ಬೆಂಗಳೂರು (ಮೇ 13): ಬಿಜೆಪಿ ಮುಖಂಡ (BJP Leaders ) ಹಾಗೂ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ (B.J Puttaswamy) ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಲಂಕರಿಸಲು ಬ್ರೇಕ್ ಬಿದ್ದಿದೆ. ಇದರೊಂದಿಗೆ ಗಾಣಿಗ ಮಠದ (Ganiga matt) ಪೀಠಾಧಿಪತಿ ವಿವಾದಕ್ಕೆ ಹೊಸ ತಿರುವು ಸಿಕ್ಕಿದೆ. ಪುಟ್ಟಸ್ವಾಮಿ ಪೀಠಾರೋಹಣ ಮಾಡುವುದಕ್ಕೆ ಮಧ್ಯಂತರ ತಡೆಯಾಜ್ಞೆ (Interim Injunction) ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ (Court) ಮಧ್ಯಂತರ ಆದೇಶಿಸಿದೆ.
ಯಾವುದೇ ತಡೆ ಇಲ್ಲದೆ ಪೀಠಾರೋಹಣ ನಡೆಯುತ್ತೆ
ಪೀಠಾರೋಹಣಕ್ಕೆ ತಡೆಯಾಜ್ಞೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿ.ಜೆ ಪುಟ್ಟಸ್ವಾಮಿ, ಕೆಲ ಪತ್ರಿಕೆಗಳಲ್ಲಿ ಮುದ್ರವಾಗಿರುವುದಕ್ಕೂ ನ್ಯಾಯಾಲಯದ ಆದೇಶಕ್ಕೂ ಒಂದಕ್ಕೊಂದು ತಾಳೆ ಇಲ್ಲ ಎಂದ್ರು. ಪ್ರಸ್ತುತ ನ್ಯಾಯಾಲಯದ ಆದೇಶಕ್ಕೂ ಮುಂಚೆ, ಇದೇ ಮೇ. 6 ರಂದು ಶ್ರೀಕೈಲಾಸ ಆಶ್ರಮದಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದೆ, ವಿಶ್ವ ಗಾಣಿಗರ ಟ್ರಸ್ಟ್ ಸಂಸ್ಥಾಪಕ ಟ್ರಸ್ಟಿಯಾಗಿ ಮತ್ತು ಮ್ಯಾನೇಜಿಂಗ್ ಟ್ರಸ್ಟಿ ಆಗಿ 2011ರಲ್ಲೇ ಪದಗ್ರಹಣ ಮಾಡಿದ್ದೆ. ನ್ಯಾಯಾಲಯದ ಆದೇಶದಲ್ಲಿ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾರೋಹಣದ ಬಗ್ಗೆ ತಡೆಯಾಜ್ಞೆ ಎಂಬ ವಿಷಯ ಪ್ರಸ್ತಾಪ ಮಾಡಿಲ್ಲ.
ನಾಳೆ ಗಾಣಿಗರ ಮಹಾಸಂಸ್ಥಾನ ಮಠದಲ್ಲಿ ಕಾರ್ಯಕ್ರಮ
ಹೀಗಾಗಿ ಯಾವುದೇ ಅಡೆತಡೆ ಇಲ್ಲದೆ ನಾಳೆ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿಯಾಗಿ ಪೀಠಾರೋಹಣ ಮತ್ತು ಪಟ್ಟಾಭಿಷೇಕ ಸಮಾರಂಭ ನಡೆಯಲ್ಲಿದೆ ಎಂದ್ರು. ಜನಾಂಗದ ನನ್ನೆಲ್ಲಾ ಸಮುದಾಯ ಬಂಧುಗಳು, ಭಕ್ತರು ಅಭಿಮಾನಿಗಳು ಆಗಮಿಸಿ ಸಮಾರಂಭ ಯಶಸ್ವಿಗೊಳಿಸಿ ಎಂದು ಮನವಿ ಮಾಡಿದ್ರು.
ಇದನ್ನೂ ಓದಿ: Male Mahadeshwara Temple: 34 ದಿನಗಳಲ್ಲಿ 2 ಕೋಟಿಗೂ ಅಧಿಕ ನಗದು, 127 ಗ್ರಾಂ ಚಿನ್ನ, 3 ಕೆಜಿ ಬೆಳ್ಳಿ ಸಂಗ್ರಹ
ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಕೋರ್ಟ್ ಆದೇಶ
ಬಿ.ಜೆ. ಪುಟ್ಟಸ್ವಾಮಿ ಅವರು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿ ಸ್ಥಾನ ಅಧಿರೋಹಣ ಮಾಡದೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ, ಜೂ.13ಕ್ಕೆ ವಿಚಾರಣೆ ಮುಂದೂಡಿದೆ. ಅಲ್ಲದೆ, ಬಿ.ಜೆ.ಪುಟ್ಟಸ್ವಾಮಿ, ಅಖಿಲ ಕರ್ನಾಟಕ ಗಾಣಿಗ ಸಂಘದ ಆಡಳಿತಾಧಿಕಾರಿ ಎಂ.ಪಿ ಮಂಜುನಾಥ್ ಸೇರಿದಂತೆ ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್ನ 10 ಮಂದಿ ಟ್ರಸ್ಟಿಗಳು ಮತ್ತು ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ನ್ಯಾಯಾಲಯ ತುರ್ತು ನೋಟಿಸ್ ಜಾರಿ ಮಾಡಿದೆ.
ಗಾಣಿಗ ಸಮುದಾಯದ ಟ್ರಸ್ಟ್ ರಚನೆ ಕಾನೂನು ಬಾಹಿರ
ಅರ್ಜಿದಾರರ ಪರ ವಕೀಲರು, ವಿಶ್ವ ಗಾಣಿಗ ಸಮುದಾಯದ ಟ್ರಸ್ಟ್ ರಚನೆಯೇ ಕಾನೂನು ಬಾಹಿರವಾಗಿದೆ. ಹಾಗಾಗಿ, ಟ್ರಸ್ಟ್ ಚಟುವಟಿಕೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು. ಇದೇ 15ರಂದು ಬಿ.ಜೆ.ಪುಟ್ಟಸ್ವಾಮಿ ಅವರು ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಮೊದಲ ಪೀಠಾಧಿಪತಿಯಾಗಿ ಅಧಿಕಾರ ಸ್ವೀಕರಿಸುವುದಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದರು.
ಮೇ 6ಕ್ಕೆ ಸನ್ಯಾಸ ದೀಕ್ಷೆ ಸ್ವೀಕರಿಸಿದ ಪುಟ್ಟಸ್ವಾಮಿ
ಇದೇ ಮೇ 4ರಂದು ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ, 5 ದಶಕಗಳ ಸುದೀರ್ಘ ಸಾಮಾಜಿಕ ಹಾಗೂ ರಾಜಕೀಯ ಜೀವನದಲ್ಲಿ ನಡೆಸಿದ್ದೇನೆ ಎಂದು ಹೇಳಿಕ ಲೌಖಿಕ ಜೀವನ ತ್ಯಜಿಸಿ ಮೇ 6ಕ್ಕೆ ಸನ್ಯಾಸ ದೀಕ್ಷೆ ಸ್ವೀಕರಿಸುವುದಾಗಿ ಹೇಳಿದ್ದರು. ಮೇ 15 ರಂದು ಮಾದನಾಯ್ಕನಹಳ್ಳಿಯಲ್ಲಿ ಇರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪೀಠಾಧಿಪತಿಯಾಗಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಕೈಲಾಸ ಮಠದ ಜಯತೀರ್ಥ ಸ್ವಾಮೀಜಿಗಳು ಪಟ್ಟಾಭಿಷೇಕ ಮಹೋತ್ಸವ ನೆರವೇರಿಸಿಕೊಡಲಿದ್ದಾರೆಂದು ತಿಳಿಸಿದ್ದರು.
ಇದನ್ನೂ ಓದಿ: Accused Arrest: ಕೊನೆಗೂ ಸಿಕ್ಕಿಬಿದ್ದ ಆ್ಯಸಿಡ್ ನಾಗ; ಆಶ್ರಮದಲ್ಲಿ ಸ್ವಾಮೀಜಿ ವೇಷ ಧರಿಸಿ ಅಡಗಿ ಕುಳಿತ್ತಿದ್ದ ಆರೋಪಿ
ಎನ್. ರಾಜು, ರಂಗಸ್ವಾಮಿ, ಎಂ.ಪಿ. ಹೇಮಾವತಿ, ಟಿ.ಎಂ.ಸಿ ಯತೀಶ್ ಕುಮಾರ ಹಾಗೂ ಗೋವಿಂದರಾಜು ಮತ್ತಿತರರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ಮಾಡಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ