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದೆ.

ಇದನ್ನು ಓದಿ: ಬೆಳಗಾವಿಯಲ್ಲಿ ಎಪಿಎಂಸಿ ಚುನಾವಣೆ; ಮತ್ತೆ ಸ್ಫೋಟಗೊಳ್ಳಲಿದೆಯಾ ಹೆಬ್ಬಾಳ್ಕರ್, ಜಾರಕಿಹೊಳಿ ಬಣದ ಭಿನ್ನಮತ?

2013ರಲ್ಲಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ಭರ್ಜರಿ ಪ್ರಚಾರ ನಡೆಸಿದ್ದರು. ಆದರೆ  ಈ ಚುನಾವಣೆಯಲ್ಲಿ ಅವರು ಸೋಲನ್ನು ಅನುಭವಿಸಿದ್ದರು.
Loading...

2018ರ ವಿಧಾನಸಭಾ ಚುನಾವಣೆಯಲ್ಲಿಯೂ ಕೂಡ ಗ್ರಾಮೀಣ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಅವರು ಮತದಾರರ ಓಲೈಕೆಗಾಗಿ ಕುಕ್ಕರ್​, ಗಿಫ್ಟ್​ ಬಾಕ್ಸ್​ ಹಂಚಿದ್ದು ದೊಡ್ಡ ಸುದ್ದಿಯಾಗಿದ್ದರು. ಈ ಬಾರಿ ಚುನಾವಣೆಗೆದ್ದ ಅವರು ಮೊದಲ ಬಾರಿ ವಿಧಾನಸಭೆ ಮೆಟ್ಟಿಲೇರುವ ಅವಕಾಶವನ್ನು ಪಡೆದರು.

First published:October 12, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...