Bengaluru: ಬೆಂಗಳೂರಲ್ಲೂ ಡೆಂಗ್ಯೂ, ಕೊರೋನಾ ಪ್ರಕರಣ ಹೆಚ್ಚಳ!

ರಾಜಧಾನಿ ಬೆಂಗಳೂರಿನಲ್ಲಿಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ.

ಕೊರೋನಾ ವೈರಸ್

ಕೊರೋನಾ ವೈರಸ್

  • Share this:
ಬೆಂಗಳೂರು(ಜೂ.14): ಕೋವಿಡ್‌ ಮತ್ತು ಡೆಂಗ್ಯೂ (Dengue) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೇಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ (Dr. K. Sudhakar)‌ ಹೇಳಿದ್ದಾರೆ.ಕೋವಿಡ್‌ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜಧಾನಿ ಬೆಂಗಳೂರಿನಲ್ಲಿ (Bengaluru) ಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಇತರೆ ಕಾಯಿಲೆಗಳಿಂದ ಬಳಲುತ್ತಿರುವ ಹಿರಿಯ ನಾಗರೀಕರು ಬೂಸ್ಟರ್‌ ಡೋಸ್‌ ಪಡೆದುಕೊಳ್ಳಬೇಕು. ಹಾಗೆಯೇ ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಜತೆಗೆ ಕೋವಿಡ್‌ ನಿಯಂತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಬೇಕು, ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿ ಇಡಲು ಸಾಧ್ಯವಿದೆ ಎಂದರು.ಇಲಾಖೆಯು ಟೆಸ್ಟ್‌ಗಳ ಸಂಖ್ಯೆಯನ್ನು ಹೆಚ್ಚಿಸಿದೆ.

ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ

ಇದು ಸಹ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗಲು ಕಾರಣವಿರಬಹುದು. ಆದರೆ ರೋಗ ಲಕ್ಷಣ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲು ಆಗುವ ಪ್ರಕರಣಗಳು ತೀರಾ ಕಡಿಮೆ. ಇದನ್ನು ನಾಲ್ಕನೇ ಅಲೆ ಎಂದು ಹೇಳಲು ಆಗುವುದಿಲ್ಲ, ಸದ್ಯ ಅಲೆಗಳ ಪ್ರಶ್ನೆ ಉದ್ಭವಿಸಿಲ್ಲ ಎಂದರು.ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ.

ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ

ಅದರ ಜತೆ ಡೆಂಗಿ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣಿಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.ಬೆಂಗಳೂರು ಮೆಡಿಕಲ್‌ ಕಾಲೇಜಿನಲ್ಲಿ ಜಿನೋಮಿಕ್‌ ಸಿಕ್ವೆನ್ಸಿಂಗ್‌ ಲ್ಯಾಬ್‌ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ.

ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು. ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಮಂಗಳವಾರ ತಾವು ಮೈಸೂರಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಸಚಿವರು, ಯೋಗಾದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್‌ ಅವರ ಜತೆ ಪರಿಶೀಲನೆ ನಡೆಸುವುದಾಗಿಯೂ ಸಚಿವ ಸುಧಾಕರ್‌ ತಿಳಿಸಿದರು.

ಈ ನೆಲದ ಕಾನೂನು ಗೌರವಿಸಲೇಬೇಕುಪ್ರತಿಭಟನೆ ಹೆಸರಿನಲ್ಲಿ ದಾಂಧಲೆ ಸರಿಯಲ್ಲ :

ಸಚಿವ ಸುಧಾಕರ್ ಪ್ರತಿಭಟನೆ ಹೆಸರಿನಲ್ಲಿ ಕಾಂಗ್ರೆಸ್‌ ನಾಯಕರು ಈ ನೆಲದ ಕಾನೂನನ್ನು ಧಿಕ್ಕರಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪ್ರೀತಿಯಿಂದ ಬೆಳೆದಿದ್ದ ಶಿಬಿರವನ್ನು 400 ಕಿಲೋ ಮೀಟರ್ ದೂರದಿಂದ ಹುಡುಕಿ ಬಂದ ಕುಶ ಆನೆ

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕರೆಯುವುದೇ ತಪ್ಪಾ? ಉನ್ನತ ಸ್ಥಾನದಲ್ಲಿ ಇದ್ದವರಿಗೆ ಒಂದು ಕಾನೂನು ಶ್ರೀಸಾಮಾನ್ಯನಿಗೆ ಮತ್ತೊಂದು ಕಾನೂನು ಇಲ್ಲ. ಕಾನೂನಿನ ಕಣ್ಣಿನಲ್ಲಿ ಎಲ್ಲರೂ ಒಂದೇ ಎಂಬ ಸಾಮಾನ್ಯ ಜ್ಞಾನ ಅವರಿಗೆ ಇದ್ದಂತಿಲ್ಲ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.ಈ ನೆಲದ ಕಾನೂನು ಗೌರವಿಸುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಮತ್ತು ಜವಾಬ್ದಾರಿ. ಇದನ್ನು ಉನ್ನತ ಸ್ಥಾನಗಳನ್ನು ಅಲಂಕರಿಸಿರುವವರು ಪಾಲಿಸುವ  ಮೂಲಕ ಮೇಲ್ಪಂಕ್ತಿ ಹಾಕಿಕೊಡಬೇಕು.

ಅದನ್ನು ಬಿಟ್ಟು ಅವರೇ ಕಾನೂನು ಉಲ್ಲಂಘನೆ ಮಾಡುವ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ ಎಂದು ಆರೋಪಿಸಿದರು.ಈ ಹಿಂದೆ ಪ್ರಧಾನಿ ಹುದ್ದೆ ಅಲಂಕರಿಸಿದ್ದವರೇ ವಿಚಾರಣೆಗಳಿಗೆ ಹಾಜರಾಗಿದ್ದ ನಿದರ್ಶನಗಳಿವೆ. ಪ್ರತಿಭಟಿಸಿದ ಕಾಂಗ್ರೆಸ್‌ ನಾಯಕರು ಅದನ್ನು ಮರೆತಂತಿದೆ.  ಯಾವುದೇ ಸಂವಿಧಾನಬದ್ಧ  ಹುದ್ದೆಗಳನ್ನೂ ಅಲಂಕರಿಸದವರೇ ಕಾನೂನು ಗೌರವಿಸುವುದಿಲ್ಲ ಎಂದರೆ ಹೇಗೆ? ಇದು ಕಾಂಗ್ರೆಸ್ಸಿಗರ ಸಂಸ್ಕೃತಿ ಮತ್ತು ಮನೋಭಾವ.

ಇದನ್ನೂ ಓದಿ: ಇಂಡಸ್ಟ್ರಿಗಳ ವಿಷಪೂರಿತ ನೀರು ಕೆರೆಗೆ! 2,000 Kgಗೂ ಹೆಚ್ಚು ಮೀನು ಸೇರಿ ಹಲವು ಜಲಚರಗಳ ಸಾವು

ಕಾಂಗ್ರೆಸ್ಸಿಗರಲ್ಲಿ ದೊಡ್ಡವರಿಗೊಂದು ಜನಸಾಮಾನ್ಯರಿಗೆ ಒಂದು ಕಾನೂನು ಮಾಡುವ ಯೋಚನೆ ಹೊಂದಿದ್ದರೂ ಇರಬಹುದು ಎಂದು ಲೇವಡಿ ಮಾಡಿದರು.ಪ್ರತಿಭಟನೆ ಹೆಸರಿನಲ್ಲಿ ಇಂದು ಕಾಂಗ್ರೆಸ್‌ ಮುಖಂಡರು ನಡೆಸಿರುವ ದಾಂಧಲೆಯಿಂದ ನಗರದಲ್ಲಿಸಾರ್ವಜನಿಕರ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದೆ. ಫ್ರೀಡಂಪಾರ್ಕಿನ ಬಳಿ ಅನುಮತಿ ಪಡೆದು ಪ್ರತಿಭಟನೆ ನಡೆಸಬೇಕು ಎಂಬ ಕೋರ್ಟ್‌ ನಿರ್ದೇಶನವನ್ನೂ ಉಲ್ಲಂಘಿಸಿದ್ದಾರೆ. ಸರ್ಕಾರ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನದೇ ಆದ ಕ್ರಮ ಜರುಗಿಸಲಿದೆ ಎಂದರು.
Published by:Divya D
First published: